NEWS

ಈ ವರ್ಷ ಬಿಸಿಲು ಹೆಚ್ಚಳ

ಪಾಲನೆ ನ್ಯೂಸ್

ಬೆಂಗಳೂರು: ಮಾರ್ಚ್‌ನಿಂದ ಮೇವರೆಗೂ ಗರಿಷ್ಠ ತಾಪಮಾನ ಕಠಿಣವಾಗಿರಲಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈ ಬಾರಿಯ ಬೇಸಿಗೆಯಲ್ಲಿ ವಾಡಿಕೆಗಿಂತ ಅಧಿಕ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ ಎಂದುಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್‌ನಿಂದ ಮೇವರೆಗೆ ತಾಪಮಾನ ಸಾಮಾನ್ಯಕ್ಕಿಂತ ರಾಜ್ಯಾದ್ಯಂ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ, ಕಡಿಮೆ ಶಾಖದ ಅಲೆ ಮತ್ತು ಬೆಚ್ಚಗಿನ ರಾತ್ರಿ ಇರಲಿದೆ. ಮಾರ್ಚ್ ಆರಂಭದಲ್ಲೇ ಬಿಸಿಲಿನ ತೀವ್ರತೆ ಹೆಚ್ಚಳವಾಗಲಿದ್ದು, ಕರಾವಳಿ ಕರ್ನಾಟಕದಲ್ಲಿ ಗರಿಷ್ಠ ತಾಪಮಾನವು ಶೇ.65 ಹೆಚ್ಚಲಿದೆ. ಬೆಂಗಳೂರು ನಗರ ಸೇರಿ ಕೆಲ ಜಿಲ್ಲೆಗಳಲ್ಲಿ ರಾತ್ರಿ ವೇಳೆ ಬಿಸಿ ವಾತಾವರಣ ಇರಲಿದೆ.

ರಾಜ್ಯದ ಇತರ ಜಿಲ್ಲೆಗಳಿಗಿಂತ ಕಲಬುರಗಿಯಲ್ಲಿ ಅತಿ ಹೆಚ್ಚು 45 ಡಿ.ಸೆ. ಉಷ್ಣಾಂಶ ದಾಖಲಾಗಲಿದೆ. ವಿಜಯಪುರ, ಬೀದ‌ರ್, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ, ಧಾರವಾಡ, # ಕರಾವಳಿ ಪ್ರದೇಶಗಳಲ್ಲಿ ಶೇ.65 ಉಷ್ಣಾಂಶ ಏರಿಕೆ ಸಾಧ್ಯತೆ ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಸೇರಿ ಉ.ಕರ್ನಾಟಕದ ಜಿಲ್ಲೆಗಳಲ್ಲಿ 43 ಡಿ.ಸೆ., ಮೈಸೂರು, ಮಂಡ್ಯ, ಹಾಸನ, ಚಾಮರಾಜ ನಗರ, ತುಮಕೂರು, ಬೆಂ.ದಕ್ಷಿಣ, ಬೆಂ. ಗ್ರಾಮಾಂತರದಲ್ಲಿ 40 ಡಿ.ಸೆ.ವರೆಗೆ ಉಷ್ಣಾಂಶ ದಾಖಲಾಗುವ ಸಂಭವ ಇದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕರ್ನಾಟಕ ಸಂಘ ಕತಾರ್ ದೋಹಾದಲ್ಲಿ ಭವ್ಯವಾಗಿ ಕಾರ್ಮಿಕ ದಿನಾಚರಣೆ 2026 ಆಚರಣೆ

ಕಂದಾಯ ಇಲಾಖೆಯಲ್ಲಿ ನೌಕರರು ಒಕ್ಕೊರಲನಿಂದ ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಒಳ್ಳೆಯ ಸಾಧನೆ ಮಾಡಬಹುದು: ಡಾ.ಕುಮಾರ

ಕರ್ನಾಟಕ ವಿಧಾನಮಂಡಲದ ಇತಿಹಾಸದಲ್ಲಿ ಇಂದು ಕರಾಳ ದಿನ: ಆ‌ರ್. ಅಶೋಕ

Leave a Comment