NEWS

ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿಗಳಿಗಾಗಿ ತರಬೇತಿ ಕಾರ್ಯಗಾರ

ಪಾಲನೆ ನ್ಯೂಸ್

ಮಂಡ್ಯ: ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಇಂದು ಗ್ರಾಮ ಪಂಚಾಯತ್ ನ ಆಡಳಿತಾಧಿಕಾರಿಗಳಿಗಾಗಿ ತರಬೇತಿ ಕಾರ್ಯಗಾರ ಆಯೋಜಿಸಲಾಗಿತ್ತು. ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹಣೆಯ ಪ್ರಗತಿ ಕುರಿತು ಮತನಾಡಿದ ಜಿ.ಪಂ.ಸಿಇಒ ರವರು ಜಿಲ್ಲೆಯಲ್ಲಿ ಒಟ್ಟು 92 ಗ್ರಾಮ ಪಂಚಾಯಿತಿಗಳಲ್ಲಿ ಶೇಕಡಾ 90 ಕ್ಕಿಂತ ಕಡಿಮೆ ತೆರಿಗೆ ಸಂಗ್ರಹಣೆ ಇರುವುದರಿಂದ ಅಂತಹ ಪಂಚಾಯಿತಿಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ್ದ ಆಡಳಿತಾಧಿಕಾರಿಗಳಿಗೆ ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಹಾಗೂ ಗ್ರಾಮ ಪಂಚಾಯಿತಿಗಳ ವಿಷಯಗಳ ಕುರಿತು ಸಂಪೂರ್ಣ ಮಾಹಿತಿ ನೀಡಿ, ಅವರ ಜವಬ್ದಾರಿಗಳ ಬಗ್ಗೆ ಅರಿವು ಮೂಡಿಸಲಾಯಿತು.

ಸ್ಥಳೀಯವಾಗಿ ಸಾರ್ವಜನಿಕರಿಂದ ಬರುವ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವಂತೆ ಹಾಗೂ ವಾರದಲ್ಲಿ ಎರಡು ದಿನ ಗ್ರಾಮ ಪಂಚಾಯಿತಿಗಳಲ್ಲಿದ್ದು ಅದರಲ್ಲೂ ಪ್ರತಿ ಸೋಮವಾರ ಕಡ್ಡಾಯವಾಗಿ ಪಂಚಾಯಿತಿಯಲ್ಲಿದ್ದು ಸಾರ್ವಜನಿಕರಿಂದ ಸ್ವೀಕೃತವಾಗುವ ಕುಂದು ಕೊರತೆಗಳ ಅರ್ಜಿಗಳಿಗೆ ಸ್ಪಂದಿಸಿ, ಇ-ಸ್ವತ್ತುಗಳಿಗೆ ಸಂಬಂಧಿಸಿದಂತೆ ಸ್ವೀಕೃತವಾಗುವ ಅರ್ಜಿಗಳಿಗೆ ನಿಯಮಾನುಸಾರ ಕ್ರಮವಹಿಸುವಂತೆ ಹಾಗೂ ಡಾಂಗಲ್ ಕೀ ಗಳನ್ನು ಮಾಡಿಸಿಕೊಳ್ಳಲು ಸೂಚಿಸಿದರು.

ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಬೇಸಿಗೆಯಲ್ಲಿ ಉದ್ಬವವಾಗಬಹುದಾದಂತಹ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಇನ್ನಿತರೆ ಜವಬ್ದಾರಿಗಳ ಕುರಿತು ಕ್ರಮವಹಿಸುವುದು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ತುರ್ತಾಗಿ ಆಲಿಸಿ, ಕ್ರಿಯಾತ್ಮಕವಾಗಿ ತಮ್ಮ ಆಡಳಿತದ ಅವಧಿಯಲ್ಲಿ ಕೆಲಸ ನಿರ್ವಹಿಸುವ ಆಡಳಿತಾಧಿಕಾರಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು. ಈ ರೀತಿ ಸಮಗ್ರವಾದ ದೃಷ್ಟಿಕೋನದಿಂದ ತರಬೇತಿ ಮತ್ತು ಕ್ರಿಯಾತ್ಮಕ, ಸೃಜನಶೀಲತೆಯಿಂದ, ಜನಸ್ನೇಹಿಯಾಗಿ ಗ್ರಾಮ ಪಂಚಾಯಿತಿ ಆಡಳಿತದ ಸುಧಾರಣೆ ಹಾಗೂ ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಆಡಳಿತಾಧಿಕಾರಿಗಳಿಗೆ ಕಾರ್ಯಗಾರದಲ್ಲಿ ಜಿಲ್ಲಾ ಪಂಚಾಯಿತಿಯ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಸಂಕ್ಷಿಪ್ತ ಮಾಹಿತಿ ನೀಡಲಾಯಿತು. ಯೋಜನಾ ಶಾಖೆ (ಗ್ರಾಮೀಣ ವಸತಿ ಹಾಗೂ ನಿವೇಶನ ಯೋಜನೆ), 15ನೇ ಹಣಕಾಸು ಆಯೋಗ ಯೋಜನೆ, ಸ್ವಚ್ಛ ಭಾರತ ಮಿಷನ್ (ಗ್ರಾಮೀಣ), ಜಲ ಜೀವನ್ ಮಿಷನ್ (ಜಲ ಮಹೋತ್ಸವ), ಇ-ಸ್ವತ್ತು ಹಾಗೂ ಆಡಳಿತ ಶಾಖೆ ಸೇರಿದಂತೆ ವಿವಿಧ ಇಲಾಖೆಗಳ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಲಕ್ಷ್ಮಿ ಪಿ. – ಉಪ ಕಾರ್ಯದರ್ಶಿ (ಅಭಿವೃದ್ಧಿ), ಶಿವಲಿಂಗಯ್ಯ-ಉಪ ಕಾರ್ಯದರ್ಶಿ (ಆಡಳಿತ) ಧನುಷ್ – ಮುಖ್ಯ ಯೋಜನಾಧಿಕಾರಿ, ಯೋಜನಾ ನಿರ್ದೇಶಕರು, ಸಹಾಯಕ ಯೋಜನಾಧಿಕಾರಿ, ಜಿಲ್ಲಾ ಪಂಚಾಯಿತಿಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.‌

ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಶ್ರೀ ಆದಿಚುಂಚನಗಿರಿ ಶ್ರೀ ಗುರು ಭೈರವೈಕ್ಯ ಮಂದಿರ ಭಕ್ತರಿಗೆ ಸಮರ್ಪಣೆಮಂದಿರ ಉದ್ಘಾಟಿಸಿ ಅಭಿವೃದ್ಧಿಗೆ ಆಧ್ಯಾತ್ಮದ ಬೆಸುಗೆ ಹಾಕಿದ ಪ್ರಧಾನಿ

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066ನೆಯ ಜಯಂತಿ ಮಹೋತ್ಸವ

5000 ರನ್ ಸೇರಿದಂತೆ ಒಂದೇ ಪಂದ್ಯದಲ್ಲಿ 5 ದಾಖಲೆ ಮುರಿದ: ಅಭಿಷೇಕ್ ಶರ್ಮಾ

Leave a Comment