NEWS

ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಗದಂತೆ ಕ್ರಮ ವಹಿಸಿ

ಕಾಲ ಕಾಲಕ್ಕೆ ಕುಡಿಯುವ ನೀರಿನ ಗುಣಮಟ್ಟದ ಪರಿಶೀಲನೆ ನಡೆಸಿ – ಡಾ. ಕುಮಾರ

ಪಾಲನೆ ನ್ಯೂಸ್

ಮಂಡ್ಯ: ಪ್ರಸಕ್ತ ಸಾಲಿನಲ್ಲಿ ಬೇಸಿಗೆಯ ಬಿಸಿಲಿನ ತಾಪಮಾನ ಹೆಚ್ಚಾಗಿ ಇರುವುದರಿಂದ ಕುಡಿಯುವ ನೀರು ತುಂಬಾ ಅವಶ್ಯಕವಾಗಿದೆ ಜೂನ್ ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ರವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು ದಂಡಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಸಭೆ ನಡಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಪ್ರಸ್ತುತ ಕುಡಿಯುವ ನೀರು ಮತ್ತು ಮೇವು ಲಭ್ಯತೆ ಹಾಗೂ ಬಿಸಿಲಿನ ತಾಪಮಾನದ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಕುರಿತು ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದಲ್ಲಿ 33 ಟಿ.ಎಂ.ಸಿ ನೀರಿನ ಲಭ್ಯತೆ ಇದೆ. ಜಿಲ್ಲೆಗೆ ಪ್ರತಿ ಮಾಹೆ ಕುಡಿಯುವ ನೀರಿಗೆ 2 ಟಿ.ಎಂ.ಸಿ ಅಗತ್ಯವಿದೆ. ಕೃಷಿ ಚಟುವಟಿಕೆಗಳಿಗೂ ನೀರು ಪೂರೈಕೆ ಮಾಡಿದ ನಂತರವೂ ಜೂನ್ ಅಂತ್ಯದಲ್ಲಿ 3.5 TMC ನೀರು ಉಳಿತಾಯವಾಗುತ್ತದೆ ಹಾಗಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದರು.

ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂಬುದರ ಮಾಹಿತಿಯನ್ನು ಹಾಗೂ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ, ಸದರಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಕ್ರಮ ವಹಿಸಬೇಕು ಎಂದು ಹೇಳಿದರು.

ಈಗಾಗಲೇ ತಾಲೂಕುವಾರು ರಚಿಸಿರುವ ಟಾಸ್ಕ್ ಫೋರ್ಸ್ ಸಮಿತಿಗಳು ಸಾರ್ವಜನಿಕರಿಗೆ ಬೇಸಿಗೆ ಕಾಲದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ಮುಂಜಾಗ್ರತಾ ಕ್ರಮವನ್ನು ಅನುಸರಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 968 ಕೆರೆಗಳು ಇದ್ದು ಈಗಾಗಲೇ ಬಹುತೇಕ ಕೆರೆಗಳು ಭರ್ತಿಯಾಗಿವೆ, ಕೆರೆಗಳಲ್ಲಿ ಸಂಗ್ರಹವಾಗಿರುವ ನೀರನ್ನು ಪೋಲ್ ಆಗದಂತೆ ನೋಡಿಕೊಳ್ಳಬೇಕು ಹಾಗೂ ಕೆರೆಯಲ್ಲಿ ಸುಚಿತ್ವವನ್ನು ಕಾಪಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರಸ್ತುತ ಒಂದು ವಾರಕ್ಕೆ ಜಾನುವಾರುಗಳಿಗೆ 22,563 (ಟನ್ ಗಳಲ್ಲಿ ) ಮೇವು ಅಗತ್ಯವಾಗಿದ್ದು, ಜಿಲ್ಲೆಯಲ್ಲಿ 10,69,408(ಟನ್ ಗಳಲ್ಲಿ ) ಮೇವು ಲಭ್ಯವಿದ್ದು ಮುಂದಿನ 47 ವಾರ ಅಂದರೆ 10 ತಿಂಗಳುಗಳ ಕಾಲ ಮೇವು ಲಭ್ಯತೆ ಇರುತ್ತದೆ ಮೇವಿಗೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಕೆ. ಆರ್. ನಂದಿನಿ, ಅಪರ ಜಿಲ್ಲಾಧಿಕಾರಿಗಳು ಬಿ.ಸಿ. ಶಿವಾನಂದಮೂರ್ತಿ, ಮಂಡ್ಯ ತಹಸೀಲ್ದಾರ್ ವಿಶ್ವನಾಥ್, ನಗರಸಭೆ ಪೌರಾಯುಕ್ತ ಪಂಪಶ್ರೀ ಸೇರಿದಂತೆ ಇನ್ನಿತರರ ಅಧಿಕಾರಿಗಳು ಉಪಸ್ಥಿತರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಅಮರನಾಥ ಗುಹಾಂತರ ದೇವಾಲಯಕ್ಕೆ ವಾರ್ಷಿಕ ತೀರ್ಥಯಾತ್ರೆ ಜುಲೈ 3 ಆರಂಭ

ಸಾರ್ವಜನಿಕರ, ಆಟೋರಿಕ್ಷಾ ಚಾಲಕರ ಮತ್ತು ಮಾಲೀಕರ ಹಿತದೃಷ್ಟಿಯಿಂದ ಆಟೋದರ ಪರಿಷ್ಕರಣೆ: ಡಾ. ಕುಮಾರ

ಮೂಲ ಸೌಕರ್ಯ ಕಲ್ಪಿಸಮೂಲ ಸೌಕರ್ಯ ಕಲ್ಪಿಸ‌ಲು 500 ಕೋಟಿ ರೂ. ಪ್ರಸ್ತಾವನೆ: ಜಿ.ಟಿ.ದೇವೇಗೌಡ

Leave a Comment