NEWS

ಯುದ್ದದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ನೆರವು

ಪಾಲನೆ ನ್ಯೂಸ್

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ಯುದ್ದದ ಭೀತಿಯಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಬಾಲಿವುಡ್ ನಟ ಸೋನು ಸೂದ್ ಅವರು ಉಚಿತ ವಸತಿ ವ್ಯವಸ್ಥೆಯನ್ನು ನೀಡುವುದಾಗಿ ಹೇಳಿಕೊಂಡಿದ್ದಾರೆ. ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ಸೇನಾ ಕಾರ್ಯಾಚರಣೆ ಬಳಿಕ ಮಧ್ಯಪ್ರಾಚ್ಯ ಹಾಗೂ ಗಲ್ಫ್ ದೇಶಗಳಲ್ಲಿ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಇದರ ಪರಿಣಾಮ ಸಾವಿರಾರು ಪ್ರವಾಸಿಗರು ದುಬೈ, ಕುವೈತ್ ಸೇರಿದಂತೆ ಅನೇಕ ಕಡೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಇದೀಗ, ಮಧ್ಯಪ್ರಾಚ್ಯದಲ್ಲಿ ಸಿಲುಕಿರುವ ಪ್ರವಾಸಿಗರಿಗೆ ಉಚಿತ ವಸತಿ ಕಲ್ಪಿಸುವುದಾಗಿ ಸೋನು ಸೂದ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಯುದ್ಧದ ಭೀತಿಯಲ್ಲಿ ಸಿಲುಕಿ ಊಟ, ವಸತಿಗಾಗಿ ಪರದಾಡುತ್ತಿರುವವರಿಗೆ ನಮ್ಮ ತಂಡದಿಂದ ಉಚಿತ ವಸತಿ ವ್ಯವಸ್ಥೆ ಮಾಡಿಕೊಡುತ್ತೇವೆ. ಈ ವ್ಯವಸ್ಥೆ ಭಾರತೀಯರಿಗೆ ಮಾತ್ರವಲ್ಲದೆ ವಿದೇಶಿ ಪ್ರವಾಸಿಗರಿಗೂ ನೀಡಲಾಗುತ್ತದೆ ಎಂದು ಅವರು ಹೇಳಿಕೊಂಡಿದ್ದಾರೆ. ‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕಂದಾಯ ಇಲಾಖೆಯಲ್ಲಿ ನೌಕರರು ಒಕ್ಕೊರಲನಿಂದ ಮತ್ತು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಒಳ್ಳೆಯ ಸಾಧನೆ ಮಾಡಬಹುದು: ಡಾ.ಕುಮಾರ

ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅಭಿನಂದನಾ ಗ್ರಂಥ ಲೋಕಾರ್ಪಣೆ, ಸಾವಯವ ಸಂತೆ, ವಧುವರರ ಅನ್ವೇಷಣೆ ಫೆ.14‌

ಅತ್ಯಾಚಾರ-ಹತ್ಯೆ ಮೂವರು ಅಪರಾಧಿಗಳಿಗೆ ಮರಣದಂಡನೆ

Leave a Comment