NEWS

ವಿದ್ಯುತ್ ಕಂಬಕ್ಕೆ ಡಿಕ್ಕಿ ಒಡೆದ ಖಾಸಗಿ ಬಸ್

ಪಾಲನೆ ನ್ಯೂಸ್‌

ಬೆಂಗಳೂರು: ಖಾಸಗಿ ಬಸ್‌ವೊಂದರ ಬ್ರೇಕ್ ಫೇಲ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ನಗರದ ಮಹಾಲಕ್ಷ್ಮೀ ಲೇಔಟ್ ಬಳಿ ಘಟನೆ ನಡೆದಿದೆ. ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಎಂದಿನಂತೆ ವಿವಿಧ ಕಡೆಯಿಂದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಶಾಲೆಗೆ ಹೋಗುತ್ತಿದ್ದ ಬಸ್‌ನ ಬ್ರೇಕ್ ಏಕಾಏಕಿ ಬ್ರೇಕ್ ಫೇಲ್ ಆಗಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಹಿಮ್ಮುಖವಾಗಿ ಚಲಿಸಲಾರಂಭಿಸಿತು. ಈ ವೇಳೆ ರಸ್ತೆ ಪಕ್ಕದಲ್ಲಿದ್ದ ಕಂಬಕ್ಕೆ ಡಿಕ್ಕಿಯಾಗಿ ನಿಂತಿತು. ಮಲ್ಲೇಶ್ವರಂ ಠಾಣೆಯ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ವಿಷಯ ತಿಳಿದ ಸ್ಥಳೀಯ ಶಾಸಕ ಕೆ. ಗೋಪಾಲಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಬಸ್ ಮತ್ತು ವಾಹನಗಳ ಸಾಮರ್ಥ್ಯದ ಬಗ್ಗೆ ತಿಳಿದುಕೊಳ್ಳಬೇಕು ಎಂದು ಹೇಳಿದರು. ಘಟನೆ ಪರಿಣಾಮ ಸಾರ್ವಜನಿಕ ವಾಹನ ಸಂಚಾರಕ್ಕೆ ತುಸು ಹೊತ್ತು ತಡೆ ಉಂಟಾಗಿತ್ತು. ಸಂಚಾರ ಠಾಣೆ ಪೊಲೀಸರು ವಾಹನ ತೆರವುಗೊಳಿಸಿದರು. ಮಲ್ಲೇಶ್ವರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕನ್ನಡ ಭವನ ನಿರ್ಮಾಣಕ್ಕೆ ನೀಲ ನಕಾಶೆ ತಯಾರಿ: ಜಿಲ್ಲಾಧಿಕಾರಿ

ಗುಜರಾತ್ ಟೈಟಾನ್ಸ್ ಜೊತೆ ಕಣಕ್ಕಿಳಿಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಜ.1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

Leave a Comment