NEWS

ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿರುವ ಇರಾನ್

ಪಾಲನೆ ನ್ಯೂಸ್

ದುಬೈ: ದುಬೈ ವಿಮಾನ ನಿಲ್ದಾಣದ ಮೇಲೆ ದಾಳಿ ಭಾರತೀಯ ಸೇರಿ ನಾಲ್ವರಿಗೆ ಗಾಯ, ವಿಮಾನ ಸಂಚಾರಕ್ಕೆ ಅಡ್ಡಿ ಇಲ್ಲ ಬುಧವಾರ ದುಬೈ ವಿಮಾನ ನಿಲ್ದಾಣದ ಬಳಿ ಡೋನ್‌ಗಳನ್ನು ಸ್ಪೋಟಿಸಿದ್ದು, ಘಟನೆಯಲ್ಲಿ ನಾಲ್ವರು ಗಾಯ ಗೊಂಡಿದ್ದಾರೆ. ಆದರೂ ವಿಮಾನ ಸಂಚಾರ ಎಂದಿನಂತೆ ಮುಂದುವರಿದಿದೆ ಎಂದು ದುಬೈ ಸರ್ಕಾರ ತಿಳಿಸಿದೆ. ಬುಧವಾರ ಮಧ್ಯಾಹ್ನ ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಎರಡು ಡೋನ್ ಗಳು ಸ್ಫೋಟಗೊಂಡಿದ್ದು, ಘಟನೆಯಲ್ಲಿ ಘಾನಾದ ಇಬ್ಬರು ಪ್ರಜೆಗಳು ಮತ್ತು ಒಬ್ಬ ಬಾಂಗ್ಲಾದೇಶಿ ಪ್ರಜೆಗೆ ಗಂಭೀರ ಗಾಯಗಳಾಗಿವೆ ಮತ್ತು ಒಬ್ಬ ಭಾರತೀಯ ಪ್ರಜೆಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

‘ಈಗ ಮಧ್ಯಪ್ರಾಚ್ಯದಲ್ಲಿ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳೇ ನಮ್ಮ ಗುರಿಗಳಾಗಿವೆ ಎಂದು ಇರಾನಿನ ಜಂಟಿ ಮಿಲಿಟರಿ ಕಮಾಂಡ್ ಬುಧವಾರ ಹೇಳಿದೆ. ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಟೆಹ್ರಾನ್‌ನಲ್ಲಿರುವ ಬ್ಯಾಂಕಿನ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಇರಾನಿನ ಮಾಧ್ಯಮ ವರದಿ ಮಾಡಿದ ನಂತರ ಇರಾನ್ ಕೂಡ ಗಲ್ಫ್ ರಾಷ್ಟ್ರಗಳ ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳನ್ನು ಟಾರ್ಗೆಟ್ ಮಾಡುತ್ತಿದೆ.

ಇರಾನ್‌ನ ಈ ಬೆದರಿಕೆ ವಿಶೇಷವಾಗಿ ದುಬೈ ಅನ್ನು ಗಲ್ಫ್ ರಾಷ್ಟ್ರಗಳ ಬ್ಯಾಂಕ್, ಹಣಕಾಸು ಸಂಸ್ಥೆಗಳೇ ನಮ್ಮ ಗುರಿ: ಇರಾನ್ ಹೊರ್ಮುಜ್ ಬಳಿ ಎರಡು ಹಡಗುಗಳ ಮೇಲೆ ದಾಳಿ ಇರಾನ್‌ ಗೆ ಹೊಂದಿಕೊಂಡಿರುವ ಆಯಕಟ್ಟಿನ ಹೊರ್ಮುಜ್ ಜಲಸಂಧಿಯ ಬಳಿ ಬುಧವಾರ ಅಪರಿಚಿತ ಕ್ಷಿಪಣಿಯೊಂದು ಸರಕು ಹಡಗಿಗೆ ಡಿಕ್ಕಿ ಹೊಡೆದಿದ್ದು, ಬೆಂಕಿ ಹೊತ್ತಿಕೊಂಡಿದೆ. ನಂತರ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಇನ್ನು ಯುಎಇ ಕರಾವಳಿಯಲ್ಲಿ ಗುರುತಿಸಲಾಗದ ಕ್ಷಿಪಣಿಯೊಂದು ಎರಡನೇ ಕಂಟೇನರ್ ಹಡಗಿನ ಮೇಲೆ ದಾಳಿ ಮಾಡಿದೆ. ಅಪಾಯಕ್ಕೆ ಸಿಲುಕಿಸುತ್ತಿದೆ. ಇದು ಅನೇಕ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆಗಳಿಗೆ ನೆಲೆಯಾಗಿದೆ.

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಜಾಗೃತ ದಳ ಡಯಾಗೋಸ್ಟಿಕ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ

ಮಾದಕ ವಸ್ತು ಗಾಂಜಾ ಮಾರಾಟ, ಸಾಗಣೆ: ಐವರ ಬಂಧನ

ಫೆ.1ರಂದು ಶಿವಳ್ಳಿ ಗ್ರಾಮದಲ್ಲಿ ಹಿಂದು ಸಮಾಜೋತ್ಸವ

Leave a Comment