NEWS

ಮಾರ್ಚ್ 8ರಂದು 600 ಕಲಿಕಾರ್ಥಿಗಳಿಗೆ ಸಾಕ್ಷರತಾ ಪರೀಕ್ಷೆ

ಪಾಲನೆ ನ್ಯೂಸ್

ಮಂಡ್ಯ: ಮಾರ್ಚ್ 8 ರಂದು ರಂದು ನಾಗಮಂಗಲ ತಾಲ್ಲೂಕಿನ ಪಾಲಗ್ರಹಾರ ಗ್ರಾಮ ಪಂಚಾಯಿತಿಯಲ್ಲಿ 08 ಪರೀಕ್ಷಾ ಕೇಂದ್ರಗಳನ್ನು ಹಾಗೂ ಜಿಲ್ಲಾ ಕಾರಾಗೃಹದಲ್ಲಿ 01 ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಲಾಗಿದ್ದು, ಈ ಪರೀಕ್ಷಾ ಕೇಂದ್ರಗಳಲ್ಲಿ ಕಲಿಕಾರ್ಥಿಗಳಾಗಿ ನೊಂದಣಿಯಾಗಿರುವ ಸುಮಾರು 600 ಕಲಿಕಾರ್ಥಿಗಳಿಗೆ ಸಾಕ್ಷರತಾ ಪರೀಕ್ಷೆ ನಡೆಸಲಾಗುತ್ತಿದೆ ಹಾಗೂ ಬೆಳಿಗ್ಗೆ 10.00 ರಿಂದ ಸಂಜೆ 5.00 ಗಂಟೆಯವರೆಗೆ 03 ಅವಧಿಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕಲಿಕಾರ್ಥಿಗಳಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ತಿಳಿಸಿದರು.

ಒಟ್ಟು 150 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 60 ಅಂಕಗಳನ್ನು ಗಳಿಸಿದವರನ್ನು ಉತ್ತೀರ್ಣರೆಂದು ಘೋಷಿಸಿ, ನವ ಸಾಕ್ಷರತಾ ಪ್ರಮಾಣ ಪತ್ರವನ್ನು ವಿತರಿಸಲಾಗುವುದು ಹಾಗೂ ಪರೀಕ್ಷೆ ಮುಗಿದ ನಂತರ ತಾಲ್ಲೂಕು ಹಂತದಲ್ಲಿ ಮೌಲ್ಯಮಾಪನ ನಡೆಯಲಿದ್ದು, ಒಂದು ವಾರದೊಳಗೆ ಫಲಿತಾಂಶ ಘೋಷಣೆ ಮಾಡಲಾಗುವುದು. ಫಲಿತಾಂಶ ಬಂದ ನಂತರ ಸದರಿ ಗ್ರಾಮ ಪಂಚಾಯಿತಿಯನ್ನು ಸಂಪೂರ್ಣ ಸಾಕ್ಷರತಾ ಗ್ರಾಮ ಪಂಚಾಯಿತಿ ಎಂದು ಘೋಷಿಸಲಾಗುವುದು ಎಂದು ಜಿ.ಪಂ. ಸಿಇಒ ತಿಳಿಸಿದರು.

ಈ ಪರೀಕ್ಷೆಯನ್ನು DSERT, DIET ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಗಳ ಸಹಕಾರದೊಂದಿಗೆ ನಡೆಸಲಾಗುತ್ತಿದೆ. ಪರೀಕ್ಷೆಯ ಗೌಪ್ಯತೆಯನ್ನು ಕಾಪಾಡಿಕೊಂಡು ನಿಯಮಾನುಸಾರವಾಗಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ನಂದಿನಿ ಕೆ.ಆರ್. ರವರು ಸೂಚಿಸಿದರು.

ಈ ಸಭೆಯಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಟಿ. ಲಕ್ಷ್ಮಿ, ಬಿಇಒ ಮಹಾದೇವ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸಭೆಯಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಟಿ. ಲಕ್ಷ್ಮಿ, ಬಿಇಒ ಮಹಾದೇವ, KSWAN ಮೂಲಕ DIET ಪ್ರಾಂಶುಪಾಲರು, BRC ಹಾಗೂ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.‌

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಡಿ.29 ರಂದು ವಿಶ್ವಮಾನವ ದಿನಾಚರಣೆ, ವಿಶೇಷ ಉಪನ್ಯಾಸ

ಹಮಾಲಿ ಕೂಲಿ ಕಾರ್ಮಿಕರ ಕುಂದುಕೊರತೆಗಳ ಚರ್ಚೆ

ಕಲ್ಲಿನಲ್ಲಿ ಕಾವ್ಯ ಬರೆದ ಮಹಾನ್ ಚೇತನ ಅಮರ ಶಿಲ್ಪಿ ಜಕಣಾಚಾರಿ

Leave a Comment