NEWS

ಆರ್‌ಸಿಬಿ ಮಾರಾಟ ಪ್ರಕ್ರಿಯೆ ಅಂತಿಮ ಹಂತಕ್ಕೆ

ಪಾಲನೆ ನ್ಯೂಸ್

ಬೆಂಗಳೂರು: ಐಪಿಎಲ್ 18ನೇ ಆವೃತ್ತಿಯ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾರಾಟ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಮಾರ್ಚ್ ಮಧ್ಯಭಾಗದಲ್ಲಿ ಹೊಸ ಮಾಲೀಕರು ಯಾರೆಂದು ಖಚಿತವಾಗಲಿದೆ. ಆರ್‌ಸಿಬಿ ಒಡೆತನ ಹೊಂದಿರುವ ಡಿಯಾಜಿಯೋ ಕಂಪನಿ, ಕೊನೇ ಹಂತದ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರ ಪಟ್ಟಿಯನ್ನು ಈಗಾಗಲೆ ಅಂತಿಮಗೊಳಿಸಿದೆ. ‌

ಮಾರ್ಚ್ 10ರಂದು ಅಂತಿಮ ಹಂತದ ಬಿಡ್ಡಿಂಗ್ ಪ್ರಕ್ರಿಯೆ ನಡೆಯಲಿದೆ ಎನ್ನಲಾಗಿದೆ. 2026ರ ಮಾರ್ಚ್ 31ರೊಳಗೆ ಆರ್‌ಸಿಬಿ ಮಾರಾಟ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಡಿಯಾಜಿಯೋ ಕಳೆದ ವರ್ಷ ನವೆಂಬರ್‌ನಲ್ಲೇ ತಿಳಿಸಿತ್ತು. ಆರ್‌ಸಿಬಿಯ ಹಾಲಿ ಮಾಲೀಕರು 18,186 ಕೋಟಿ ರೂ. (2 ಶತಕೋಟಿ ಡಾಲರ್) ಮೌಲ್ಯ ನಿಗದಿಪಡಿಸಿದ್ದಾರೆ. ಆದರೆ ಇತ್ತೀಚೆಗೆ ನಡೆದ ಪ್ರಾಥಮಿಕ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ 13,640 ಕೋಟಿ ರೂ. ನಿಂದ 16.368 ಕೋಟಿ ರೂ. ವರೆಗೆ (1.5ರಿಂದ 1.8 ಶತಕೋಟಿ ಡಾಲರ್) ಬಿಡ್ ಬಂದಿತ್ತು ಎನ್ನಲಾಗಿದೆ.

ಹೀಗಾಗಿ ಬಿಡ್ಡರ್‌ಗಳು ಕೊನೇ ಹಂತದಲ್ಲಿ ತಮ್ಮ ಬಿಡ್ ಮೊತ್ತವನ್ನು ಪರಿಷ್ಕರಿಸುವ ನಿರೀಕ್ಷೆ ಇದೆ. ಮ್ಯಾಂಚೆಸ್ಟರ್ ಯುನೈಟೆಡ್ ಸಹ-ಮಾಲೀಕರಾದ ಅವಾಮ್ ಗ್ರೇಜರ್, ಸೆರಮ್ ಇಂಡಿಯಾದ ಸಿಇಒ ಅದರ್ ಪೂನಾವಾಲ, ಮಣಿಪಾಲ್ ಗ್ರೂಪ್ ಚೇರ್ಮನ್ ಡಾ. ರಂಜನ್ ಪೈ, ಅಮೆರಿಕದ ಶತಕೋಟಿ ಉದ್ಯಮಿ ಡೇವಿಡ್ ಬ್ಲಿಟ್ಟರ್, ಭಾರತದ ಉದ್ಯಮಿಗಳಾದ ಗೌತಮ್ ಅದಾನಿ, ಪಾರ್ಥ ಜಿಂದಾಲ್ (ಜೆಎಸ್‌ಡಬ್ಲ್ಯು) ಆರ್‌ಸಿಬಿ ಖರೀದಿ ರೇಸ್‌ನಲ್ಲಿರುವ ಪ್ರಮುಖರು ಎಂದು ಈ ಹಿಂದೆಯೇ ವರದಿಯಾಗಿತ್ತು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ವೆನೆಜುವೆಲಾ: 6ನೇ ತೈಲ ಟ್ಯಾಂಕ‌ರ್ ವಶಕ್ಕೆ ಪಡೆದ ಅಮೆರಿಕ

ಸೇನಾ ಪರೀಕ್ಷೆ ವೇಳೆ ಅಕ್ರಮ ನಡೆಸಿರುವ 18 ಮಂದಿ ವಿರುದ್ದ ದೂರು

ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ: ಜಿ.ಪಂ. ಸಿಇಓ ನಂದಿನಿ ಕೆ.ಆರ್.

Leave a Comment