NEWS

ನಾನು ಸ್ತ್ರೀ ಅಭಿಯಾನಕ್ಕೆ ಇಂದು ಸಂಜೆ ಚಾಲನೆ

ಸಮಾಜಮುಖಿ ಸಂಸ್ಥೆ ‘ಕ್ರಿಯಾ’ ಹತ್ತನೇ ವರ್ಷದ ಸಂಭ್ರಮಕ್ಕೆ ವಿನೂತನ ಕಾರ್ಯಕ್ರಮ

ಪಾಲನೆ ನ್ಯೂಸ್

ಮಂಡ್ಯ: ‘ಕ್ರಿಯಾ’ ಸಂಸ್ಥೆಯ “ನಾನು ಸ್ತ್ರೀ” ಘಟಕದ ವತಿಯಿಂದ ಹಮ್ಮಿಕೊಂಡಿರುವ “ನಾನು ಸ್ತ್ರೀ” ಅಭಿಯಾನಕ್ಕೆ ಇಂದು ಸಂಜೆ ಚಾಲನೆ ನೀಡಲಾಗುತ್ತಿದೆ.

ಮೈಸೂರಿನ ಸಮಾಜಮುಖಿ ಸಂಸ್ಥೆಯಾದ ‘ಕ್ರಿಯಾ’  ತನ್ನ ಹತ್ತನೇ ವರ್ಷದ ಸಂಭ್ರಮದಲ್ಲಿದೆ. ಈ ವಿಶೇಷ ಸಂದರ್ಭದಲ್ಲಿ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ, ವಿದ್ಯಾರ್ಥಿನಿಯರ ಸಬಲೀಕರಣಕ್ಕಾಗಿ “ನಾನು ಸ್ತ್ರೀ” ಎಂಬ ಒಂದು ತಿಂಗಳ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಆಯ್ದ  ಸರ್ಕಾರಿ ವಸತಿ ನಿಲಯಗಳಲ್ಲಿರುವ ಸುಮಾರು 3000ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ, ಜೀವನ ಕೌಶಲ್ಯ ಮತ್ತು ವ್ಯಕ್ತಿತ್ವ ವಿಕಸನ ತರಬೇತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಕ್ರಿಯಾ  ಮುಖ್ಯಸ್ಥರಾದ ಪ್ರಸನ್ನಕುಮಾರ್ ಕೆರಗೋಡು ತಿಳಿಸಿದ್ದಾರೆ.

ಮೈಸೂರಿನ ವಿಜಯನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಪಾಲನೆ.ಇನ್ ವಾಟ್ಸ್ ಆ್ಯಪ್  ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ. https://chat.whatsapp.com/H1gUYgrzvnQGZAhIQSGMHn

Related posts

ಶಾಲೆಯಿಂದ ಹೊರಗುಳಿದ ಹದಿಹರೆಯದ ಮಕ್ಕಳ ಮೇಲೆ ನಿಗಾ ವಹಿಸಿ: ಸಂಗಮೇಶ ಬಬಲೇಶ್ವರ

ರೈತರ ಸಮಸ್ಯೆ ಪರಿಹಾರಕ್ಕೆ ಹೋರಾಟ ರೂಪಿಸುವಂತೆ : ಚಂದ್ರಶೇಖರ್ ಸಲಹೆ

ಭಾರತದ ಕಲೆ, ಸಾಹಿತ್ಯ ಸಂಸ್ಕೃತಿಯನ್ನು ಎತ್ತಿ ಹಿಡಿದ ವೀರ ಶಿವಾಜಿ ಮಹಾರಾಜರು

Leave a Comment