NEWS

ಇರಾನ್‌ನ ನಾಯಕ ಅಯತ್ತೊಲ್ಲಾ ಅಲಿ ಖಮೇನಿ ಸಾವಿಗೆ ಭಾರತ ಸಂತಾಪ

ಪಾಲನೆ ನ್ಯೂಸ್

ಹೊಸದಿಲ್ಲಿ: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಭಾರತ ವಿಳಂಬವಾಗಿ ಸಂತಾಪ ವ್ಯಕ್ತಪಡಿಸಿದೆ. ಖಮೇನಿ ಹತ್ಯೆ ಬಗ್ಗೆ ಮೌನವಹಿಸಿದ್ದ ಪ್ರಧಾನಿ ಮೋದಿ ವಿರುದ್ದ ವಿಪಕ್ಷಗಳಿಂದ ಭಾರೀ ಟೀಕೆ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಸಂತಾಪ ಸೂಚಿಸಿದೆ. ಕೇಂದ್ರ ಸರ್ಕಾರದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ಅವರು ದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಕ ಪುಸ್ತಕಕ್ಕೆ ಸಹಿ ಹಾಕಿದ್ದು, ಹತ್ಯೆಗೀಡಾದ ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರಿಗೆ ಸಂತಾಪ ಸೂಚಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಟಿ-20 ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಸಂಪರ್ಕ ಸೇತುವಾದ ಕೃಷಿಕ ಸಮಾಜಕ್ಕೆ ಸ್ವಂತ ಕಟ್ಟಡಕ್ಕೆ ಅನುದಾನ: ದಿನೇಶ್ ಗೂಳೀಗೌಡ ಭರವಸೆ

ಮಾರ್ಚ್ 8ರಂದು 600 ಕಲಿಕಾರ್ಥಿಗಳಿಗೆ ಸಾಕ್ಷರತಾ ಪರೀಕ್ಷೆ

Leave a Comment