NEWS

ನಾರಿ ಶಕ್ತಿಗೆ ಕಾನೂನಿನ ಅರಿವು ಅಗತ್ಯ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಸುಬ್ರಹ್ಮಣ್ಯ ಜೆ.ಎನ್ ಅಭಿಪ್ರಾಯ

ಪಾಲನೆ ನ್ಯೂಸ್

ಮಂಡ್ಯ : ಇಂದು ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ – 2026 ರ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಲಿಂಗತ್ವ ದೌರ್ಜನ್ಯ ತಡೆ ಕಾರ್ಯಾಗಾರವನ್ನು ಉದ್ಟಾಟಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಸುಬ್ರಹ್ಮಣ್ಯ ಜೆ.ಎನ್ ಅವರು 31 ಜಿಲ್ಲೆಗಳ ನ್ಯಾಯಾಲಯಗಳಲ್ಲಿ 13 ಜನ ಮಹಿಳೆಯರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿರುವುದು ನಾರಿಯರ ಶಕ್ತಿಯನ್ನು ತೋರಿಸುತ್ತದೆ ಎಂದರು.

ಪ್ರತಿಯೊಂದು ಗ್ರಾಮಗಳಲ್ಲಿ ಮಹಿಳೆಯರಿಗೆ ಉಂಟಾಗುವ ಸಮಸ್ಯೆ ಹಾಗೂ ಮಹಿಳೆಯರ ಹಕ್ಕುಗಳ ಬಗ್ಗೆ NRLM ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ ಸಿ ಆರ್ ಪಿ ರವರಿಗೆ ಜ್ಞಾನ ಹೆಚ್ಚಿಸಿ ಅದನ್ನು ಉಳಿದ ಗ್ರಾಮೀಣ ಭಾಗದ ಮಹಿಳೆಯರಿಗೆ ತಲುಪಿಸಬೇಕಾಗಿದ್ದು, ಈ ನಿಟ್ಟಿನಲ್ಲಿ ಏರ್ಪಡಿಸಲಾಗಿರುವ ಕಾರ್ಯಾಗಾರವನ್ನು ಸದುಪಯೋಗ ಪಡೆದುಕೊಳ್ಳಬೇಕು. ಆ ಮೂಲಕ ಹೆಣ್ಣು ಮಕ್ಕಳಿಗೆ ಕಾನೂನಿನ ವ್ಯವಸ್ಥೆ ಮತ್ತು ಸರಿಯಾದ ಮಾರ್ಗದರ್ಶನ ನೀಡಬೇಕು ಎಂದರು.

ಕಾರ್ಯಾಗಾರ ಕುರಿತು ಜಿ.ಪಂಚಾಯಿತಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ ಆರ್ ರವರು ಮಾತನಾಡಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ – 2026 ಅಂಗವಾಗಿ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣ, ಹಕ್ಕುಗಳ ರಕ್ಷಣೆ, ಆರೋಗ್ಯ ಮತ್ತು ಸಮಾನತೆಯನ್ನು ಉತ್ತೇಜಿಸಲು ವಿವಿಧ ಇಲಾಖೆ ಹಾಗೂ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಲಾಗಿದ್ದು, ಇದು ಕಾರ್ಯಾಗಾರದ ಮೊದಲ ಹೆಜ್ಜೆಯಾಗಿದೆ ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಲ್ಲಿ ಕಾರ್ಯನಿರ್ವಾಹಿಸುತ್ತಿರುವ ಎಲ್ ಸಿ ಆರ್ ಪಿ ರವರು, ಲಿಂಗತ್ವ ದೌರ್ಜನ್ಯ ತಡೆ ಸಂಬಂಧ ಕಾನೂನು ಅರಿವು ಮೂಡಿಸಿ, ಗ್ರಾಮ ಮಟ್ಟದಲ್ಲಿ ನೊಂದ ಮಹಿಳೆಯರಿಗೆ ನೆರವು ನೀಡಲು ಶ್ರಮಿಸಬೇಕು ಎಂದು ತಿಳಿಸಿದರು.

ಜಿಲ್ಲೆಯ ಆಯ್ದ 17 ಗ್ರಾಮ ಪಂಚಾಯಿತಿಗಳಲ್ಲಿ 18 ವರ್ಷದೊಳಗಿನ ಕಿಶೋರಿಯರ ಸ್ವ-ಸಹಾಯ ಗುಂಪುಗಳನ್ನು ಸೃಜನೆ ಮಾಡಲಾಗುತ್ತಿದೆ.  19-34 ವರ್ಷದೊಳಗಿನ ಹಾಗೂ 35-45 ವಯೋಮಿತಿಯೊಳಗಿನ ಮಹಿಳೆಯರನ್ನು ಗುರುತಿಸಿ ಅವರಿಗೆ ಮುಟ್ಟಿನ ಕಪ್ ಬಗ್ಗೆ ಅರಿವು ಮೂಡಿಸಿ ಪ್ಯಾಡ್ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡಲು  ಪ್ರೇರೇಪಿಸಲಾಗುತ್ತಿದೆ ಎಂದರು.

ಎನ್ ಆರ್ ಎಲ್ ಎಂ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಎಲ್ ಸಿ ಆರ್ ಪಿ ರವರು ಹಳ್ಳಿಗಾಡಿನ ಪ್ರದೇಶಗಳಲ್ಲಿ ಮಾಹಿತಿ ತಲುಪಿಸಲು ಇರುವ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ಅದರಿಂದ ಇವರಿಗೆ ಕಾನೂನಿನ ಅರಿವು ಮತ್ತು ಪರಿಕಲ್ಪನೆ ಬಗ್ಗೆ ಮಾಹಿತಿ ನೀಡಿ, ಆ ಮೂಲಕ ಸ್ಥಳೀಯ ಹಂತದಲ್ಲಿ ಈ ಕಾರ್ಯಾಗಾರದ ಬಗ್ಗೆ ಜಾಗೃತಿ ಮೂಡಿಸಿದಾಗ ಕಾರ್ಯಕ್ರಮ ಯಶಸ್ವಿಗೊಳಿಸಿದಂತೆ ಆಗುತ್ತದೆ ಎಂದರು.

ಭಾರತದಲ್ಲಿ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲು ಸಂವಿಧಾನದಲ್ಲಿ ಹಲವು ಕಾನೂನುಗಳು ಇದ್ದರೂ, ಲಿಂಗ ಸಮಾನತೆ ಸಾಧಿಸಲು ಸಮಾಜದ ಜಾಗೃತಿ ಕೂಡ ತುಂಬಾ ಅಗತ್ಯ. ಮಹಿಳೆಯರು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳುವುದರ ಜೊತೆಗೆ ಧೈರ್ಯದಿಂದ ತಮ್ಮ ಹಕ್ಕುಗಳನ್ನು ಕಾನೂನಿನ ಸಹಾಯದಿಂದ ಪಡೆದಕೊಳ್ಳಲು ಮುಂದಾಗಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಆನಂದ್ ಎಂ ರವರು ತಿಳಿಸಿದರು.

ನಮ್ಮ ದೈನಂದಿನ ಜೀವನದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಎಂಬ ಮಹಾತ್ವಾಕಾಂಕ್ಷೆಯ ವಂತಿಕೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು ಇದರ ಬಗ್ಗೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಸವಿತ ರವರು ಉಪನ್ಯಾಸವನ್ನು ನೀಡಿದರು.

ಇದೇ ವೇಳೆ ಯೋಜನಾ ನಿರ್ದೇಶಕರು ಸುಂದರ್ ರಾಜ್, ಸಹಾಯಕ ಯೋಜನಾಧಿಕಾರಿ ಶ್ರೀಹರ್ಷ ಹಾಗೂ ಎನ್ ಆರ್ ಎಲ್ ಎಂ ಸಿಬ್ಬಂದಿಗಳು ಮತ್ತು ಎಲ್ ಸಿ ಆರ್ ಪಿ ರವರು ಹಾಜರಿದ್ದರು.‌

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಇಂದು ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ

ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ – 2026

ಯುಗಾದಿ ʻರಂಗೋಲಿ ಸ್ಪರ್ಧೆʼ

Leave a Comment