ಪಾಲನೆ ನ್ಯೂಸ್
ಮಂಡ್ಯ: ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ‘ಬೂದನೂರು ಉತ್ಸವ’ದ ಅಂಗವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ಮಹಿಳೆಯರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ವಿಶೇಷ ರಂಗೋಲಿ ಸ್ಪರ್ಧಾ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.
ಕರ್ನಾಟಕ ಸರ್ಕಾರದ ‘ಪಂಚ ಗ್ಯಾರಂಟಿ’ ಯೋಜನೆಗಳ ಕುರಿತು ರಂಗೋಲಿಯಲ್ಲಿ ಅತ್ಯುತ್ತಮ ಚಿತ್ರ ಬಿಡಿಸಿದ ಮಹಿಳೆಯರಿಗೆ ಸನ್ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ವೈಯಕ್ತಿಕವಾಗಿ ಈ ಕೆಳಗಿನಂತೆ ನಗದು ಬಹುಮಾನಗಳನ್ನು ಘೋಷಿಸಿದ್ದಾರೆ:

ಘೋಷಿತ ನಗದು ಬಹುಮಾನಗಳು:
• ಪ್ರಥಮ ಬಹುಮಾನ: ₹15,000/-
• ದ್ವಿತೀಯ ಬಹುಮಾನ: ₹10,000/-
• ತೃತೀಯ ಬಹುಮಾನ: ₹5,000/-
ಅಲ್ಲದೆ, ಈ ಕಾರ್ಯಕ್ರಮವು ಅತ್ಯುತ್ತಮವಾಗಿ ನಡೆಯಲೆಂದು ಉಪಮುಖ್ಯಮಂತ್ರಿಗಳು ಶುಭ ಹಾರೈಸಿದ್ದು, ಈ ನಗದು ಬಹುಮಾನಗಳನ್ನು ವಿಜೇತ ಮಹಿಳೆಯರಿಗೆ ವಿತರಿಸುವಂತೆ ಶಾಸಕರಾದ ರವಿಕುಮಾರ್ ಗಣಿಗ ತಿಳಿಸಿದ್ದಾರೆ.
ವಂದನೆಗಳೊಂದಿಗೆ,
ರವಿಕುಮಾರ್ ಗಣಿಗ, ಶಾಸಕರು, ಮಂಡ್ಯ ವಿಧಾನಸಭಾ ಕ್ಷೇತ್ರ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
