ಪಾಲನೆ ನ್ಯೂಸ್
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮ ಪಂಚಾಯಿತಿಯ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ (MVS) ಯ ಕಾರ್ಯಾಚರಣೆ ಮತ್ತು ನಿರ್ವಹಣೆ (O & M) ಸಂಬಂಧಿಸಿದಂತೆ ಇಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ. ಆರ್. ರವರು ಸ್ಥಳ ಪರಿಶೀಲನೆ ನಡೆಸಿದರು.
ಭೇಟಿಯ ವೇಳೆ MVS ಯೋಜನೆಯಡಿ ಗ್ರಾಮಗಳಿಗೆ ಸರಬರಾಜಾಗುತ್ತಿರುವ ಕುಡಿಯುವ ನೀರಿನ ಪ್ರಮಾಣ, ನೀರಿನ ಗುಣಮಟ್ಟ, ಪಂಪ್ ಹೌಸ್, ಪೈಪ್‌ಲೈನ್ ವ್ಯವಸ್ಥೆ, ನೀರು ಶುದ್ಧೀಕರಣ ಘಟಕ ಹಾಗೂ ದೈನಂದಿನ ನಿರ್ವಹಣಾ ಕಾರ್ಯಗಳ ಬಗ್ಗೆ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡರು.

PDO ಗಳ ಸಭೆ ನಡೆಸಿದ ಸಿಇಓ: ನೀರು ಸರಬರಾಜಿನಲ್ಲಿ ಯಾವುದೇ ಅಡಚಣೆ ಆಗದಂತೆ ನಿರಂತರ ನಿರ್ವಹಣೆ, ತ್ವರಿತ ದುರಸ್ತಿ ಕಾರ್ಯ, ಹಾಗೂ ಸಾರ್ವಜನಿಕರಿಗೆ ಶುದ್ಧ ಮತ್ತು ಸಮರ್ಪಕ ಕುಡಿಯುವ ನೀರು ಲಭ್ಯವಾಗುವಂತೆ PDO ಗಳು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶದ ಜನರಿಗೆ ಸುರಕ್ಷಿತ ಕುಡಿಯುವ ನೀರು ಒದಗಿಸುವುದು ಆದ್ಯತೆಯಾಗಿದ್ದು, MVS ಯೋಜನೆಯ O & M ಕಾರ್ಯಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.

ಎಲ್ಲಾ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು (AEE) ತಮ್ಮ ವ್ಯಾಪ್ತಿಯಲ್ಲಿನ MVS ಯೋಜನೆಗಳ O & M ಕಾರ್ಯಗಳನ್ನು ತಕ್ಷಣ ಅನುಸರಣೆ ಮಾಡಿ ಕೂಡಲೇ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಯಿತು.
ಈ ಸಂದರ್ಭದಲ್ಲಿ ಶ್ರೀರಂಗಪಟ್ಟಣ ತಾಲೂಕು ಪಂಚಾಯತ್ EO ಚಂದ್ರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ AEE ಸೌಮ್ಯ, AE ಪ್ರತಾಪ್, ತಾಲೂಕಿನ ಎಲ್ಲಾ PDO ಗಳು ಸೇರಿದಂತೆ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದ ಸಿಬ್ಬಂದಿಗಳು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn



