-ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವುದು ನಮ್ಮ ಗುರಿ- ವಿಶೇಷ ಚೇತನರಿಗೆ ಹೆಚ್ಚು ಒತ್ತು ನೀಡಿ – ಕೆ. ಆರ್. ನಂದಿನಿ
ಪಾಲನೆ ನ್ಯೂಸ್
ಫೆಬ್ರವರಿ 21 ರಂದು ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಹಮ್ಮಿಕೊಳ್ಳಲಾಗಿರುವ ಜಿಲ್ಲಾ ಮಟ್ಟದ ಉದ್ಯೋಗ ಮೇಳ ದಲ್ಲಿ ಎಲ್ಲಾ ವರ್ಗದ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವುದು ಮತ್ತು ವಿಶೇಷವಾಗಿ ವಿಶೇಷ ಚೇತನರಿಗೆ ಉದ್ಯೋಗವನ್ನು ಕಲ್ಪಿಸಲು ಅಗತ್ಯ ಕ್ರಮಗಳನ್ನು ಮಾಡಿಕೊಳ್ಳಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಕೆ ಆರ್ ನಂದಿನಿ ಅವರು ಹೇಳಿದರು.
ಕೌಶಲ್ಯಭಿವೃದ್ಧಿ, ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ, ದೀನ್ ದಯಾಳ್ ಅಂತ್ಯೋದಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಮಂಡ್ಯ ವಿಶ್ವವಿದ್ಯಾನಿಲಯದ ಸಹಾಭಾಗಿತ್ವದಲ್ಲಿ “ಜಿಲ್ಲಾಮಟ್ಟದ ಉದ್ದೋಗ ಮೇಳ – 2026 ” ವನ್ನು ಕಲಾಭವನದಲ್ಲಿ ಫೆಬ್ರವರಿ 21 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ವರಗೆ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದು ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಪೂರ್ವಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಶೇಷ ಚೇತನ ಅಭ್ಯರ್ಥಿಗಳನ್ನು ಗುರುತಿಸಿ ವಿಶೇಷ ಚೇತನ ಅಭ್ಯರ್ಥಿಗಳಿಗಾಗಿ ನಿಗಧಿಪಡಿಸಿರುವ “ವಿಶೇಷ ಕೊಠಡಿ”ಯಲ್ಲಿ ಸಂದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.
ತಾಲ್ಲೂಕುವಾರು ವ್ಯಾಪ್ತಿಯಲ್ಲಿ ಉದ್ಯೋಗ ಮೇಳ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳುಬೇಕು.ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ಶಿಷ್ಟಾಚಾರದಂತೆ ಆಹ್ವಾನಿಸಬೇಕು ಎಂದು ಹೇಳಿದರು.
ಉದ್ಯೋಗ ಮೇಳ ಕುರಿತು ಜನ ಪ್ರತಿನಿಧಿಗಳ ವೀಡಿಯೋ/ಆಡಿಯೋ ಸಂದೇಶಗಳನ್ನು ಚಿತ್ರೀಕರಿಸಿ, ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸ್ವಚ್ಛ ವಾಹಿನಿ ವಾಹನಗಳ (ಗ್ರಾಮೀಣ ಮತ್ತು ನಗರ ಪ್ರದೇಶ) ಮೂಲಕ ವ್ಯಾಪಕ ಪ್ರಚಾರ ಮಾಡಬೇಕುಎಂದು ತಿಳಿಸಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಹಾಗೂ ಹೆಚ್ಚಿನ ಜನ ಸಂದಣಿ ಇರುವ ಪ್ರದೇಶಗಳಲ್ಲಿ ಬ್ಯಾನರ್, ಪೋಸ್ಟರ್ ಗಳನ್ನು ಅಳವಡಿಸಬೇಕು. 18 ವರ್ಷ ಮೇಲ್ಪಟ್ಟ ಪುರುಷ, ಮಹಿಳಾ, ತೃತೀಯ ಲಿಂಗಿಗಳು ಹಾಗೂ ವಿಶೇಷ ವರ್ಗ, ವಿಶೇಷಚೇತನ ಅಭ್ಯರ್ಥಿಗಳು ಭಾಗವಹಿಸಬಹುದು.
ಉದ್ಯೋಗದಾತ ಸಂಸ್ಥೆಗಳ ನೋಂದಣಿ ಮತ್ತು ನಿರ್ವಹಣಾ ಸಮಿತಿಯು ವಿವಿಧ ವಲಯಗಳ ಉದ್ಯೋಗದಾತ ಸಂಸ್ಥೆಗಳನ್ನು ಸಂಪರ್ಕಿಸಿ, ನೋಂದಾಯಿಸಿಕೊಳ್ಳಬೇಕು ಉದ್ಯೋಗದಾತ ಸಂಸ್ಥೆಗಳಿಗೆ ಅಗತ್ಯವಿರುವ ಅಭ್ಯರ್ಥಿಗಳ ವಿದ್ಯಾರ್ಹತೆ ವಿವರಗಳನ್ನು ಸಂಗ್ರಹಿಸಬೇಕು ಎಂದು ಹೇಳಿದರು.

ತಾಲ್ಲೂಕುವಾರು ಎಲ್ಲಾ ಸಂಜೀವಿನಿ ಸಿಬ್ಬಂದಿಗಳು ಎಲ್ಲಾ ಶಿಕ್ಷಣ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು ಅಭ್ಯರ್ಥಿಗಳ ನೋಂದಣಿ ಮಾಡಬೇಕು
ಉದ್ಯೋಗ ಮೇಳದಲ್ಲಿ ಭಾಗವಹಿಸುವ ಉದ್ಯೋಗದಾತ ಸಂಸ್ಥೆಗಳ ಪಟ್ಟಿ ಸಂಗ್ರಹಿಸಿ ನೋಂದಣಿಯಿಸಬೇಕು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಅಲ್ಪ ಸಂಖ್ಯಾಂತರು, ವಿಶೇಷ ಚೇತನರು, ಲೈಂಗಿಕ ಅಲ್ಪಸಂಖ್ಯಾಂತರು, ವಿಶೇಷ ವರ್ಗದ ನಿರುದ್ಯೋಗಿಗಳಿಗೆ ನೋಂದಾಯಿಸಿಕೊಳ್ಳುವಂತೆ ತಿಳಿಸಿದರು.
ಹಾಗೂ ಉದ್ಯೋಗ ಮೇಳ ದಿನದಂದು ಬೆಳಿಗ್ಗೆ 9.00 ಗಂಟೆಗೆ ಅಭ್ಯರ್ಥಿಗಳು ಮಂಡ್ಯ ವಿಶ್ವ ವಿದ್ಯಾಲಯ ಆವರಣದಲ್ಲಿ ಹಾಜರಾಗುವಂತೆ ತಿಳಿಸಿದರು.
ಉದ್ಯೋಗ ಮೇಳದಂದು ನೋಂದಣಿ ಕೌಂಟರ್ ಮತ್ತು ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಬೇಕು ಉದ್ಯೋಗದಾತ ಸಂಸ್ಥೆಗಳಿಗೆ, ಅಭ್ಯರ್ಥಿಗಳಿಗೆ ಪ್ರತ್ಯೇಕ ಕೌಂಟರ್ ನಿರ್ಮಿಸಿ ನೀರು ಮತ್ತು ಊಟದ ವ್ಯವಸ್ಥೆ ಕಲ್ಪಿಸಬೇಕು ಸಂದರ್ಶನ ಕೊಠಡಿಗಳಲ್ಲಿ ಚೇರ್ ಟೇಬಲ್ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.
ಸಂದರ್ಶನ ಕೊಠಡಿಗಳನ್ನು ಸ್ವಚ್ಛಗೊಳಿಸಲು ಅಗತ್ಯ ಡಿ ಗ್ರೂಪ್ ಸಿಬ್ಬಂದಿಗಳನ್ನು ನಿಯೋಜಿಸುವುದು ಸಂದರ್ಶನ ಕೊಠಡಿಗಳ ಬಗ್ಗೆ ಅಭ್ಯರ್ಥಿಗಳ ಮಾರ್ಗದರ್ಶನಕ್ಕಾಗಿ ಬ್ಯಾನರ್ ಗಳನ್ನು ಅಳವಡಿಸಬೇಕು ಎಂದು ಹೇಳಿದರು.
ವೇದಿಕೆ ಕಾರ್ಯಕ್ರಮಕ್ಕೆ ಶಿಷ್ಠಾಚಾರದನ್ವಯ ಅಗತ್ಯ ವ್ಯವಸ್ಥೆ ಕಲ್ಪಿಸಿ ವೇದಿಕೆ ಕಾರ್ಯಕ್ರಮ ನಂತರ ಸ್ವ-ಉದ್ಯೋಗ ಕುರಿತು ತಜ್ಞರಿಂದ ಉಪಾನ್ಯಾಸವನ್ನು ಏರ್ಪಡಿಸಬೇಕು ಎಂದು ಸೂಚಿಸಿದರು.
ಸ್ವಚ್ಛ ವಾಹಿನಿ ವಾಹನಗಳೊಂದಿಗೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ ಶುಚಿತ್ರ ಮತ್ತು ನೈರ್ಮಲ್ಯ ಕಾಪಾಡಬೇಕು ಹಾಗೂ ಉದ್ಯೋಗ ಮೇಳ ದಿನದಂದು ಅಗತ್ಯ ವೈದ್ಯಕೀಯ ಸೌಲಭ್ಯಗಳೊಂದಿಗೆ ಸಿಬ್ಬಂದಿಗಳನ್ನು ನೇಮಿಸಬೇಕು ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಿಳಿಸಿದರು.
ಉದ್ಯೋಗ ಆಕಾಂಕ್ಷಿಗಳು ಆಧಾರ್ ಕಾರ್ಡ್ ಮತ್ತು ಫೋಟೋ ಅರ್ಹತಾ ಅಂಕ ಪಟ್ಟಿಯನ್ನು ತರಬೇಕು.ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ನೊಂದಾಯಿಸಿಕೊಂಡವರಿಗೆ ಊಟದ ಟೋಕನ್ ಅನ್ನು ನೀಡಬೇಕು
ಸಭೆಯಲ್ಲಿ ಸಮಾಜಕಲ್ಯಾಣ ಇಲಾಖೆಯ ಶ್ರೀನಿವಾಸ್, ಕೃಷಿ ಇಲಾಖೆ ಅಧಿಕಾರಿ ಹರ್ಷ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಆಶಾ, ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ. ಸೋಮಶೇಖರ್, ಕೌಶಲ್ಯ ಅಭಿವೃದ್ಧಿ ಅಧಿಕಾರಿ ನಾಗನಂದ್ ರವರು ಕಾರ್ಯಕ್ರಮ ದಲ್ಲಿ ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
