NEWS

ರೈತರಿಂದ ತಂಬಾಕು ಅಧಿಕ ಬೆಲೆಗೆ ಖರೀದಿಸಲು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಭೆ

ಪಾಲನೆ ನ್ಯೂಸ್

ಮೈಸೂರು: ರಾಜ್ಯದಲ್ಲಿ ತಂಬಾಕು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ದವಿದೆ. ಈಗಾಗಲೇ ಕೊಟ್ಟ ಮಾತಿನಂತೆ ರೈತರಿಂದ ತಂಬಾಕು ಖರೀದಿ ಮಾಡಬೇಕು ಎಂದು ವರ್ತಕರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತಾಕೀತು ಮಾಡಿದರು.

ರಾಜ್ಯದಲ್ಲಿ ಸದ್ಯಕ್ಕೆ ನಡೆಯುತ್ತಿರುವ ಎಫ್ ಸಿವಿ ತಂಬಾಕು ಹರಾಜಿಗೆ ಸಂಬಂಧಿಸಿದಂತೆ ಇರುವ ಬಿಕ್ಕಟ್ಟಿನ ಬಗ್ಗೆ ತಂಬಾಕು ಬೆಳೆಯುವ ಪ್ರದೇಶ ಗಳೆ ಜನಪ್ರತಿನಿಧಿಗಳು, ಬೆಳೆಗಾರರು, ಖರೀದಿ ದಾರರು ಹಾಗೂ ತಂಬಾಕು ಮಂಡಳಿ ಉನ್ನತ ಅಧಿಕಾರಿಗಳ ಜತೆ ಸಚಿವರು ಸಭೆ ನಡೆಸಿದರು. ರೈತರನ್ನು ಕಾಪಾಡಿಕೊಳ್ಳಬೇಕಿದೆ. ಅವರಿಗೆ ನೀವು ಮಾತು ಕೊಟ್ಟಂತೆಯೇ ನಡೆದುಕೊಳ್ಳಿ.

ನೆರೆ ರಾಜ್ಯ ಆಂಧ್ರ ಪ್ರದೇಶದಂತೆಯೇ ಇಲ್ಲಿಯೂ ಉತ್ತಮ ದರವನ್ನು ಕೊಟ್ಟು ತಂಬಾಕು ಖರೀದಿ ಮಾಡಿ. ಸುಂಕ ಸೇರಿದಂತೆ ನಿಮಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಅದಕ್ಕೂ ಮೊದಲು ನಿಗದಿಯಂತೆ ತಂಬಾಕು ಖರೀದಿ ಮಾಡಿ ಎಂದು ಕೇಂದ್ರ ಸಚಿವರು ಹೇಳಿದರು. ಕೇಂದ್ರ ಸರ್ಕಾರ ಸಿಗರೇಟಿನ ಸುಂಕ ಹಾಕಿದೆ ಎಂದು ಹೇಳುತ್ತೀರಿ.

ಆದರೆ, ನೀವು ಸುಂಕ ಏರಿಕೆಯ ಭಾರವನ್ನು ಸಿಗರೇಟ್ ಸೇದುವ ಗ್ರಾಹಕನ ಮೇಲೆ ವಿಧಿಸುತ್ತೀರಿ. ಆದರೆ, ಇದಕ್ಕೆ ಸಂಬಂಧವೇ ಇಲ್ಲದ ಬೆಳೆಗಾರನ ಮೇಲೆ ಬರೆ ಏಕೆ ಎಳೆಯುತ್ತೀರಿ ಎಂದು ಕೇಂದ್ರ ಸಚಿವರು ವರ್ತಕರನ್ನು ಕಟುವಾಗಿ ಪ್ರಶ್ನಿಸಿದರು. ನಾನು, ಮೈಸೂರು ಸಂಸದ ಯದುವೀರ್ ಅವರು ಸತತವಾಗಿ ಸಂಬಂಧಪಟ್ಟ ಎಲ್ಲರ ಜತೆ ಮಾತುಕತೆ ನಡೆಸಿದ್ದೇವೆ ಎಂದರು. ನಿಮ್ಮ ಸಮಸ್ಯೆಗಳನ್ನು ಕೇಳಲು ನಾವು ಸಿದ್ಧರಿದ್ದೇವೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಅತಿದೊಡ್ಡ ಐಟಿ ಸಂಸ್ಥೆ ಇನ್ಫೋಸಿಸ್ 20 ಸಾವಿರ ಫ್ರೆಶರ್ಸ್ ನೇಮಕಕ್ಕೆ ನಿರ್ಧಾರ

ನಿಮ್ಮ ಬ್ಯಾಂಕ್ ಖಾತೆ ವಿವರ ಕೊಟ್ಟರೆ ಗೋವಿಂದ

ಆಪ್ತ ಸಂವಾದ: ವಿಶೇಷ ಸಾಹಿತ್ಯ ಕಾರ್ಯಕ್ರಮ

Leave a Comment