ಪಾಲನೆ ನ್ಯೂಸ್
ಮಂಡ್ಯ: ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುಬೇಕು ಹಾಗೂ ಸಂತ್ರಸ್ತರಿಗೆ ನೀಡಲಾಗುವ ಪರಿಹಾರ ಹಣ ಮತ್ತು ಇತರ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡಗಳ (ST) ಮೇಲಿನ ದೌರ್ಜನ್ಯ ತಡೆ, ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಪವಿಭಾಗ ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕುಂದುಕೊರತೆಗಳ ಕುರಿತು ಜಾಗೃತಿ ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ನಡೆಸಿ ಸಭೆಗಳಲ್ಲಿ ಸಲ್ಲಿಕೆಯಾಗುವ ದೂರುಗಳನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಲು ಪ್ರಯತ್ನಿಸಬೇಕು ಎಂದು ಹೇಳಿದರು.

ಕುಂದುಕೊರತೆಗಳ ಸಭೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕೆಂದು ತಿಳಿಸಿದ ಅವರು, ಪ್ರತಿ ತಾಲ್ಲೂಕು ಮಟ್ಟದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ತಿಳಿಸಿದರು.
ಜಾಗೃತಿ ಸಮಿತಿಯ ಸದಸ್ಯರಿಗೆ ಗುರುತಿನ ಚೀಟಿ ನೀಡುವಂತೆ ಹಾಗೂ ಜಾಗೃತಿ ಸಮಿತಿಯ ಸಭೆ ನಡೆಯುವ ಮಾಹಿತಿಯನ್ನು ಸದಸ್ಯರಿಗೆ ಮುಂಚಿತವಾಗಿ ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕರಿಗೆ ಸೂಚಿಸಿದರು.

ಮಾರ್ಚ್ 7 ರಂದು ಅಂಬೇಡ್ಕರ್ ಪರಿಶಿಷ್ಟ ಜಾತಿ (SC) ಹಾಗೂ ಪರಿಶಿಷ್ಟ ಪಂಗಡಗಳ (ST) ಮೇಲಿನ ದೌರ್ಜನ್ಯ ತಡೆ ಸಂಬಂಧ ಅರಿವು ಮೂಡಿಸುವ ವಿಚಾರ ಸಂಕಿರಣ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಜಾಗೃತಿ ಸಭೆಯ ಸದಸ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿಗಳಾದ ಗಂಗಾಧರ್ ಸ್ವಾಮಿ, ಮಂಡ್ಯ ಉಪ ವಿಭಾಗಧಿಕಾರಿ ಶಿವಮೂರ್ತಿ, ಪಾಂಡವಪುರ ಉಪ ವಿಭಾಗಧಿಕಾರಿ ಶ್ರೀನಿವಾಸ್ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆಯ ಸದಸ್ಯರಾದ ಸೋಮ ಶೇಖರ್ ಕೆರೆಗೋಡು, ಗುರಪ್ಪ, ಕೆ. ನರಸಿಂಹ
ಮೂರ್ತಿ ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
