NEWS

ಆರೋಗ್ಯ ಇಲಾಖೆಯಲ್ಲಿ ಔಷಧ ಕೊರತೆ,ಖರೀದಿಯಲ್ಲಿ ಅವ್ಯವಹಾರ: ವಿಜಯೇಂದ್ರ ಆರೋಪ

ಪಾಲನೆ ನ್ಯೂಸ್

ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಔಷಧ ಕೊರತೆ, ದೊಡ್ಡ ಪ್ರಮಾಣದ ಅಕ್ರಮಗಳು ಮತ್ತು ಆರೋಗ್ಯ ಸೇವೆಗೆ ಅಡ್ಡಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬುಧವಾರ ಕಾಂಗ್ರೆಸ್ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದ ರಾಮಯ್ಯ ನೇತೃತ್ವದ ಸರ್ಕಾರಕ್ಕೆ ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸುವ ಇಚ್ಛಾಶಕ್ತಿ ಇಲ್ಲ | ಮತ್ತು ಆಡಳಿತದ ಬದಲು ದೂಷಣೆಯ ರಾಜಕೀಯದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಈ ಕಾಂಗ್ರೆಸ್ ಸರ್ಕಾರದ ಬೇಜವಾ ಬ್ದಾರಿಯಿಂದಾಗಿ, ಆರೋಗ್ಯ ಇಲಾಖೆ ಯೇ ಐಸಿಯುನಲ್ಲಿದ್ದು, ಪರಿಸ್ಥಿತಿ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂದರೆ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾ ಗಿದೆ ಎಂದರು.ಸಿಟಿಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್ ಸೇವೆಗಳಿಗೆ ಬಾಕೀ ಹಣ ಉಳಿಸಿಕೊಂಡಿದ್ದಾರೆ. ಇದರಿಂದ ಬಡ ರೋಗಿಗಳಿಗೆ ಸಮಸ್ಯೆ ಯಾಗುತ್ತಿದೆ. ಸಾಧನ ಸಮಾವೇಶ ಮಾಡುತ್ತಿದ್ದಾರೆ. ಆದರೆ ಜನರು ಯಾವ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಸರ್ಕಾರಕ್ಕೆ ಗೊತ್ತಾ? ಎಂದು ಪ್ರಶ್ನೆ ಮಾಡಿದರು. ನನ್ನ ಪ್ರಕಾರ ಕಾಂಗ್ರೆಸ್ ನುಡಿದಂತೆ ನಡೆಯುತ್ತಿರುವ ಸರ್ಕಾರ ಅಲ್ಲ. ಜನರಿಗಾಗಿ ಇರುವ ಸರ್ಕಾರ ಅಲ್ಲ. ದಲ್ಲಾಳಿಗಳಿಗಾಗಿ ಇರುವ ಸರ್ಕಾರ. ಔಷಧ ಕೊರತೆ ಉಂಟಾಗಲು ಸರ್ಕಾರ, ಸಚಿವರು ಕಾರಣ. ಪ್ರಭಾವಿಗಳ ಒತ್ತಡಕ್ಕೆ ಮಣಿದು ಅವ್ಯವಹಾರ ನಡೆಯುತ್ತಿದೆ. ಟೆಂಡರ್ ಕರೆದರೂ ಭಾಗಿಯಾಗುತ್ತಿಲ್ಲ ಎಂದು ಆರೋಪಿಸಿದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಇಂದು ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ

ಆರ್‌ಸಿಬಿಗೆ ಭರ್ಜರಿ ಜಯ

“ಅಕ್ಕನ ಬುತ್ತಿ” ಅಡುಗೆ ತಯಾರಿಕಾ ಕೇಂದ್ರದ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿ ಪಂ ಸಿಇಒ

Leave a Comment