ಪಾಲನೆ ನ್ಯೂಸ್
ಬೆಂಗಳೂರು : ಕೆಎಸ್‌ಆರ್‌ಟಿಸಿ ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಹಾಗೂ ವೇತನ ಪರಿಷ್ಕರಣೆ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ವಿಜಯೇಂದ್ರ ಅವರು ಬುಧವಾರ ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ. ಬೇಡಿಕೆ ನ್ಯಾಯಯುತವಾಗಿದೆ. ರಾಜ್ಯ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು 38 ತಿಂಗಳಿಂದ ವೇತನ ಹಿಂಬಾಕಿ ಪಡೆಯದೆ ಸಂಕಷ್ಟದ ಜೀವನ ನಡೆಸುತ್ತಿರುವುದು ಅತ್ಯಂತ ವಿಷಾ ದನೀಯ. 2024ರ ಜ.1ರಿಂದ ಜಾರಿಗೆ ಬರಬೇಕಿದ್ದ ವೇತನ ಪರಿಷ್ಕರಣೆ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದ್ದು ಕಾರ್ಮಿಕ ವಿರೋಧಿ ಧೋರಣೆಗೆ ಸ್ಪಷ್ಟ ಉದಾಹರಣೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ಮದ್ದೂರ್ ಸಂಘ ಒಕ್ಕೂಟ ಕೈಗೊಂಡಿರುವ ಅಸಹಕಾರ ಚಳವಳಿ ಸಂಪೂರ್ಣ ನ್ಯಾಯಸಮ್ಮತ. ಬಿಜೆಪಿ ಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ತಿಳಿಸಿದ್ದಾರೆ. ನಿರ್ಲಕ್ಷ್ಯ ಸಲ್ಲ: ರಾಜ್ಯ ಸರ್ಕಾರವು ಕಾರ್ಮಿ 3 ಕರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸು ತ್ತಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಇದು ಸಾಮಾಜಿಕ ನ್ಯಾಯದ ಮೇಲಿನ ಅವ ಮಾನವೂ ಹೌದು.

ಕಾರ್ಮಿಕರ ಸಹನೆಗೆ ಮಿತಿ ಇದೆ ಎಂಬುದನ್ನು ಸರ್ಕಾರಮನಗಾಣಬೇಕು. ತಕ್ಷಣ 38 ತಿಂಗಳ ವೇತನ ಹಿಂಬಾಕಿ ಬಿಡುಗಡೆ ಮಾಡದೆ ಮತ್ತು ವೇತನ ಪರಿಷ್ಕರಣೆ ಜಾರಿಗೊಳಿಸದಿದ್ದಲ್ಲಿ, ಈ ಹೋರಾಟ ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಸರ್ಕಾರ ಗಮನ ದಲ್ಲಿಡಬೇಕು ಎಂದು ಎಚ್ಚರಿಸಿದ್ದಾರೆ. ಸರ್ಕಾರ ಇನ್ನಷ್ಟು ವಿಳಂಬ ಮಾಡದೆ ತಕ್ಷಣ ಕ್ರಮ ಕೈಗೊಂಡು, ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

