NEWS

ಟಿ-20 ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಪಾಲನೆ ನ್ಯೂಸ್

ಮುಂಬೈ: ಟಿ-20 ವಿಶ್ವಕಪ್ ಪಂದ್ಯಾವಳಿಯ 2ನೇ ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ದ ಗೆಲುವಿನ ನಗೆ ಬೀರಿದ ಭಾರತ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದರೊಂದಿಗೆ ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದೆ. ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಸೋಲು ಕಾಣುವುದರೊಂದಿಗೆ ಇಂಗ್ಲೆಂಡ್‌ ತನ್ನಪಯಣ ಅಂತ್ಯಗೊಳಿಸಿದೆ.

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸಂಜು ಸ್ಯಾಟ್ಸನ್ ಆಕರ್ಷಕ ಅರ್ಧಶತಕದ ನೆರವಿನಿಂದ ಭಾರತ ತಂಡ 254 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಇದನ್ನು ಬೆನ್ನತ್ತಿದ ಇಂಗ್ಲೆಂಡ್ ರನ್ ಸರಾಸರಿಯನ್ನು ಕಾಯ್ದುಕೊಂಡು ಸೆಣಸಿದರೂ ಅಂತಿಮವಾಗಿ ವೀರೋಚಿತವಾಗಿ ಹೋರಾಟ ನಡೆಸಿ 246ರನ್‌ಗೆ 7 ವಿಕೆಟ್ ಕಳೆದುಕೊಂಡು ಪಂದ್ಯ ಕೈಚೆಲ್ಲಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ಮೈದಾನದಲ್ಲಿ ಕಿಕ್ಕಿರಿದು ತುಂಬಿದ ಅಭಿಮಾನಿಗಳಿಗೆ ರಸದೌತಣ ಉಣಬಡಿಸಿತು. ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಸಂಜು ಸ್ಯಾಟ್ಸನ್ ಸೆಮಿಫೈನಲ್ ಪಂದ್ಯದಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದರು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ದೇವರ ದಾಸಿಮಯ್ಯ ಅವರ ಮೌಲ್ಯ ಹಾಗೂ ಆದರ್ಶಗಳನ್ನು ಬೆಳೆಸಿಕೊಳ್ಳಿ: ನಾಗೇಂದ್ರ ಕುಮಾರ್

ಮಳವಳ್ಳಿ ತಾಲ್ಲೂಕಿನಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಜಾಸೌಧದ ಶಿಲಾನ್ಯಾಸ ಕಾರ್ಯಕ್ರಮದ ನಿಮಿತ್ತ  ಮಳವಳ್ಳಿ ತಾಲ್ಲೂಕಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2

Leave a Comment