NEWS

ಯುವಕ-ಯುವತಿಯರ ಆಸಕ್ತಿಗೆ ಅನುಗುಣವಾಗಿ ಉಚಿತ ಕೌಶಲ್ಯ ತರಬೇತಿ ಮತ್ತು ಸ್ವ-ಉದ್ಯೋಗ ಮಾರ್ಗದರ್ಶನ ನೀಡಿ – ಡಾ ಕುಮಾರ

ಪಾಲನೆ ನ್ಯೂಸ್

    ಮಂಡ್ಯ : ಯುವಕ-ಯುವತಿಯರಿಗೆ ಆಸಕ್ತಿಯ ಕ್ಷೇತ್ರದಲ್ಲಿ ಉದ್ಯೋಗ ಮಾಡಲು ಉಚಿತ ಕೌಶಲ್ಯ ತರಬೇತಿ ಹಾಗೂ ಸ್ವ ಉದ್ಯೋಗ ನೀಡಲು ಮಾರ್ಗದರ್ಶನ ನೀಡಲು ಅಗತ್ಯ ಕ್ರಮ ಕೖಗೊಳ್ಳುವಂತೆ ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

    ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಕೌಶಲ್ಯ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಕೌಶಲ್ಯ ಅಭಿವೃದ್ಧಿ ತರಬೇತಿಗಳು ಇಂದಿನ ಯುವಜನತೆಗೆ ಅಗತ್ಯವಾಗಿದ್ದು, ಪ್ರಸಕ್ತ ಕೈಗಾರಿಕೆ ಹಾಗೂ ಉದ್ಯೋಗ ಮಾರುಕಟ್ಟೆಗೆ ಅವಶ್ಯಕವಾಗಿರುವ ತರಬೇತಿಗಳನ್ನು ನೀಡಲು ಕ್ರಮ ವಹಿಸುವಂತೆ ಹಾಗೂ ಕೈಗಾರಿಕೆಗಳ ಸಹಯೋಗದೊಂದಿಗೆ ತರಬೇತಿ ಯೋಜನೆಗಳನ್ನು ರೂಪಿಸುವಂತೆ ತಿಳಿಸಿದರು.

    ಯುವನಿಧಿ, ಯುವನಿಧಿ ಪ್ಲಸ್ ಯೋಜನೆಯಡಿ ತಾಂತ್ರಿಕ ಹಾಗೂ ಕೈಗಾರಿಕಾ ಕೌಶಲವನ್ನು ಯುವಕರಿಗೆ ಕಲಿಸಿ ಅವರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ತಿಳಿಸಿದರು.

    ಜಿಲ್ಲೆಯ ಯುವಕರಿಗೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬೇರೆ ಬೇರೆ ಸಂಸ್ಥೆಗಳಿಂದ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ನೀಡುವಂತೆ ಮತ್ತು ವಿಶೇಷ ಚೇತನರಿಗೆ ವಿಶೇಷ ತರಬೇತಿ ಕಾರ್ಯಕ್ರಮವನ್ನು ನೀಡುವಂತೆ ಸೂಚಿಸಿದರು.

    ಸ್ವನಿಧಿ ಯೋಜನೆಯಡಿ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಕೈಗೊಂಡು ಕೇಂದ್ರ ಸರ್ಕಾರದ 8 ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಯೋಜನೆಗಳ ಸಂಪರ್ಕ ಕಲ್ಪಿಸಬೇಕು ಹಾಗೂ ಸದರಿ ಯೋಜನೆಯಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಡಿಜಿಟಲ್ ಸಾಕ್ಷರತೆಯ ಬಗ್ಗೆ ಅರಿವು ಮೂಡಿಸುಬೇಕು ಎಂದು ತಿಳಿಸಿದರು.

    ಸಭೆಯಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ನಾಗನಂದ, ಡಿಹೆಚ್ ಓ ಡಾ ಮೋಹನ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

    ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
    https://chat.whatsapp.com/H1gUYgrzvnQGZAhIQSGMHn

    Related posts

    ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿಯಾನದಲ್ಲಿ ಅಕ್ಕ ಕೆಫೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ: ಜಿ.ಪಂ. ಸಿಇಓ

    ಪ್ರಧಾನಿ ನರೇಂದ್ರ ಮೋದಿ‌ ವಿಶ್ವನಾಥನ ದರ್ಶನ

    ಸಿಲಿಂಡರ್‌ಗಳ ದರ ಏರಿಕೆ

    Leave a Comment