ಪಾಲನೆ ನ್ಯೂಸ್
ಮೈತ್ರಿ ಚರ್ಚೆ 4 ಗೋಡೆ ನಡುವೆ ಇರಬೇಕು.ಜೆಡಿಎಸ್ ಯುವ ಘಟಕ ಅಧ್ಯಕ್ಷ ಕನ್ನಡಪ್ರಭ ವಾರ್ತೆ ಬೆಂಗಳೂರು ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚೆ ನಾಲ್ಕು ಗೋಡೆ ಗಳ ನಡುವೆ ಇರಬೇಕೇ ಹೊರತು ಹಾದಿ-ಬೀದಿಯಲ್ಲಿ ಚರ್ಚೆ ಆಗಬಾರದು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷನಿಖಿಲ್ ಕುಮಾರಸ್ವಾಮಿ ತೀಕ್ಷವಾಗಿ ಹೇಳಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತ ನಾಡಿ, ಈ ವಿಚಾರಗಳು ನಾಲ್ಕು ಗೋಡೆಗಳ ಒಳಗೆ ಚರ್ಚೆಯಾ ಗಬೇಕು. ಹಾದಿ ಬೀದಿ ‘ಯಲ್ಲಿ ಚರ್ಚಿಸಿ ಇತ್ಯರ್ಥವಾಗುವ ವಿಚಾರ ವಲ್ಲ. ಲೋಕಸಭಾ ಚುನಾವಣೆಯಿಂದಲೂ ಎರಡೂ ಪಕ್ಷ ಗಳ ಮೈತ್ರಿ ಇದೆ. ಅಂದಿನಿಂದಲೂ ನಮ್ಮನ್ನು ಗೌರವ ದಿಂದ ನೋಡಿಕೊಂಡಿ ದ್ದಾರೆ ಎಂದರು. ಕೆಲವರು ಪ್ರಚಾರಕ್ಕಾಗಿ ಮಾತು: ಕೆಲ ಬಿಜೆಪಿಗರಿಂದ ಮೈತ್ರಿ ಮುರಿಯುವ ಹೇಳಿಕೆ ಬಗ್ಗೆ ಪ್ರಶ್ನೆಗೆ, ನಾವು ಮೈತ್ರಿ ಧರ್ಮವನ್ನು ಅತ್ಯಂತ ಗೌರವದಿಂದ ಪಾಲಿಸುತ್ತಿದ್ದೇವೆ. ನಮ್ಮ ಮೈತ್ರಿಗೆ ಬಿಜೆಪಿ ಹೈಕಮಾಂಡ್ ಮಾರ್ಗದರ್ಶನ ಇದೆ.

ಬಿಜೆಪಿ ಆಥವಾ ಜೆಡಿಎಸ್‌ನ ಯಾರೇ ಆಗಿರಲಿ ಹೊರಗೆ ಮಾತನಾಡಬಾರದು. ಎರಡು ಜಿಲ್ಲೆಗಳಲ್ಲಿ ಮೈತ್ರಿ ವಿಚಾರದ ಸಮಸ್ಯೆ ಉದ್ಭವವಾಗಿದೆ. ಅಲ್ಲಿನ ಮೂರ್ನಾಲ್ಕು ಜನ ಪ್ರಚಾರಕ್ಕೆ ಮಾತನಾಡಿದ್ದಾರೆ ಎಂದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಎನ್ನುವುದಕ್ಕಿಂತ ಎನ್‌ಡಿಎ 140ರಿಂದ 150 ಸ್ಥಾನ ಗೆಲ್ಲಲಿದೆ. ನಾವು ಮೈತ್ರಿ ಧರ್ಮ ಪಾಲಿಸುತ್ತೇವೆ. ಲೋಕ ಸಭೆ ಗೆದ್ದಂತೆ ವಿಧಾನ ಸಭೆ ಚುನಾವಣೆಯಲ್ಲಿ ಗೆದ್ದು ದಾಖಲೆ ಸೃಷ್ಟಿಸುತ್ತೇವೆ ಎಂದರು. ನಾವೆಲ್ಲೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ: ಪ್ರಶ್ನೆಯೊಂದಕ್ಕೆ ಉತ್ತರಿಸಿದ ನಿಖಿಲ್, ನಾವೆಲ್ಲೂ ಅಭ್ಯರ್ಥಿಗಳನ್ನು ಘೋಷಿಸಿಲ್ಲ.
ಕೆ. ಆರ್.ಪೇಟೆಯಲ್ಲಿ ನೀವು ಈಗಾಗಲೇ ಶಾಸಕರಾಗಿದ್ದೀರಿ. ಮತ್ತೆ ಆರಿಸಿ ಬರುವುದಕ್ಕೆ ಜನರ ಪ್ರೀತಿ ವಿಶ್ವಾಸ ಗಳಿಸಿ ಮಂಜಣ್ಣ ಅಂದಿದ್ದೆ. ಆದರೆ, ನನ್ನ ಹೇಳಿಕೆ ತಿರುಚಿದ್ದಾರೆ. ಅಭ್ಯರ್ಥಿಗಳನ್ನು ಘೋಷಿಸಲು ನಾನು ಯಾರು? ನಾನು ಜನರ ವಿಶ್ವಾಸ ಉಳಿಸಿಕೊಂಡು ಹೋಗಿ ಅಂತ ಹೇಳುವುದರಲ್ಲಿ ತಪ್ಪೇನಿದೆ ಎಂದರು.
ಜಿಪಂ ಮತ್ತು ತಾಪಂ ಚುನಾವಣೆಗೆ ಮೈತ್ರಿ ಇರುತ್ತಾ ಎಂಬ ಪ್ರಶ್ನೆಗೆ, ಈ ವಿಚಾರ ಇನ್ನೂ ಎರಡೂ ಪಕ್ಷಗಳ ಚೌಕ ಟ್ಟಿನಲ್ಲಿ ಚರ್ಚೆಗೆ ಬಂದಿಲ್ಲ. ಮೊದಲು ಈ ಚುನಾವಣೆಗಳು ನಡೆಯುತ್ತಾ ಇಲ್ವಾ ಅನ್ನೋದೇ ಗೊತ್ತಿಲ್ಲ. ಕಾರ್ಯಕರ್ತರ ಹಿತದೃಷ್ಟಿ ಮುಂದಿಟ್ಟುಕೊಂಡು ಮೈತ್ರಿಯಾಗಿ ಅಥವಾ ಪಕ್ಷವಾಗಿ ಹೋಗಬೇಕಾ ಎಂಬುದು ಮುಂದಿನ ದಿನಗಳಲ್ಲಿ ತೀರ್ಮಾನವಾಗಲಿದೆ ಎಂದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
