NEWS

ಕಾಡ್ತಿಚ್ಚು ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಿ : ಖಂಡ್ರೆ

ಪಾಲನೆ ನ್ಯೂಸ್

ಮೈಸೂರು: ನಾಗರಹೊಳೆ, ಬಂಡೀಪುರ, ಬಿ. ಆ‌ರ್.ಟಿ.ಯಲ್ಲಿ ಈ ಬೇಸಿಗೆಯಲ್ಲಿ ಕಾಡ್ಲಿಚ್ಚು ನಿಯಂತ್ರಿಸಲು ಕ್ರಮ ವಹಿಸುವಂತೆ ಸೂಚಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ, ಬೇಸಿಗೆಯಲ್ಲಿ ಹುಲಿ, ಚಿರತೆ, ಆನೆ ಸೇರಿದಂತೆ ಯಾವುದೇ ವನ್ಯಜೀವಿ ಆಹಾರ ಮತ್ತು ನೀರಿನ ಕೊರತೆಯಿಂದ ಕಾಡಿನಿಂದ ಹೊರಬಾರದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ನಗರದ ಅರಣ್ಯ ಭವನದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ಇಲಾಖೆಯ ಖಾಯಂ ಸಿಬ್ಬಂದಿ ಕಡ್ಡಾಯವಾಗಿ ಅರಣ್ಯ ಇಲಾಖೆ ಆಂತರಿಕವಾಗಿ ಅಭಿವೃದ್ಧಿಪಡಿಸಿರುವ ಇ-ಗಸ್ತು ತಂತ್ರಾಂಶವನ್ನು ಬಳಕೆ ಮಾಡಬೇಕು. ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೊರಗುತ್ತಿಗೆಯ ಸಿಬ್ಬಂದಿ ಇ-ಸ್ಕ್ರಿಪ್ ಬಳಕೆ ಮಾಡಬೇಕು ಎಂದು ತಿಳಿಸಿದರು. ಸಮಗ್ರ ಕಮಾಂಡ್ ಕೇಂದ್ರದಲ್ಲಿ ವನ್ಯಜೀವಿಗಳ ಚಲನವಲನದ ಬಗ್ಗೆ ನಿಗಾ ಇಡಬೇಕು.

ಕೂಡಲೇ ಸಂಬಂಧಿತ ವಲಯದ ಅಧಿಕಾರಿ, ಸಿಬ್ಬಂದಿಗೆ ಸೂಚನೆ ನೀಡಬೇಕು. 1926 ದೂರವಾಣಿ ಸಂಖ್ಯೆಗೆ ಮೈಸೂರಿನ ಅರಣ್ಯ ಭವನದಲ್ಲಿ ಶುಕ್ರವಾರ ಮೈಸೂರು, ಕೊಡಗು ಮತ್ತು ಚಾಮರಾಜನಗರ ವಿಭಾಗದ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಸಚಿವ ಈಶ್ವರ್ ಬಿ.ಖಂಡ್ರೆ, ಸಿಸಿಎಫ್ ಮಾಲತಿ ಪ್ರಿಯಾ, ಹುಲಿ ಯೋಜನೆಯ ನಿರ್ದೇಶಕ ರಮೇಶ್ ಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶ್ರೀಪತಿ, ಸೋನಾಲ್, ಪ್ರಭಾಕರನ್, ಪಿ.ಎ. ಸೀಮಾ ಹಾಜರಿದ್ದರು.

ಬರುವ ದೂರು ಮತ್ತು ಮಾಹಿತಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು. ತಕ್ಷಣ ನಗರದಲ್ಲಿ ಹೆಚ್ಚು ಸಸಿ ನೆಡಲು ಸೂಚನೆ ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ ಮತ್ತು ಜಿಲ್ಲೆಯ ಪಟ್ಟಣ, ನಗರ ಪ್ರದೇಶಗಳ ರಸ್ತೆ ಬದಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಹಸಿರು ಹೊದಿಕೆ ಹೆಚ್ಚಿಸುವಂತೆ ಸಚಿವರು ಇದೇ ವೇಳೆ ತಿಳಿಸಿದರು. ಸಿಸಿಎಫ್ ಮಾಲತಿ ಪ್ರಿಯಾ, ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶ್ರೀಪತಿ, ಸೋನಾಲ್, ಪ್ರಭಾಕರನ್, ಪಿ.ಎ.ಸೀಮಾ ಸಭೆಯಲ್ಲಿ ಹಾಜ ರಿದ್ದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಬಿಡದಿ ಟೌನ್ ಶಿಪ್ ಯೋಜನೆಯಿಂದ ಕುಮಾರಸ್ವಾಮಿ ಅವರಿಗೆ ಲಾಟರಿ : ಡಿಸಿಎಂ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸ್ವಯಂ ರಕ್ಷಣೆ: ಕರಾಟೆ ತರಬೇತಿ – ಜಿ.ಪಂ.ಸಿಇಒ

ಮಂಡ್ಯ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 5ನೇ ಸ್ಥಾನ: ಸಚಿವ ಚಲುವರಾಯಸ್ವಾಮಿ ಹರ್ಷ

Leave a Comment