ಪಾಲನೆ ನ್ಯೂಸ್
ಮಂಡ್ಯ : ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಂಡ್ಯ ವಿಶ್ವವಿದ್ಯಾಲಯ, ಮಂಡ್ಯ ರವರ ಸಹಭಾಗಿತ್ವದಲ್ಲಿ ಫೆಬ್ರವರಿ ೨೧ ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕಲಾ ಭವನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್,ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಶರಣ ಪ್ರಕಾಶ್ಪಾ ಟೀಲ್,ಶ್ರೀ ಚಾಮುಂಡೇಶ್ವರಿ ವಿದ್ಯುತ್
ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ,
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ರಾಜ್ಯ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರು ಡಾ.
ಮೂರ್ತಿ ಅವರು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಲಿದ್ದಾರೆ.

ಮಂಡ್ಯ ವಿಧಾನಸಭಾ ಶಾಸಕರಾದ ಪಿ.ರವಿಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಶಾಸಕರು
ವಿಧಾನ ಪರಿಷತ್ ಉಪಾಧ್ಯಕ್ಷರು ದಿನೇಶ್ ಗೂಳಿಗೌಡ,ಶಾಸಕರುಗಳಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ವಿಧಾನ
ಸಭಾ ಶಾಸಕರುಗಳಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂಉದಯ, ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್ಆತ್ಮಾನಂದ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ
ಅಧ್ಯಕ್ಷರಾದ ಡಾ. ಮೂರ್ತಿ, ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಮಂಡ್ಯ ನಗರಾಭಿವೃದ್ಧಿ
ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯ
ಲಕ್ಷ್ಮಿ ರಘುನಂದನ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ ಕೈಮಗ್ಗ ಅಭಿವೃದ್ಧಿ ನಿಗಮ
ನಿಯಮಿತ ಅಧ್ಯಕ್ಷರಾದ ಬಿ ನಾಗೇಂದ್ರ ಕುಮಾರ್, ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಶಿವಚಿತ್ತಪ್ಪ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಮನೋಜ್ ಕುಮಾರ್ ಮೀನಾ, ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು ಅಭಿಯಾನ ನಿರ್ದೇಶಕರು ವಾಸಿರೆಡ್ಡಿ ವಿಜಯ ಜ್ಯೋತ್ಸ ಆಗಮಿಸಲಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
