NEWS

ಡಿಜಿಟಲ್ ಮೋಡ್ ನಲ್ಲಿ ನಡೆಯುತ್ತಿರುವ ಮೊದಲ ಜನಗಣತಿ

ಜನಗಣತಿ ಕಾರ್ಯವನ್ನು ಅತ್ಯಂತ ಜವಬ್ದಾರಿಯಿಂದ ನಿರ್ವಹಿಸಿ : ಡಾ ಕುಮಾರ

ಪಾಲನೆ ನ್ಯೂಸ್

ಮಂಡ್ಯ: ಜನಗಣತಿ ಕಾರ್ಯವು ರಾಷ್ಟ್ರದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ದೇಶದ ಜನಗಣತಿ ಕಾರ್ಯಕ್ಕೆ ನಿಯೋಜಿಸಿರುವ ಜಿಲ್ಲೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಅವರು ನಿರ್ದೇಶನ ನೀಡಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಗಣತಿ ಕಾರ್ಯದ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಜನಗಣತಿಯು ದೇಶದ ಅತಿದೊಡ್ಡ ಸಾರ್ವಜನಿಕ ಅಭ್ಯಾಸ ಚಟುವಟಿಕೆಯಾಗಿದ್ದು, ದೇಶದಲ್ಲಿ ಅತ್ಯಂತ ತಳಮಟ್ಟದಿಂದ ಮಾಹಿತಿ ಸಂಗ್ರಹಿಸುವ ಏಕೈಕ ಕಾರ್ಯಕ್ರಮ ಇದಾಗಿದ್ದು, ಮುಂದಿನ 10 ವರ್ಷಗಳ ಕಾಲ ದೇಶದ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲು ಈ ದಾಖಲೆ ಬಳಕೆಯಾಗಲಿದ್ದು, ಗಣತಿ ಕಾರ್ಯದಲ್ಲಿ ತೊಡಗಿರುವ ಪ್ರತಿಯೊಬ್ಬರೂ ಅತ್ಯಂತ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಜನಗಣತಿಯು ರಾಷ್ಟ್ರೀಯ ಮಟ್ಟದ ಪ್ರಮುಖ ಕಾರ್ಯವಾಗಿದ್ದು ಚುನಾವಣಾ ಕೆಲಸದಷ್ಟೇ ಗಂಭೀರವಾದುದು. ಅಧಿಕಾರಿಗಳ ನಡುವೆ ಸಮರ್ಪಕ ಸಮನ್ವಯತೆ ಇರಬೇಕು ಎಂದು ಅವರು ತಿಳಿಸಿದರು.

ಈ ಬಾರಿಯ ಜನಗಣತಿಯು ಸ್ವತಂತ್ರ ನಂತರ ನಡೆಯುತ್ತಿರುವ 8 ನೇ ಜನಗಣತಿಯಾಗಿದ್ದು, ಡಿಜಿಟಲ್ ಮೋಡ್ ನಲ್ಲಿ ನಡೆಯುತ್ತಿರುವ ಮೊದಲ ಗಣತಿಯಾಗಿದೆ. ಜನಗಣತಿಯು 2 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ 2026ರ ಏಪ್ರಿಲ್ 16 ರಿಂದ ಮೇ 15 ರ ವರೆಗೆ ಮನೆ ಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ ಹಾಗೂ ಎರಡನೇ ಹಂತದ ಜನಗಣತಿಯೂ 2027ರ ಫೆಬ್ರವರಿ 1 ರಿಂದ ಫೆಬ್ರವರಿ 28ರವರೆಗೆ ನಡೆಯಲ್ಲಿದೆ ಎಂದು ಅವರು ತಿಳಿಸಿದರು

ಪ್ರಸ್ತುತ ನಡೆಯುವ ಗಣತಿಯು ಸಂಪೂರ್ಣ ಆನ್‌ಲೈನ್ ಮೋಡ್ ನಲ್ಲಿರುವುದದರಿಂದ ತಿದ್ದಪಡಿಗಳನ್ನು ಮಾಡಲು ಅವಕಶವಿಲ್ಲ ಆದ್ದರಿಂದ ಗಣತಿದಾರರು ಅತ್ಯಂತ ಎಚ್ಚರಿಕೆಯಿಂದ ದಾಖಲೆಗಳನ್ನು ನಮೂದಿಸಬೇಕು ಎಂದು ಅವರು ತಿಳಿಸಿದರು.

ಜನಗಣತಿ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿಗಧಿತ ಅವಧಿಯೊಳಗೆ ಗಣತಿ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವಂತೆ ತಿಳಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಬಿ. ಸಿ. ಶಿವನಂದಾಮೂರ್ತಿ, ಉಪ ವಿಭಾಗಧಿಕಾರಿ ಶಿವಮೂರ್ತಿ, ಶ್ರೀನಿವಾಸ್ ಹಾಗೂ ಧನ್ಯ, ಕುಲದೀಪ್ ಯಾದವ್ ಹಾಗೂ ರಮೇಶ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಲು ಸೂಚನೆ

ಮ್ಯೂಚುವಲ್ ಫಂಡ್ ಎಂದರೇನು? ಅದು ಹೇಗೆ ಕಾರ್ಯನಿರ್ವಹಿಸುತ್ತದೆ?

ಕುಕ್ಟ‌ರ್ ಬಾಂಬ್ ಸ್ಫೋಟಿಸಿದ್ದವಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 92 ಸಾವಿರ ರು. ದಂಡ

Leave a Comment