NEWS

ನಮ್ಮ ನಡೆ ಸ್ವಚ್ಛತೆಯ ಕಡೆರನ್ ಫಾರ್ ಮಂಡ್ಯ

ಮಾರ್ಚ್ 8 ರಂದು ಸ್ವಚ್ಛ ಭಾರತ್ ಅಭಿಯಾನದಡಿ ಸ್ವಚ್ಛತಾ ಮ್ಯಾರಾಥಾನ್ – ರವಿಕುಮಾರ್

ಪಾಲನೆ ನ್ಯೂಸ್

ಮಂಡ್ಯ: ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಹಾಗೂ ಫಿಟ್‌ನೆಸ್ ಉತ್ತೇಜಿಸಲು ಮಾರ್ಚ್ 8 ರಂದು ನಗರದ ಜಿಲ್ಲಾ ಕ್ರೀಡಾಂಗಣದಿಂದ “ನಮ್ಮ ನಡೆ ಸ್ವಚ್ಛತೆಯ ಕಡೆ -ರನ್ ಫಾರ್ ಮಂಡ್ಯ” ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ವಿಧಾನಸಭಾ ಶಾಸಕರಾದ ರವಿಕುಮಾರ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿ ಗಳ ಕಚೇರಿಯಲ್ಲಿ ಸ್ವಚ್ಛ ಭಾರತ್ ಅಭಿಯಾನದಡಿ “ನಮ್ಮ ನಡೆ ಸ್ವಚ್ಛತೆಯ ಕಡೆ- ರನ್ ಫಾರ್ ಮಂಡ್ಯ” ಘೋಷವಾಕ್ಯದೊಂದಿಂಗೆ ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮಾರ್ಚ್ 8 ರಂದು ಬೆಳಿಗ್ಗೆ 6 ಗಂಟೆಗೆ ನಗರದ ಸರ್. ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ 25 ಸಾವಿರ ಜನರು ಭಾಗವಹಿಸುವಂತೆ ಈ ಮ್ಯಾರಾಥಾನ್ ಕಾರ್ಯಕ್ರಮಕ್ಕೆ ಅಗತ್ಯ ಸಿದ್ಥತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸಂಘಟನೆಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಮಾರ್ಚ್ 8 ರಂದು ನಡೆಯುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಬೇಕು. ಈ ಸಂಬಂಧ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಕುಡಿಯುವ ನೀರು, ಆಂಬುಲೆನ್ಸ್ ವ್ಯವಸ್ಥೆ ಹಾಗೂ ಉಪಹಾರದ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಮಾರ್ಚ್ 8 ರಂದು ನಡೆಯುವ ಮ್ಯಾರಾಥಾನ್ ಕಾರ್ಯಕ್ರಮಕ್ಕೆ ಹೊರಗಿನಿಂದ ಭಾಗವಹಿಸಲು ಅನುಕೂಲವಾಗುವಂತೆ ಆನ್ ಲೈನ್ ನೊಂದಣಿ ವ್ಯವಸ್ಥೆಗೆಷಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ನೌಕರರು ಎನ್‌.ಜಿ.ಓಗಳು ಮತ್ತು ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಈ ಸಂಬಂಧ ಅಗತ್ಯ ಸಿದ್ಥತೆ ಮಾಡಿಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಾಧಿಕಾರಿ ಶಿವಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರ್ ಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನರಸಿಂಹಮೂರ್ತಿ ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡ ಬೆನ್ನಲ್ಲೇ ಮೊದಲ ಹಂತದಲ್ಲಿ 24,300 ಹುದ್ದೆ ತುಂಬಲು ಸರ್ಕಾರ ಹೆಜ್ಜೆ ಇಟ್ಟಿದೆ

ಬೈರತಿಗೆ ಸಿಐಡಿ ವಶದಲ್ಲೇ ವೈದ್ಯಕೀಯ ಚಿಕಿತ್ಸೆ

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಮತ್ತೆ ಮೂವರ ಸೆರೆ

Leave a Comment