ಪಾಲನೆ ನ್ಯೂಸ್
ಬೆಂಗಳೂರು: ಹೈಕಮಾಂಡ್ ಮೇಲೆ ವಿಶ್ವಾಸವಿದೆ. ಅವಕಾಶ ಕೊಟ್ಟರೆ ಮುಂದಿನ ಎರಡು ಬಜೆಟ್ ಗಳನ್ನೂ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೊಸದಿಲ್ಲಿ ಪ್ರಯಾಣ ಕೈಗೊಂಡಿರು ವುದು ತೀವ್ರ ಕುತೂಹಲ ಕೆರಳಿಸಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಉದ್ಘಾಟನೆಯಲ್ಲಿ ಭಾಗವಹಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ಖರ್ಗೆ ಅಲ್ಲಿಂದ ನೇರವಾಗಿ ವಿಶೇಷ ವಿಮಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರೊಂದಿಗೆ ದಿಲ್ಲಿಗೆ ಪ್ರಯಾಣಿಸಿ ದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ದಿಲ್ಲಿಗೆ ತೆರಳುತ್ತಿರುವುದಾಗಿ ಶಿವಕುಮಾರ್ ಕಚೇರಿ ಮಾಹಿತಿ ನೀಡಿದೆ.

ಈ ಭೇಟಿ ರಾಜಕೀಯವಾಗಿ ನಾನಾ ರೀತಿಯ ಚರ್ಚೆಗಳನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಜೆಟ್ ಮಂಡನೆಗೆ ಅವಕಾಶ ನೀಡಬಾರದು. ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಶಿವಕುಮಾರ್ ಕಳೆದ ಡಿಸೆಂ ಬರ್‌ನಲಿ ಪಟುಹಿಡಿದಿದರು. ಪರ ಕೆಲ ಶಾಸಕರೂ ದಿಲ್ಲಿಗೆ ಹೋಗುವ ಸಾಧ್ಯತೆ? ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಣ ಐಸಿಸಿ ಮೆನ್ಸ್ ಟಿ-20 ವಿಶ್ವಕಪ್ ಫೈನಲ್ ಪಂದ್ಯದ ನೇರ ಪ್ರಸಾರವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ವೀಕ್ಷಿಸಿದರು.
ಕೆಲ ತಿಂಗಳುಗಳ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಸೇರಿದಂತೆ ಹಲವರನ್ನು ಭೇಟಿ ಮಾಡಿದ್ದ ಶಿವಕುಮಾರ್ ಒತ್ತಡ ಹೇರುವ ಪ್ರಯತ್ನ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಎಲ್ಲವೂ ರಾಹುಲ್ ಗಾಂಧಿ ಅವರ ಮೇಲೆ ಅವಲಂಬಿತವಾಗಿದೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
