ಪಾಲನೆ ನ್ಯೂಸ್
ಮಂಡ್ಯ: ವಿಶೇಷ ಚೇತನರು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಮತ್ತು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಎಲ್ಲರೂ ಸಹಕರಿಸಬೇಕುಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ತಿಳಿಸಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕಾರ್ಮಿಕ ಇಲಾಖೆ, ಅಂಗವಿಕಲರ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶೇಷಚೇತನರಿಗೆ ಕಾರ್ಪೊರೇಟ್ ಹಾಗೂ ಇತರೆ ಖಾಸಗಿ ಕಂಪನಿಗಳ ಕಾರ್ಪೊರೇಟ್ ನಿಧಿಯಿಂದ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿಶೇಷಚೇತನರನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಪ್ರತಿಯೊಬ್ಬರ ಸಹಕಾರ ತುಂಬಾ ಅಗತ್ಯ ಎಂದು ಹೇಳಿದರು.
ಸಂಸ್ಥೆಗಳ ಅನುದಾನ ಬಳಸಿಕೊಂಡು ತ್ರಿಚಕ್ರ ವಾಹನವನ್ನು ವಿಶೇಷ ಚೇತನ ಪಲಾನುಭವಿಗೆ ನೀಡಲಾಗುತ್ತಿದ್ದು ಅದರಿಂದ ವಿಶೇಷ ಚೇತನರು ಅವರ ಬದುಕಿನಲ್ಲಿ ಸ್ವಾವಲಂಬಿಗಳ ಆಗುವಂತೆ ಪ್ರೇರೇಪಿಸಬೇಕು ಎಂದು ಹೇಳಿದರು.

ವಿಶೇಷ ಚೇತನರನ್ನು ಗೌರವಿಸಬೇಕು ಮತ್ತು ಹೆಚ್ಚು ಹೆಚ್ಚು ಅವಕಾಶಗಳನ್ನು ಕಲ್ಪಿಸಬೇಕು. ಶೈಕ್ಷಣಿಕ ಅರ್ಹತೆ ಅನುಗುಣವಾಗಿ ಬೇರೆ ಬೇರೆ ಕಡೆ ಉದ್ಯೋಗ ಅವಕಾಶಗಳನ್ನು ನೀಡಿ ಸ್ವಾವಲಂಬಿಯಾಗಿ ಜೀವನ ನಡೆಸುವಂತೆ ಮಾಡಬೇಕು. ಸರ್ಕಾರದ ಕಾರ್ಯಕ್ರಮಗಳ ಜೊತೆಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಚೇತನ ಫಲಾನುಭವಿಯಾದ ರಾಮಕೃಷ್ಣ ರವರಿಗೆ ತ್ರಿಚಕ್ರ ವಾಹನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಂಡ್ಯ ಡಯೋಗ್ನೋಸ್ಟಿಕ್ ಸೆಂಟರ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಎಂ.ಎಸ್ ಸಿದ್ದೇಗೌಡ, ದಯಾಗ್ನೋಸ್ಟಿಕ್ ಸೆಂಟರ್ ಅಧ್ಯಕ್ಷರಾದ ಡಾಕ್ಟರ್ ಬಿ.ಡಿ. ಕೃಷ್ಣಪ್ಪ, ಮಂಡ್ಯ ಕಾರ್ಮಿಕ ಅಧಿಕಾರಿಗಳಾದ ಡಾ. ಎಂ. ಸವಿತ ರವರು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
