ಪಾಲನೆ ನ್ಯೂಸ್
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸಿದ ಬೃಹತ್ ಹೋರಾಟದ ಬೆನ್ನಲ್ಲೇ ರಾಜ್ಯ ಸರ್ಕಾರ ಉದ್ಯೋಗಕ್ಕಾಗಿ ಕಾದು ಕುಳಿತಿರುವವರಿಗೆ ಸಿಹಿ ಸುದ್ದಿ ನೀಡಿದೆ.
ಉದ್ಯೋಗ ನೇಮಕಾತಿಗೆ ಚಾಲನೆ ನೀಡಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಶೇ.56 ಮೀಸಲಾತಿ ಬದಲು ಶೇ.50ರ ಮೀಸಲಾತಿ ಅಡಿಯಲ್ಲೇ ನೇಮಕಾತಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಯಿತು.
ಹಲವು ಸವಾಲುಗಳ ನಡುವೆ ರಾಜ್ಯ ಸರ್ಕಾರ, ಮೀಸಲಾತಿ ಮಿತಿ ಶೇ. 50 ಮೀರದಂತೆ ಒಳಮೀಸಲಾತಿಯೊಂದಿಗೆ ವಿವಿಧ ಇಲಾಖೆಗಳ 56,462 ಖಾಲಿ ಹಳೇ ಸೂತ್ರದ ಅನ್ವಯ ನೇಮಕಾತಿ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಕಲ್ಪಿಸಿದ್ದರೂ ಉಚ್ಚ ನ್ಯಾಯಾಲಯದಲ್ಲಿ ವಿವಾದ ಇತ್ಯರ್ಥವಾಗದ ಕಾರಣ ಸದ್ಯ ಜಾರಿಯಲ್ಲಿರುವ ಶೇ. 15 ಮೀಸಲಾತಿ ಅಡಿಯಲ್ಲಿ ಹುದ್ದೆಗಳ ನೇಮಕಾತಿ ನಡೆಯಲಿದೆ. ಚಾಮರಾಜನಗರದ ಕೊಳ್ಳೇಗಾಲದಲ್ಲಿ 250 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ 48 ಕೋಟಿ ರೂ. ಮಂಜೂರು ಹುದ್ದೆಗಳ ನೇಮಕಕ್ಕೆ ತೀರ್ಮಾನಿಸಿದ್ದು, ನೇಮಕಾತಿಗಾಗಿ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲು ಮುಂದಾಗಿದೆ.

ಮೊದಲ ಹಂತದಲ್ಲಿ 56,432 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸಚಿವ ಸಂಪುಟ ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಶೇಕಡಾ 50ರ ಮೀಸಲಾತಿಯನ್ನು ದಾಟದೆ ಅದರ ಮಿತಿಯೊಳಗೆ ಹೊಸ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಶೇ.56ರ ಮೀಸಲಾತಿ ಅಡಿಯಲ್ಲಿ ನೇಮಕ ವಾದರೆ ಕಾನೂನಿನ ಸಂಕಷ್ಟ ಎದುರಾಗ ಬಹುದೆಂಬ ಹಿನ್ನೆಲೆಯಲ್ಲಿ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ.
ರೋಹಿತ್ ವೇಮುಲಾ ಕಾಯ್ದೆಗೆ ಸಂಪುಟ ಅನುಮೋದನೆ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯುವ ಸಲುವಾಗಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಂದಿನ ಬಜೆಟ್ ಅಧಿವೇಶನದಲ್ಲಿ ಈ ವಿಧೇ ಯಕ ಮಂಡನೆ ಮಾಡಲು ಸಂಪುಟ ಸಭೆ ನಿರ್ಣಯಿಸಿದೆ. ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿ ಮಾಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಸ್ಪಂದಿಸಿದ್ದ ಸಿಎಂ, ಅಧಿವೇಶನದಲ್ಲಿ ಕಾಯ್ದೆ ಜಾರಿಗೊಳಿಸುವ ಭರವಸೆ ನೀಡಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

