ಪಾಲನೆ ನ್ಯೂಸ್
ಮಂಡ್ಯ: ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಯುವನಿಧಿ ಯೋಜನೆಯ ಕುರಿತಾಗಿ ಹೆಚ್ಚಿನ ಪ್ರಚಾರ ಮಾಡಬೇಕು ಮತ್ತು ಯೋಜನೆ ಕುರಿತು ಸೂಚನಾ ಫಲಕಗಳನ್ನು ಅಳವಡಿಸಿ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಿಕ್ಕಲಿಂಗಯ್ಯ ರವರು ಹೇಳಿದರು.
ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿ ಅನ್ನಸುವಿಧ ಯೋಜನೆಯ ಮೂಲಕ 75 ವರ್ಷ ಮೇಲ್ಪಟ್ಟವರಿಗೆ ಈಗಾಗಲೇ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ. ಕೆಲವರ ಬಳಿ ಮೊಬೈಲ್ ಇಲ್ಲದ ಕಾರಣ ಓಟಿಪಿ ಪಡೆದು ಪಡಿತರ ತಲುಪಿಸಲು ಸಾಧ್ಯವಾಗುತ್ತಿಲ್ಲ.ಮಾನವಿಯತೆ ದೃಷ್ಟಿಯಿಂದ ವಯಸ್ಕರಿಗೆ ಪಡಿತರವನ್ನು ನೀಡಿ ಎಂದು ತಿಳಿಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ರಾಜೇಂದ್ರ ಎಸ್. ಹೆಚ್. ಮಾತನಾಡಿ ಶಾಲಾ ಕಾಲೇಜು ಮಕ್ಕಳಿಗೆ ಪರೀಕ್ಷೆ ಶಾಲಾ ಕಾಲೇಜು ಮಕ್ಕಳಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆ ಮಾಡಬೇಕು ಮತ್ತು ಯುವನಿಧಿ ಯೋಜನೆಯಡಿ ವಿಶ್ವ ವಿದ್ಯಾಲಯ ಗಳಲ್ಲಿ ಬ್ಯಾನರ್ ಗಳನ್ನು ಅಳವಡಿಸಿ ಯುವನಿಧಿ ಯೋಜನೆ ಬಗ್ಗೆ ಅರಿವು ಮೂಡಿಸಿ ಎಂದು ಹೇಳಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಶಿವಣ್ಣ ರವರು ಮಾತನಾಡಿ ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಅನ್ನ ಸುವಿಧಾ ಯೋಜನೆ ಕುರಿತು ಪಲಾನುಭವಿಗಳಿಗೆ ನ್ಯಾಯಾಬೆಲೆ ಅಂಗಡಿ ಮಾಲೀಕರು ಪಲಾನುಭವಿಗಳಿಗೆ ಮಾಹಿತಿಯನ್ನು ತಿಳಿಸಬೇಕು ಮತ್ತು ಯೋಜನೆಯನ್ನು ತಲುಪಿಸಬೇಕು ಎಂದು ಹೇಳಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹನುಮಂತಯ್ಯ ರವರು ಮಾತನಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವೇಗಧೂತ ಬಸ್ಸುಗಳು ಬೆಂಗಳೂರು ಟು ಮೈಸೂರಿಗೆ ಪ್ರಯನಿಸುವ ವೇಗಧೂತ ಬಸ್ಸು ಗಳನ್ನು ಮಂಡ್ಯ ನಿಲ್ದಾಣದಲ್ಲಿ ನಿಲ್ಲುವಂತೆ ಬಸ್ಸು ಸೂಚಿಸಿದರು.
ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಧನುಷ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಆಶಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಾದ ಪ್ರತೀಕ್ ಹೆಗ್ಗಡೆ,ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಸದಸ್ಯರುಗಳಾದ ಅಜಯ್ ಕುಮಾರ್ ಬಿ.ಪಿ, ಎ.ಬಿ ಕುಮಾರ, ಕೆ. ರುದ್ರಪ್ಪ, ವೀಣಾ ,ಶಂಕರೇಗೌಡ, ಬಸವರಾಜು, ಮಹಮದ್ ಅನ್ಸರ್, ರಮೇಶ್ ಬಿ.ಎಂ, ಪಿ ಮಾದೇಶ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
