ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ-2026 ರ ಅಂಗವಾಗಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪಂ. ಮಂಡ್ಯ ರವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ.
ಪಾಲನೆ ನ್ಯೂಸ್
ಮಂಡ್ಯ: ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ-2026 ರ ಅಂಗವಾಗಿ ಪೂರ್ವಭಾವಿ ಸಭೆಯನ್ನು ನಡೆಸಿದರು.

ಸಭೆಯಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಆರೋಗ್ಯ ಪೂರ್ಣ ವಾತಾವರಣವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳ ಸಹಕಾರ ಸಹಾಯ ಬಹಳ ಮುಖ್ಯ. ಈ ಅಂತರ್ ರಾಷ್ಟ್ರೀಯ ಮಹಿಳಾ ದಿನಚರಣೆ ಒಂದು ದಿನದ ಆಚರಣೆಯಾಗಬಾರದು ಇದು ನಿರಂತರವಾಗಿ ಮಹಿಳೆಯರ ಸಮಸ್ಯೆಗಳನ್ನು ಪರಿಹರಿಸುವ ಜಾಗೃತಿ ಕಾರ್ಯಕ್ರಮವಾಗಬೇಕೆಂದು ತಿಳಿಸಿದರು.
ಮಹಿಳೆಯರ ಆರೋಗ್ಯ ಸಮಸ್ಯೆಗಳಾದ ಗರ್ಭಕಂಠ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಅಪೌಷ್ಟಿಕತೆ, ಋತು ಚಕ್ರ ನೈರ್ಮಲ್ಯ ನಿರ್ವಹಣೆ, ಉಚಿತ ಕಾನೂನು ಅರಿವು ಹಾಗೂ ಸಾಮಾಜಿಕ ಪಿಡುಗುಗಳಾದ ಬಾಲ್ಯ ವಿವಾಹ, ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ ಇತ್ಯಾದಿಗಳ ನಿರ್ಮೂಲನೆ ಬಗ್ಗೆ ವ್ಯಾಪಕ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ತಿಳಿಸಿದರು.

ಈ ಮಹಿಳಾ ದಿನಾಚರಣೆಯ ಅಂಗವಾಗಿ ಕಾಲೇಜು/ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ, ಅಡುಗೆ ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕಿಯರು, ಸ್ವ-ಸಹಾಯ ಸಂಘದ ಮಹಿಳೆಯರು ಹಾಗೂ ಸಾಮಾನ್ಯ ಮಹಿಳೆಯರಿಗೂ ಕೂಡ ವಿವಿಧ ಕ್ರೀಡೆಗಳನ್ನು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನವನ್ನು ವಿತರಿಸುವುದರ ಜೊತೆಗೆ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಾರ್ಯಕ್ರಮದ ವಿವಿಧ ಜವಾಬ್ದಾರಿಗಳನ್ನು ಹಂಚಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಉಪಕಾರ್ಯದರ್ಶಿ(ಅಭಿವೃದ್ಧಿ), ಜಿ,ಪಂ. ಮಂಡ್ಯ. ಉಪಕಾರ್ಯದರ್ಶಿ(ಆಡಳಿತ), ಜಿ,ಪಂ.ಮಂಡ್ಯ, ಯೋಜನಾ ನಿರ್ದೇಶಕರು, ಜಿ,ಪಂ. ಮಂಡ್ಯ. ಸಹಾಯಕ ಯೋಜನಾಧಿಕಾರಿ, ಜಿ,ಪಂ. ಮಂಡ್ಯ. ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
