NEWS

ಸಾರ್ವಜನಿಕರಿಗೆ ಕ್ಷಯರೋಗ (ಟಿ.ಬಿ) ಕುರಿತು ಅರಿವು ಕಾರ್ಯಕ್ರಮ ಅಗತ್ಯ : ಡಾ. ಕುಮಾರ

ಪಾಲನೆ ನ್ಯೂಸ್

    ಮಂಡ್ಯ : ಕ್ಷಯರೋಗ ತಡೆಗಟ್ಟುವುದು ಬಹಳ ಮುಖ್ಯವಾಗಿದ್ದು ಇದರ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಮಾಡಬೇಕು ಹಾಗೂ ಕ್ಷಯರೋಗ ಸೋಂಕಿತರು ಸಕಾಲದಲ್ಲಿ ವೈದ್ಯಕೀಯ ಚಿಕಿತ್ಸೆಯಿಂದ ಕ್ಷಯ ರೋಗವನ್ನು ಗುಣಪಡಿಸಬಹುದು ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದರು.

    ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕ್ಷಯ ರೋಗ ನಿರ್ಮೂಲ ಕಾರ್ಯಕ್ರಮ ವಿಶ್ವ ಕ್ಷಯರೋಗ ದಿನ “100 ದಿನಗಳ ಟಿ.ಬಿ ಮುಕ್ತ ಭಾರತ ಅಭಿಯಾನ ಜಾಥಾ ” ಕಾರ್ಯಕ್ರಮ ವನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.

    ಕ್ಷಯ ರೋಗಕ್ಕೆ ತುತ್ತಾಗಿರುವಂತಹ ವ್ಯಕ್ತಿಗಳನ್ನು ಸರಿಯಾದ ರೀತಿಯಲ್ಲಿ ಪ್ರೀತಿ ವಿಶ್ವಾಸದಿಂದ ಹಾಗೂ ವಾತ್ಸಲ್ಯ ದಿಂದ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

    ಮಾರ್ಚ್ 24 ರಂದು ಪ್ರತಿ ವರ್ಷ ಕ್ಷಯ ರೋಗ ದಿನಚರಣೆಯನ್ನು ಆಚರಣೆ ಮಾಡುತ್ತಿದ್ದು ಟಿವಿ ರೋಗ (ಕ್ಷಯರೋಗ) ಕಾಯಿಲೆಯನ್ನು ಗುಣಪಡಿಸಬಹುದಾದ ಕಾಯಿಲೆಯಾಗಿದೆ ಸಾರ್ವಜನಿಕರು ಬಹಳ ಎಚ್ಚರದಿಂದ ಇರಬೇಕು ಎಂದು ತಿಳಿಸಿದರು.

    ಜಿಲ್ಲೆಯಲ್ಲಿ 40 ಗ್ರಾಮ ಪಂಚಾಯಿತಿಗಳನ್ನು ಕ್ಷಯ ರೋಗ ಮುಕ್ತ ಗ್ರಾಮ ಪಂಚಾಯಿತಿಗಳಾಗಿ ಗುರುತಿಸಲಾಗಿದೆ. ಎಲ್ಲಾ ಸಾರ್ವಜನಿಕರ ಸಹಭಾಗಿತ್ವದಲ್ಲಿ ಕ್ಷಯ ರೋಗವನ್ನು ಗುಣಪಡಿಸಲು ಸಾಧ್ಯ ಎಲ್ಲರೂ ಎಚ್ಚರದಿಂದ ಇರಬೇಕು ಹಾಗೂ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಅಗತ್ಯ ಎಂದು ಹೇಳಿದರು.

    ಇಂದಿನಿಂದ 100 ದಿನಗಳ ಕಾಲ ಟಿವಿ ಮುಕ್ತ (ಕ್ಷಯರೋಗ) ಮುಕ್ತ ಭಾರತ ಅಭಿಯಾನವನ್ನು ಮಾಡಲಾಗುತ್ತಿದ್ದು ಸಾರ್ವಜನಿಕರು ಕಾರ್ಯಕ್ರಮದವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೂಚಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಅವರು ಮಾತನಾಡಿ ಕ್ಷಯರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು ಒಬ್ಬರಿಂದ ಒಬ್ಬರಿಗೆ ಹರಡುವಂತ ಕಾಯಿಲೆಯಾಗಿದೆ. ಕ್ಷಯರೋಗ ಅಭಿಯಾನಕ್ಕೆ ಮೂರು ಉದ್ದೇಶಗಳಿದ್ದು ಎಲ್ಲಾ ಕ್ಷಯರೋಗ ಪ್ರಕರಣಗಳನ್ನು ಪತ್ತೆ ಹಚ್ಚುವುದು, ಕ್ಷಯರೋಗಿಗಳ ಮರಣ ಪ್ರಮಾಣ ಕಡಿಮೆಗೊಳಿಸುವುದು ಹಾಗೂ ತಡೆಗಟ್ಟುವುದು. ಹೊಸ ಕ್ಷಯರೋಗ ಪ್ರಕರಣಗಳನ್ನು ತಡೆಯುವುದು ಎಂದು ತಿಳಿಸಿದರು.

    ಕ್ಷಯ ರೋಗಿಗಳು ನಿಗದಿತ ಸಮಯದಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು ಹಾಗೂ ಕ್ಷಯರೋಗ ಕುರಿತು ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮವನ್ನು ಮಾಡಬೇಕು ಎಂದು ಹೇಳಿದರು.

    ಒಂದೊಂದೇ ಗ್ರಾಮ ಪಂಚಾಯಿತಿಯನ್ನು ಕ್ಷಯರೋಗ ಮುಕ್ತ ಗ್ರಾಮ ಪಂಚಾಯಿತಿಯನ್ನಾಗಿ ಮಾಡುವುದೇ ನಮ್ಮ ಘೋಷವಾಕ್ಯ ಮತ್ತು ಧ್ಯೇಯ ಎಂದು ತಿಳಿಸಿದರು.

    ದಳವಾಯಿ ಕೋಡಿಹಳ್ಳಿ ಗ್ರಾಮ ಪಂಚಾಯಿತಿ ಕಳೆದ ಮೂರು ವರ್ಷದಿಂದ ಕ್ಷಯ ರೋಗ ಮುಕ್ತ ಗ್ರಾಮ ಪಂಚಾಯಿತಿಯಾಗಿದ್ದು ಸಾಧನೆಯತ್ತ ಸಾಗಿ ಚಿನ್ನದ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇವೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಕೆ ಮೋಹನ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳಾದ ಡಾ.ಆಶಾಲತಾ ರವರು ಜಿಲ್ಲಾ ಕಾರ್ಯಕ್ರಮ ಅಭಿವೃದ್ಧಿ ಅಧಿಕಾರಿಗಳಾದ ಡಾ.ಕಾಂತರಾಜುರವರು, ಜಿಲ್ಲಾ ಅಸಾಂಕ್ರಮಿಕ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಸೋಮಶೇಖರ್ ರವರು ಜಿಲ್ಲಾ ಶಿಕ್ಷಣಾಧಿಕಾರಿಗಳಾದ ಡಾ. ವೇಣುಗೋಪಾಲ್ ರವರು ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಜವರೇಗೌಡರವರು IMA ಅಧ್ಯಕ್ಷರಾದ ಡಾ.ಮರೀಗೌಡ ರವರು ಡಾ.ಕಕ್ಕಿಲಯ ಹಾಗೂ ಗೋಪಾಲ ಕೃಷ್ಣ ರವರು ಹಾಗೂ ಜಿಲ್ಲಾ ಕಾರ್ಯಕ್ರಮ ಸಂಯೋಜಕರುಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

    ✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
    https://chat.whatsapp.com/H1gUYgrzvnQGZAhIQSGMHn

    Related posts

    ಗುಂಡ್ಲುಪೇಟೆ, ಮೈಸೂರಿನಲ್ಲಿ ನಾಗರಹೊಳೆ, ಬಂಡಿಪುರ ಸಫಾರಿ ಪುನಾರಂಭಕ್ಕೆ ರೈತರಿಂದ ವಿರೋಧ

    ಕಳೆದ 6 ತಿಂಗಳಲ್ಲಿ ನಗರ ಪೊಲೀಸ್ ಘಟಕದಿಂದ 105 ಸ್ವತ್ತು ಕಳುವು ಪ್ರಕರಣಗಳ ಪತ್ತೆ

    ರಾಜಸ್ಥಾನದ ನಿವೃತ್ತ ಯೋಧ 138 ಪದವಿಧರ

    Leave a Comment