ಪಾಲನೆ ನ್ಯೂಸ್
ಮೈಸೂರು: ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಕುರ್ಚಿ ಕಾದಾಟ ಕಾಂಗ್ರೆಸ್ ಆಂತರಿಕ ವಿಚಾರ.

ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಧ್ಯಮದವರು ಏನು ಹೇಳುತ್ತಾರೋ ಅಷ್ಟೇ ಗೊತ್ತಿರುವುದು. ಆದರೆ, ಕಾದಾಟದಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ತಿ.ನರಸೀಪುರದಲ್ಲಿ ಕೆಎಸ್‌ಐಸಿ ಭೂಮಿಯನ್ನು ಕ್ರೀಡಾಂಗಣಕ್ಕೆ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ರಾಜ್ಯ ಸರ್ಕಾರ ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ. ಕೆಎಸ್‌ಐಸಿ ಜಾಗವನ್ನು ಕೆಎಸ್‌ಐಸಿ ಅಭಿವೃದ್ಧಿಗೆ ಬಳಸಬೇಕು. ಇದು ನಮ್ಮ ಒತ್ತಾಯ, ಈ ಬಗ್ಗೆ ನಾವು ಹೋರಾಟ ಮಾಡುತ್ತೇವೆ ಎಂದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

