NEWS

ಮೈಸೂರಿಗರ ಮನಸೂರೆ

ಪಾಲನೆ ನ್ಯೂಸ್

ಮೈಸೂರು : ಪ್ಯಾರಾ ಮೆಡಿಕಲ್ ಕೋರ್ಸ್: ಮೈಸೂರಿನಲ್ಲಿ 16 ಎಲೆಕ್ನಿಕ್ ಕೋಟಿ ರೂ. ವೆಚ್ಚದಲ್ಲಿ ಪ್ರೈಡರ್ (Schneider Electric) ಕೇಂದ್ರ ಸ್ಥಾಪನೆ. ಮೈಸೂರಿ ನಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುವುದು. ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿ ಕೆಐಎಡಿಬಿ ಯಿಂದ ‘ಏರೋಸ್ಪೇಸ್ ಪಾರ್ಕ್’ ನಿರ್ಮಾಣವಲ್ಲದೆ, ಮೈಸೂರಿನಲ್ಲಿ ಉದ್ಯಮಿಗಳಿಗೆ ಇನ್ಯುಬೇಶನ್ ಸೌಲಭ್ಯ ಗಳನ್ನು ಒದಗಿಸಲು ಕಿಯೋನಿಕ್ಸ್ ಸಂಸ್ಥೆಯ ಮೂಲಕ ಪ್ಲಗ್-ಅಂಡ್-ಪ್ಲೇ ಸೌಲಭ್ಯದ ‘ಲೀಪ್ ಲ್ಯಾಬ್’ ಸ್ಥಾಪಿಸಲಾಗುವುದು.

ಸೈಕ್ಲಿಂಗ್ ವೆಲೋಡೋಮ್: ಮೈಸೂರಿನ ದಟ್ಟಗಳ್ಳಿಯಲ್ಲಿ ಆಧುನಿಕ ಸೈಕ್ಲಿಂಗ್ ವೆಲೋಡೋಮ್ ಆರಂಭಿಸಲಾಗುವುದು. ಮೈಸೂರಿನಲ್ಲಿರುವ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಸಮಗ್ರ ಮೂಲಸೌಕರ್ಯ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಖ್ಯಾತ ಚಲನಚಿತ್ರ ನಿರ್ದೇಶಕ ದಿ.ಪುಟ್ಟಣ್ಣ ಕಣಗಾಲ್‌ರವರ ನಿವಾಸವನ್ನು ವಸ್ತುಸಂಗ್ರಹಾಲಯವನ್ನಾಗಿ ಅಭಿವೃದ್ಧಿಪಡಿ ಸಲಾಗುವುದು. ಮೈಸೂರು ನಗರದಲ್ಲಿ ಪ್ರಾಯೋಗಿಕವಾಗಿ ‘ಇ-ಕೋರ್ಟ್’ ಸ್ಥಾಪನೆ ಮಾಡಲಾ ಗುವುದು ಎಂದು ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ತಾಂಡವಪುರದಲ್ಲಿ ಸಿಲ್ಕ್ ಪಾರ್ಕ್: ವರುಣ ಕ್ಷೇತ್ರದಲ್ಲಿ ಫಿಲಂ ಸಿಟಿ ನಿರ್ಮಾಣಕ್ಕೆ ಚಾಲನೆ ಸಿಗುವ ಹೊತ್ತಿನಲ್ಲೇ ತಾಂಡವಪುರಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆ ಘೋಷಣೆ ಮಾಡಿರುವುದರಿಂದ ದೊಡ್ಡ ಅನುಕೂಲವಾಗಲಿದೆ ಅಡಕನಹಳ್ಳಿ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ರಮುಖ ಕೈಗಾರಿಕೆಗಳು ಇದ್ದು, ಸಿಲ್ಕ್ ಪಾರ್ಕ್ ಸ್ಥಾಪನೆ ದೊಡ್ಡ ಮಟ್ಟದಲ್ಲಿ ಗಮನ ಸೆಳೆಯಲು ದಾರಿಯಾಗಿದೆ.

ಏರೋಸ್ಪೇಸ್ ಪಾರ್ಕ್ ಸ್ಥಾಪನೆ : ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಅಗತ್ಯ ಇರುವ ಭೂಮಿ ಸ್ವಾಧೀನಕ್ಕೆ 370 ಕೋಟಿ ರೂ. ನೀಡಿದ್ದ ಸಿಎಂ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಏರೋಸ್ಪೇಸ್ ಪಾರ್ಕ್ ನಿರ್ಮಾಣ ಮಾಡಲು ಘೋಷಣೆ ಮಾಡಿರುವುದು ಮುಂದೆ ದೊಡ್ಡ ಅನುಕೂಲವಾಗಲಿದೆ. ಇತ್ತೀಚಿನ ವರ್ಷಗಳಲ್ಲಿ ತಾಂಡ್ಯ, ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆ ತೆರೆಯಲು ಉದ್ಯಮಿಗಳು ಒಲವು ತೋರಿರುವ ಕಾರಣ ಏರೋಸ್ಪೇಸ್ ಪಾರ್ಕ್ ಸ್ಥಾಪನೆ ಮತ್ತಷ್ಟು ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ಕಾರಣವಾಗಿದೆ.

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಪದ್ಮಶ್ರೀ ಪ್ರಶಸ್ತಿ ವಿಜೇತ ಅಂಕೇಗೌಡರಿಗೆ ಜಿಲ್ಲಾಧಿಕಾರಿ ಸನ್ಮಾನ

ಪು.ತಿ.ನ ಮೌಲ್ಯ ಆದರ್ಶ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು

ಹೆದ್ದಾರಿ ಒತ್ತುವರಿ ತೆರವಿಗೆ 15ರವರೆಗೆ ಗಡುವು

Leave a Comment