ಪಾಲನೆ ನ್ಯೂಸ್
ಮಂಡ್ಯ: ಫೆಬ್ರುವರಿ 21 ರಂದು ಮಂಡ್ಯ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿರುವ ಉದ್ಯೋಗ ಮೇಳದ ಅಂಗವಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಚಲುವರಾಯಸ್ವಾಮಿ ಅವರು ಉದ್ಯೋಗ ಮೇಳದ ಪೋಸ್ಟರ್ ಅನ್ನು ಇಂದು ಮದ್ದೂರು ಪ್ರವಾಸಿ ಮಂದಿರದಲ್ಲಿ ಬಿಡುಗಡೆ ಮಾಡಿದರು.
ಈ ಉದ್ಯೋಗ ಮೇಳದಲ್ಲಿ ವಿವಿಧ ಕಂಪನಿಗಳು ಭಾಗವಹಿಸಲಿವೆ. ಜಿಲ್ಲೆಯ ಯುವಕ-ಯುವತಿಯರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಮದ್ದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕೆ. ಎಂ. ಉದಯ, ಜಿಲ್ಲಾಧಿಕಾರಿಗಳಾದ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೆ. ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಶೋಭಾ ರಾಣಿ, ಮದ್ದೂರು ತಹಸೀಲ್ದಾರ್ ಪರುಶರಾಮ್ ಸತ್ತಿಗೇರಿ ಹಾಗೂ ಇತರರು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
