NEWS

ಆದಿಚುಂಚನಗಿರಿಯಲ್ಲಿ ಗಂಗಾಧರೇಶ್ವರ ಸ್ವಾಮಿ ರಥೋತ್ಸವ

ಪಾಲನೆ ನ್ಯೂಸ್

ನಾಗಮಂಗಲ: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಮಂಗಳವಾರ ಮುಂಜಾನೆ ಶ್ರೀ ಗಂಗಾಧರೇಶ್ವರ ಸ್ವಾಮಿಯ ರಥೋತ್ಸವ ಹಾಗೂ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಜರುಗಿತು. ರಥೋತ್ಸವ ಹಿನ್ನೆಲೆ ಶ್ರೀಕ್ಷೇತ್ರದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಹೋಳಿ ಹುಣ್ಣಿಮೆ ದಿನವಾದ ಮಂಗಳವಾರ ಮುಂಜಾನೆ ಬ್ರಾಹ್ಮ ಮುಹೂರ್ತದಲ್ಲಿ ಶ್ರೀ ಗಂಗಾಧರೇಶ್ವರಸ್ವಾಮಿಯ ಸರ್ವಾಲಂಕೃತ ರಥಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ‌

ಹಣ್ಣು, ದವನ ಮತ್ತು ಹೂವನ್ನು ಭಕ್ತರು ರಥದ ಮೇಲೆಸೆದು ಭಕ್ತಿ ಸಮರ್ಪಿಸಿದರು. ರಥದ ಮುಂಭಾಗ ನಿರ್ಮಲಾನಂದನಾಥ ಸ್ವಾಮೀಜಿ ಸರ್ವಾಂಲಕೃತ ಅಡ್ಡಪಲ್ಲಕ್ಕಿ ಉತ್ಸವ ಹಾಗೂ ಶ್ರೀ ಚೌಡೇಶ್ವರಿದೇವಿಯ ಉತ್ಸವ ಮೆರವಣಿಗೆ ಸಾಗಿತು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ ಶ್ರೀ ಕಾಲಭೈರವೇಶ್ವರಸ್ವಾಮಿ ಒಕ್ಕಲಿನ ಸಹಸ್ರಾರು ಸಂಖ್ಯೆಯ ಭಕ್ತರು ಮಹೋತ್ಸವಕ್ಕೆ ಸಾಕ್ಷಿಯಾದರು.

ಹರಕೆ ಹೊತ್ತ ಭಕ್ತರು: ರಥೋತ್ಸವ ಆರಂಭಕ್ಕೂ ಮುನ್ನವೇ ಭಕ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ದೇವರಲ್ಲಿ ವಿಜಯವಾಣಿ ಚಿ ಪ್ರಾರ್ಥಿಸಿ ಬಾಳೆಹಣ್ಣು, ದವನವನ್ನು ರಥದ ಮೇಲೆ ಎಸೆಯುತ್ತಿದ್ದರು. ಭಕ್ತರು ಬಾಳೆಹಣ್ಣಿನ ಮೇಲೆ ಆರೋಗ್ಯ ಸಮಸ್ಯೆ ನಿವಾರಿಸು, ಮದುವೆ ಮಾಡಿಸು ಭೈರವ, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಉತ್ತೀರ್ಣರನ್ನಾಗಿಸು ದೇವರೇ, ದಾಂಪತ್ಯ ಕಲಹ ನಿವಾರಿಸು ಎಂಬಿತ್ಯಾದಿ ಬರೆದು ಆದಿಚುಂಚನಗಿರಿ ಯಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಪ್ರಯುಕ್ತ ಶ್ರೀ ನಿರ್ಮಲಾ ನಂದನಾಥ ಸ್ವಾಮೀಜಿ ಅಡ್ಡಪಲ್ಲಕ್ಕಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು.

ರಥದ ಮೇಲೆಸೆದು ದೇವರಲ್ಲಿ ಹರಕೆ ಮಾಡಿಕೊಂಡರು. ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಶಂಭುನಾಥ ಸ್ವಾಮೀಜಿ, ಶ್ರೀ ಮಂಗಳನಾಥ ಸ್ವಾಮೀಜಿ, ಶ್ರೀ ಸೋಮನಾಥ ಸ್ವಾಮೀಜಿ, ಶ್ರೀ ಸತೀರ್ತಿನಾಥ ಸ್ವಾಮೀಜಿ, ವಿವಿಧ ಶಾಖಾ ಮಠಗಳ ಶ್ರೀಗಳು ಇದ್ದರು. ಅನ್ನಸಂತರ್ಪಣೆ ವಿವಿಧೆಡೆ ಜಾತ್ರೆಗೆ ಆಗಮಿಸುವ ಭಕ್ತರಿಗೆ ಮಠದ ಆವರಣದ ವಿವಿಧ ಕಡೆಗಳಲ್ಲಿ ಸೋಮವಾರ ಸಂಜೆಯಿಂದ ಮಂಗಳವಾರ ಬೆಳಗ್ಗೆವರೆಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು. ಆದಿಚುಂಚನಗಿರಿ ಜಾತ್ರೆಗೆ ರಾಜ್ಯ ಮಾತ್ರವಲ್ಲದೆ ಹೊರರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಸಾಗರೋಪಾದಿಯಲ್ಲಿ ಆಗಮಿಸಿದ್ದರು. ರಥದ ಬೀದಿ, ಕಲ್ಯಾಣಿ ಬೀದಿ ಸೇರಿ ಶ್ರೀಮಠದ ಬೆಟ್ಟದ ತಪ್ಪಲಿನ ಇಕ್ಕೆಲಗಳಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಆಧಾ‌ರ್ ಬದಲು ಸ್ಮಾರ್ಟ್‌ ಕಾರ್ಡ್

ಒಂದು ದೇಶ ಒಂದೇ ಮತಪಟ್ಟಿ ಪರಿಕಲ್ಪನೆ ಜಾರಿ ವಿಚಾರ

ಪೆಟ್ರೋಲಿಯಂ ಉತ್ಪನ್ನಗಳಾದ ಪೆಟ್ರೋಲ್, ಡೀಸೆಲ್ ಅಕ್ರಮವಾಗಿ ದಾಸ್ತಾನು ಮಾಡುವುದು ಕಾನೂನುಬಾಹಿರ

Leave a Comment