NEWS

ಡಾ. ಬಾಬು ಜಗಜೀವನ್ ರಾಂ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಿ

ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ : ಡಾ. ಕುಮಾರ

ಪಾಲನೆ ನ್ಯೂಸ್

    ಮಂಡ್ಯ: ಏಪ್ರಿಲ್ ಮಾಹೆಯಲ್ಲಿ ಬರುವ ಏ. 05 ರಂದು ಡಾ. ಬಾಬು ಜಗಜೀವನ್ ರಾಂ ಹಾಗೂ ಏಪ್ರಿಲ್ 14ರಂದು ಡಾ. ಬಿ. ಆರ್ ಅಂಬೇಡ್ಕರ್ ರವರ ಜಯಂತಿಯನ್ನು ಎಲ್ಲರ ಸಹಕಾರ ಹಾಗೂ ಸಮನ್ವಯತೆ ಹಾಗೂ ಸಾಮರಸ್ಯದಿಂದ ಮಹನೀಯರ ಚಿಂತನೆ ಮತ್ತು ಆದರ್ಶಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕುಮಾರ ರವರು ಹೇಳಿದರು.

    ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಡಾ. ಬಾಬು ಜಗಜೀವನ್ ರಾಂ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಜಯಂತಿಯ ಆಚರಣೆ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಮಹನೀಯರು ಜಯಂತಿಯಕಾರ್ಯಕ್ರಮವನ್ನು ಬೆಳಿಗ್ಗೆ 10.00 ಗಂಟೆಗೆ ಮಹನೀಯರ ಪುತಳಿಗೆ ಮಾಲಾರ್ಪಣೆ ಮಾಡಿ ಬೆಳಿಗ್ಗೆ 10.30 ಗಂಟೆಗೆ ಜಾಥಾ ಕಾರ್ಯಕ್ರಮವನ್ನು ಮಾಡಬೇಕು ಹಾಗೂ 11.00 ಗಂಟೆಗೆ ಸಭಾ ಕಾರ್ಯಕ್ರಮ ಆಯೋಜಿಸಿ ಎಂದು ಸೂಚಿಸಿದರು.

    ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ್ ರಾಂ ಹಾಗೂ ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ನಮ್ಮ ಜವಾಬ್ದಾರಿ ಎಂದು ಭಾವಿಸಿ ಅತ್ಯಂತ ಅರ್ಥಪೂರ್ಣ ಮತ್ತು ಅಚ್ಚುಕಟ್ಟಾಗಿ ಆಚರಿಸಲಾಗುವುದು ಎಂದು ತಿಳಿಸಿದರು.

    ಮಹನೀಯರ ಜನ್ಮ ದಿನದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಎಲ್ಲಾ ಅಧಿಕಾರಿಗಳು ಹಾಗೂ ಸಂಘ ಸಂಘಟನೆಗಳಿಗೆ ಮತ್ತು ಎಲ್ಲಾ ಸಾರ್ವಜನಿಕರಿಗೂ ತಲುಪಿಸುವಂತೆ ಸೂಚಿಸಿದರು. ಎಲ್ಲಾ ಸರ್ಕಾರಿ ನೌಕರರು ಕಾರ್ಯಕ್ರಮಕ್ಕೆ ಹಾಜರಾಗುವಂತೆ ತಿಳಿಸಿದರು ಮತ್ತು ತಾಲೂಕು ಮಟ್ಟದಲ್ಲಿ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ಸೂಚಿಸಿದರು.

    ಡಾ. ಬಾಬು ಜಗಜೀವನ್ ರಾಮ್ ಹಾಗೂ ಡಾ. ಬಿ. ಆರ್ ಅಂಬೇಡ್ಕರ್ ರವರ ಜೀವನ ಮತ್ತು ಸಂವಿಧಾನ ವಿಚಾರ ಕುರಿತ ಬ್ಯಾನರ್ ಗಳನ್ನು ಅಳವಡಿಸಬೇಕು ಹಾಗೂ ಸಮುದಾಯದಲ್ಲಿ ಶಿಕ್ಷಣ, ಪೌರಾಕಾರ್ಮಿಕ, ಸೈನಿಕ ಕ್ಷೇತ್ರದಲ್ಲಿ ಸಾಧನೆಗೈದ 5 ಜನರಿಗೆ ಸನ್ಮಾನ ಕಾರ್ಯಕ್ರಮ ಮಾಡಲುಕ್ರಮವಹಿಸಲಾಗುವುದು ಎಂದು ತಿಳಿಸಿದರು.

    ಸಭೆಯಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರು ವಿಜಯಲಕ್ಷ್ಮಿ ರಘುನಂದನ್ , ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ಆರ್. ನಂದಿನಿ, ಪೊಲೀಸ್ ಅಧೀಕ್ಷಕರು ತಿಮ್ಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಶ್ರೀನಿವಾಸ್ ರವರು ಉಪಸ್ಥಿತರಿದ್ದರು.

    ✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
    https://chat.whatsapp.com/H1gUYgrzvnQGZAhIQSGMHn

    Related posts

    ಮಾ. 26 ರಂದು ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ”

    ಮಾ.23 ರಿಂದ ಏ. 5 ರ ವರೆಗೆ ವೈರಮುಡಿ ಬ್ರಹ್ಮೋತ್ಸವ ಆಚರಣೆ

    ಕೃಷಿಗೆ ಬೀಜವೇ ಮೂಲಾಧಾರ – ದೇಸಿ ಬೀಜ ಸಂರಕ್ಷಣೆ ಹಾಗೂ ನೀರಿನ ಸದ್ಬಳಕೆಗೆ ರೈತರು ಒತ್ತು ನೀಡಬೇಕು : ಡಾ. ಕೆ. ಸಿ. ನಾರಾಯಣಸ್ವಾಮಿ

    Leave a Comment