NEWS

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಬಾಕಿ ಇರುವ ಮೂಲಸೌಕರ್ಯ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳ ಸೂಚನೆ.

ಪಾಲನೆ ನ್ಯೂಸ್

ಮಂಡ್ಯ: ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಯಲ್ಲಿ ಬಾಕಿ ಉಳಿದಿರುವ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಿ ಆರೋಗ್ಯ ಸೇವೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜನತೆಗೆ ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಮಿಮ್ಸ್ನಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ, ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಸೂಚನೆಗಳನ್ನು ನೀಡಲಾಯಿತು.

ಸಭೆಯಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಕ್ಯಾನ್ಸರ್ ಕೇರ್ ಸೆಂಟರ್ ಅನ್ನು ಅಗತ್ಯ ಮೂಲಸೌಕರ್ಯ ಹಾಗೂ ಉಪಕರಣಗಳೊಂದಿಗೆ ಶೀಘ್ರದಲ್ಲೇ ಕಾರ್ಯಾರಂಭಗೊಳಿಸುವಂತೆ ಮಿಮ್ಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ವಿದ್ಯಾರ್ಥಿಗಳ ಹಾಜರಾತಿ ವ್ಯವಸ್ಥೆಯನ್ನು ಆಧುನಿಕಗೊಳಿಸುವ ಉದ್ದೇಶದಿಂದ Face Recognition Biometric ಉಪಕರಣಗಳನ್ನು ಅಳವಡಿಸಿ ಪರಿಣಾಮಕಾರಿ ಹಾಜರಾತಿ ವ್ಯವಸ್ಥೆಯನ್ನು ಜಾರಿಗೆ ತರಲು ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಸಂಸ್ಥೆಯಲ್ಲಿ ಹಾಲಿ ಇರುವ 350 ಕೆ.ವಿ. ವಿದ್ಯುತ್ ಲೋಡ್ ಅನ್ನು 650 ಕೆ.ವಿ.ಗಳಿಗೆ ಹೆಚ್ಚಿಸಲು ಅಗತ್ಯ ತಾಂತ್ರಿಕ ಹಾಗೂ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಇದೇ ವೇಳೆ Casualty ಹಾಗೂ Minor OT ಘಟಕಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ಕಾಗಿ ತುರ್ತಾಗಿ ಅಂದಾಜು ಪಟ್ಟಿ ಸಿದ್ಧಪಡಿಸಿ ಸಲ್ಲಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.

ಮಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಒಳಚರಂಡಿ ವ್ಯವಸ್ಥೆ ಹಾಗೂ ಆಂತರಿಕ ರಸ್ತೆ ನಿರ್ಮಾಣ ಕಾಮಗಾರಿಗಳು ಸುಮಾರು ರೂ.5.00 ಕೋಟಿ ವೆಚ್ಚದಲ್ಲಿ CSR ನಿಧಿಯಿಂದ ನಡೆಯುತ್ತಿದ್ದು, ಉಳಿದ ಕಾಮಗಾರಿಗಳ ಅಂದಾಜು ಪಟ್ಟಿಯನ್ನು ಕೂಡ ಶೀಘ್ರದಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಆಸ್ಪತ್ರೆಯ CSSD ಘಟಕವನ್ನು ಸುಮಾರು ರೂ.5.00 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸುವ ಕಾಮಗಾರಿಯನ್ನು ಆರಂಭಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಹಿಂಬಾಲಿಕೆ ನಡೆಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಮಿಮ್ಸ್ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಇದಲ್ಲದೆ ಆಸ್ಪತ್ರೆಯಲ್ಲಿ ಪ್ರತಿದಿನ ಬಳಸುವ ಲ್ಯಾಂಡ್ರಿ ಸೇವೆಗೆ ಅಗತ್ಯ ಯಂತ್ರೋಪಕರಣಗಳ ಖರೀದಿ ಹಾಗೂ ಸಂಬಂಧಿತ ಸಿವಿಲ್ ಕಾಮಗಾರಿಗಳ ಕುರಿತು ಸಮಗ್ರ ಅಂದಾಜು ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಬೋಧಕ ಆಸ್ಪತ್ರೆಯ ಎಲ್ಲಾ ವಾರ್ಡ್ಗಳನ್ನು ಸುಮಾರು ರೂ.10.00 ಕೋಟಿ ವೆಚ್ಚದಲ್ಲಿ ನವೀಕರಿಸುವ ಸಂಬಂಧ ಅಗತ್ಯ ಅಂದಾಜು ಪಟ್ಟಿ ತಯಾರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಮಿಮ್ಸ್ ಅಧಿಕಾರಿಗಳು, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (AEE), ಕೆಆರ್ಐಡಿಎಲ್ (KRIDL) ಅಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.‌

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಹೈಕೋರ್ಟ್‌ನಲ್ಲೇ ವಿಚಾರಣೆ ಅಂಜನಾದ್ರಿ ಪೂಜಾ ವಿವಾದ

‘ ಭಾರತ ಟಿ- 20 ವಿಶ್ವಕಪ್ ಸೆಮಿಫೈನಲ್‌ಗೆ ಪ್ರವೇಶ ಅಸಾಧ್ಯ’

ಮಂಡ್ಯ ಕಲಾವಿದರ ಪತ್ತಿನ ಸಹಕಾರ ಸಂಘ ಸರ್ವಸದಸ್ಯರ ಸಭೆ

Leave a Comment