NEWS

ಇಂಡೀಸ್ ವಿರುದ್ಧ ಭಾರತಕ್ಕೆ 5 ವಿಕೆಟ್‌ಗಳ ಜಯ

ಪಾಲನೆ ನ್ಯೂಸ್

ಗಾರ್ಡನ್: 2026ರ ಟಿ-20 ವಿಶ್ವಕಪ್‌ನ ಸೂಪರ್ 8 ಪಂದ್ಯದಲ್ಲಿ, ಸಂಜು ಸ್ಯಾಮ್ಹನ್ ಅವರ ಅಜೇಯ 97 ಅಮೂಲ್ಯ ರನ್‌ಗಳ ನೆರವಿನಿಂದ ಭಾರತ ತಂಡವು ವೆಸ್ಟ್ ಇಂಡಿಸ್ ತಂಡವನ್ನು ನಿರ್ಣಾಯಕ ಪಂದ್ಯದಲ್ಲಿ 5 ವಿಕೆಟ್‌ಗಳಿಂದ ಸೋಲಿಸಿ ಸೆಮಿಫೈನಲ್‌ಗೆ ಸ್ಥಾನ ಪಡೆದುಕೊಂಡಿದೆ. ಭಾರತ ಈ ಟಿ20 ವಿಶ್ವಕಪ್‌ ನಲ್ಲಿ ಸೆಮಿಫೈನಲ್ ತಲುಪಿದ ನಾಲ್ಕನೇ ತಂಡವಾಗಿದೆ. ಇದಕ್ಕೂ ಮೊದಲು, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿದ್ದವು.

ಮಾರ್ಚ್ 5ರಂದು ನಡೆಯಲಿರುವ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಇದು ಭಾರತದ ಆರನೇ ಟಿ-20 ವಿಶ್ವಕಪ್ ಸೆಮಿಫೈನಲ್ ಆಗಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸೂಪರ್ 8 ಪಂದ್ಯ ಭಾನುವಾರ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಿತು. ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 195 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 19.2 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 199 ರನ್ ಗಳಿಸಿ ಪಂದ್ಯದಲ್ಲಿ ಗೆಲುವು ಸಾಧಿಸಿತು.

ಸಂಜು ಸ್ಯಾಟ್ಸನ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಭಾರತದ ಆರಂಭಿಕ ಬ್ಯಾಟ್ಸ್ ಮನ್‌ಗಳಾದ ಅಭಿಷೇಕ್ : 13 ಶರ್ಮಾ ಮತ್ತು ಇಶಾನ್ ಕಿಶನ್ ತಲಾ 10 ರನ್‌ ಗಳಿಸಿ ವಿಕೆಟ್ ಚೆಲ್ಲಿದರು. ಸಂಜು ಸ್ಯಾಮ್ಲನ್ 26 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ನಂತರ 50 ಎಸೆತಗಳಲ್ಲಿ 97 ರನ್‌ಗಳ ಅಜೇಯ ಇನ್ನಿಂಗ್ಸ್ ಆಡಿದರು. ಸೂರ್ಯ DREAM 11 INIMA ಸಂಜು ಸ್ಯಾಮ್ಪನ್ ರನ್ 97 ಎಸೆತ 50 ಬೌಂಡರಿ 12 ಸಿಕ್ಸರ್ 4 ಕುಮಾರ್ ಯಾದವ್ 16 ಎಸೆತಗಳಲ್ಲಿ 18 ರನ್ ಗಳಿಸಿದರೆ, ತಿಲಕ್ ವರ್ಮಾ 15 ಎಸೆತಗಳಲ್ಲಿ 27 ರನ್ ಗಳಿಸಿದರು. ಮಾ.4ಕ್ಕೆ ದ.ಆಫ್ರಿಕಾ-ನ್ಯೂಜಿಲೆಂಡ್ ಪಂದ್ಯ ಭಾರತ- ಇಂಗ್ಲೆಂಡ್ ನಡುವೆ ಸೆಣಸು ಸೂಪರ್ 8ರಲ್ಲಿ ಗ್ರೂಪ್ 1ರಿಂದ ದಕ್ಷಿಣ ಆಫ್ರಿಕಾ ಮತ್ತು ಭಾರತ ಹಾಗೂ ಗ್ರೂಪ್ 2ರಿಂದ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಸೆಮಿಫೈನಲ್‌ ತಲುಪಿವೆ.

ಈ ಟಿ-20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯ ಮಾರ್ಚ್ 4ರಂದು ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದ್ದು, 2ನೇ ಸೆಮಿಫೈನಲ್ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಗ್ರೂಪ್ 2 ಅಂಕಪಟ್ಟಿಯಲ್ಲಿ ಭಾರತ 4 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾ 6 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಕೊನೆಯಲ್ಲಿ ಬಂದ ಶಿವಂ ದುಬೆ ಕೂಡ 4 ಎಸೆತಗಳಲ್ಲಿ 8 ರನ್ ಗಳಿಸಿ ಅಜೇಯರಾಗಿ ಉಳಿದರು. ಆದರೆ ಹಾರ್ದಿಕ್ ಪಾಂಡ್ಯ 14 ಎಸೆತಗಳಲ್ಲಿ 17 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಫೆಬ್ರವರಿ 21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಿ: ಬಿ.ಸಿ ಶಿವಾನಂದಮೂರ್ತಿ

ಕುಂಭಮೇಳ ಮೊನಾಲಿಸಾ ಪತಿ ಫರ್ಮಾನ್ ವಿರುದ್ಧ ಪೋಕೋ ಕೇಸು ದಾಖಲು

Leave a Comment