NEWS

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಸಿ

ಸಿಸಿಟಿವಿ ಕಣ್ಗಾವಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ – ಡಾ.ಕುಮಾರ

ಪಾಲನೆ ನ್ಯೂಸ್

ಮಂಡ್ಯ: ಮಾರ್ಚ್ 18 ರಿಂದ ಏಪ್ರಿಲ್ 2 ವರೆಗೆ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಪಾರದರ್ಶಕವಾಗಿ ನಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಹೇಳಿದರು.ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ
ಎಸ್ ಎಸ್ ಎಲ್ ಸಿ ಪರೀಕ್ಷೆ -1 ಅನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸದರಿ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 20650 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 62 ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಸಮಯದಲ್ಲಿ ಪರೀಕ್ಷಾ ಕೇಂದ್ರ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್ ಹಾಗೂ ಸೈಬರ್ ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲಾ ಖಜಾನೆಯಿಂದ ಪ್ರಶ್ನಾ ಪತ್ರಿಕೆಯನ್ನು ಬೀಗಿ ಪೊಲೀಸ್ ಭದ್ರತೆಯೊಂದಿಗೆ ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ತಲುಪಿಸಲಾಗುತ್ತದೆ ಎಂದು ತಿಳಿಸಿದರು.

ಪ್ರಶ್ನಾ ಪತ್ರಿಕೆ ಸಾಗುವ ಮಾರ್ಗದಲ್ಲಿ ರೂಟ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರಶ್ನಾ ಪತ್ರಿಕೆಯನ್ನು 27 ಮಾರ್ಗದಲ್ಲಿ ಸಾಗಿಸಲಾಗುತ್ತದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ವೆಬ್ ಕಾಸ್ಟಿಂಗ್ ನಡೆಯಲಿದ್ದು ಸದರಿ ವೆಬ್ ಕಾಸ್ಟಿಂಗ್ ವೀಕ್ಷಿಸಲು ಅಧಿಕಾರಿಗಳನ್ನು ನೇಮಿಸಲಾಗಿದ್ದು ಅಧಿಕಾರಿಗಳು ಸೂಕ್ಷ್ಮವಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು ಎಂದರು.

ಸಿಸಿಟಿವಿ ಕಣ್ಗಾವಲು
ಎಸ್ ಎಸ್ ಎಲ್ ಸಿ ಪರೀಕ್ಷೆ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು ಎಲ್ಲಾ ಪರೀಕ್ಷಾ ಕೊಠಡಿಯಲ್ಲಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಸಿಸಿಟಿವಿ ಕಡ್ಡಾಯವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಪರೀಕ್ಷೆ ಸಮಯದಲ್ಲಿ ಸಿಸಿಟಿವಿಗಳಲ್ಲಿ ತಾಂತ್ರಿಕ ದೋಷ ಉಂಟಾಗುತ್ತದೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ

ಕುಡಿಯುವ ನೀರು, ಸೂಕ್ತ ಆಸನ ವ್ಯವಸ್ಥೆ ಹಾಗೂ ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ಜೊತೆಗೆ ಮೂಲ ಭೂತ ಸೌಕರ್ಯಗಳನ್ನು ಕಲ್ಪಿಸಿ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಪೊಲೀಸ್ ಬಂದೋಬಸ್ತ್ ಹಾಗೂ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು. ಗ್ರಾಮೀಣ ಭಾಗದಿಂದ ಮಕ್ಕಳು ಬರುವುದರಿಂದ ಬಸ್ ಗಳು ಪರೀಕ್ಷಾ ದಿನದಂದು ವಿಳಂಬವಾಗದಂತೆ ಕ್ರಮ ವಹಿಸಿ ಎಂದು ಹೇಳಿದರು.

ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಮೊಬೈಲ್ ಹಾಗೂ ಸ್ಮಾರ್ಟ್ ಡಿವೈಸ್ ಗಳನ್ನು ತರುವುದನ್ನು ತಡೆಯಲು ಮೊಬೈಲ್ ಪೋನ್ ಸ್ವಾಧೀನಾಧಿಕಾರಿ ನೇಮಕ ಮಾಡಲಾಗಿದೆ. ಪರೀಕ್ಷೆ ಮೇಲ್ವಿಚಾರಣೆಗೆ ನೇಮಿಸಿರುವ ಶಿಕ್ಷಕರು ಮಾರ್ಗ ಸೂಚಿಗೆ ಬದ್ಧರಾಗಿ ಕರ್ತವ್ಯ ಪಾಲಿಸಬೇಕು. ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಕಂಡು ಬಂದರು ಸಂಬಂಧ ಪಟ್ಟ ಅಧಿಕಾರಿಗಳು ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ ಅವರು ಮಾತನಾಡಿ ಈಗಾಗಲೇ ಜಿಲ್ಲೆಯ ಶಿಕ್ಷಕರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶದೊಂದಿಗೆ ಸಾಕಷ್ಟು ತಮ್ಮ ವಹಿಸಿದ್ದಾರೆ. ಪರೀಕ್ಷೆಯ ಗುಣಮಟ್ಟವನ್ನು ಹಾಳುಮಾಡದೆ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ನಡೆಸಿ, ಜಿಲ್ಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶದೊಂದಿಗೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಹೇಳಿದರು.

ಮಾರ್ಚ್ 18 ರ ನಂತರ ಸಾಲು ಸಾಲು ರಜೆಗಳು ಇದ್ದು ವಿದ್ಯಾರ್ಥಿಗಳಿಗೆ ವ್ಯಾಸಂಗದ ಮೇಲೆ ಆಸಕ್ತಿ ಕಡಿಮೆಯಾಗುವ ಸಾಧ್ಯತೆ ಇರುತ್ತದೆ ಹೀಗಾಗಿ ಶಿಕ್ಷಕರು ವಿದ್ಯಾರ್ಥಿಗಳ ಜೊತೆಗೆ ಇದ್ದು ಅವರ ಫಲಿತಾಂಶಗಳನ್ನು ವೃದ್ಧಿಸಲು ಕ್ರಮ ವಹಿಸಬೇಕು. ರಜೆ ದಿನಗಳಲ್ಲಿ ಹಬ್ಬ ಹರಿದಿನಗಳಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿ ಅವರ ಆರೋಗ್ಯದ ಹದಗೆಡುವ ಸಾಧ್ಯತೆ ಹೆಚ್ಚು ಇರುವುದರಿಂದ ಹಾಸ್ಟೆಲ್ ವಿದ್ಯಾರ್ಥಿಗಳನ್ನು ಹಬ್ಬ ಹರಿದಿನಗಳಿಗೆ ಕಳುಹಿಸದೆ ಹಾಸ್ಟೆಲ್ ಗಳಲ್ಲಿ ಹಬ್ಬವನ್ನು ಆಚರಿಸಿ ಎಂದು ಸೂಚಿಸಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಲೋಕೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ ಚಲುವಯ್ಯ, ತಹಶೀಲ್ದಾರ್ ವಿಶ್ವನಾಥ, ನಗರಸಭೆ ಪೌರಾಯುಕ್ತ ಪಂಪಶ್ರೀ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ

ಆರ್‌ಸಿಬಿಗೆ ಭರ್ಜರಿ ಜಯ

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯ ನೇಮಕಾತಿ

Leave a Comment