ಪಾಲನೆ ನ್ಯೂಸ್
ಮಂಡ್ಯ: ನಾಗಮಂಗಲ ತಾಲ್ಲೂಕಿನ ಆರಣಿ ಗ್ರಾಮ ಪಂಚಾಯಿತಿಗೆ ಭೇಟಿ ಕೊಟ್ಟ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯವರಾದ ನಂದಿನಿ ಕೆ.ಆರ್. ರವರು, ಗ್ರಾಮ ಪಂಚಾಯಿತಿಯನ್ನು ಸಂಪೂರ್ಣವಾಗಿ ವೀಕ್ಷಿಸಿ, ಗ್ರಾಮ ಪಂಚಾಯಿತಿಯಲ್ಲಿನ ಅಭಿಲೇಖಾಲಯ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರ ಕೊಠಡಿ, ಕಂಪ್ಯೂಟರ್ ಆಪರೇಟರ್ ಕೊಠಡಿ ಹಾಗೂ ಮೀಟಿಂಗ್ ಹಾಲ್ ಗಳನ್ನು ಪರಿಶೀಲಿಸಿದರು.
ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳೊಡನೆ ಗ್ರಾಮದಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ಕುಡಿಯುವ ನೀರಿನ ಪೂರೈಕೆ, ತೆರಿಗೆ ವಸೂಲಾತಿ, ಸಕಾಲ ಸೇವೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಜಲ ಜೀವನ್ ಮಿಷನ್ ಯೋಜನೆ ಮುಂತಾದ ಅಭಿವೃದ್ಧಿ ಯೋಜನೆಗಳ ಕುರಿತು ಮಾಹಿತಿ ಪಡೆದರು.
ಪಂಚಾಯಿತಿಯಲ್ಲಿನ ಕಾರ್ಯವೈಖರಿಗಳ ಕುರಿತು ಎಲ್ಲಾ ಸಿಬ್ಬಂದಿಗಳೊಡನೆ ಹಾಗೂ ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು ಹಾಗೂ ಟಿ.ಪಿ.ಓ ರವರೊಡನೆ ಚರ್ಚೆ ನಡೆಸಿ, ಸಿಬ್ಬಂದಿಗಳ ಕೊರತೆ ಹಾಗೂ ನೇಮಕಾತಿ ವಿಚಾರವಾಗಿ ಮಾಹಿತಿ ಪಡೆದರು.

ಸಿಬ್ಬಂದಿಗಳ ಕೊರತೆ ಹಾಗೂ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣದ ಕುರಿತು ಸಿ.ಇ.ಓ ರವರಿಗೆ ಪಂಚಾಯಿತಿ ಅಭಿವೃದ್ಧಿಅಧಿಕಾರಿಯವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ಸಹಾಯಕ ನಿರ್ದೇಶಕರು ಹಾಗೂ ಟಿ.ಪಿ.ಓ – ಸಂದೀಪ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – ಹರೀಶ್, ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
