NEWS

ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನ ವಿತರಣೆ – ಪಿ ರವಿಕುಮಾರ್

ಪಾಲನೆ ನ್ಯೂಸ್

ಮಂಡ್ಯ:‌ ಬೂದನೂರು ಉತ್ಸವ ಪ್ರಯುಕ್ತ 30 ಗ್ರಾಮಗಳಲ್ಲಿ ರಂಗೋಲಿ ಸ್ಪರ್ಧೆಯನ್ನು ಆಯಾಯಾ ಗ್ರಾಮಗಳಲ್ಲಿ ಏರ್ಪಡಿಸಲಾಗಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಸಮಾಧಾನಕರ ಬಹುಮಾನವನ್ನು ವಿತರಿಸಲಾಗುವುದು ಮತ್ತು ಪ್ರತಿಯೊಂದು ಗ್ರಾಮಕ್ಕೂ ಪ್ರಥಮ,ದ್ವಿತೀಯ,ತೃತೀಯ ಬಹುಮಾನಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಶಾಸಕರಾದ ಪಿ ರವಿಕುಮಾರ್ ರವರು ಹೇಳಿದರು.

ಬೂದನೂರು ಉತ್ಸವ 2026ರ ಪ್ರಯುಕ್ತ ಬೂದನೂರು ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ರಂಗೋಲಿ ಸ್ಪರ್ಧೆಯಲ್ಲಿ ಬಿಡಿಸಿರುವ ರಂಗೋಲಿಗಳನ್ನು ವೀಕ್ಷಣೆ ಮಾಡಿ ಮಾತನಾಡಿ ಬೂದನೂರು ಗ್ರಾಮದ ರಂಗೋಲಿ ಸ್ಪರ್ಧೆಯಲ್ಲಿ ವಿವಿಧ ರೀತಿಯ ರಂಗೋಲಿಗಳಾದ ಕಾಂತಾರ, 3D ರಂಗೋಲಿ ಮತ್ತು ಗೃಹಲಕ್ಷ್ಮಿ ಯೋಜನೆಯ ಕುರಿತು ಮಾಹಿತಿ ನೀಡುವಂತಹ ವಿವಿಧ ರೀತಿಯಲ್ಲಿ ರಂಗೋಲಿಯನ್ನು ಬಿಡಿಸಿರುವುದನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಕುಮಾರ, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಕೆ.ಆರ್ ನಂದಿನಿ, ಉಪ ವಿಭಾಗ ಅಧಿಕಾರಿಯಾದ ಶಿವಮೂರ್ತಿ, ಮಂಡ್ಯ ತಹಸಿಲ್ದಾರ್ ವಿಶ್ವನಾಥ್ ಇನ್ನಿತರರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ನಕಲಿ ಪಿಐಡಿ ; 5 ಕೋಟಿ ರೂ. ಲಂಚದ ಆರೋಪ!

ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ

ಕಬ್ಬು ಬೆಳೆಗಾರರಿಗೆ ಅನುದಾನ ತಕ್ಷಣ ಬಿಡುಗಡೆಗೆ ಜಿಲ್ಲಾಧಿಕಾರಿ ಸೂಚನೆ

Leave a Comment