NEWS

ಮಾ. 26 ರಂದು ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ”

ಪಾಲನೆ ನ್ಯೂಸ್

ಮಂಡ್ಯ: 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲಾಖೆ ವತಿಯಿಂದ “ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ” ವನ್ನು ಮಾರ್ಚ್ 26 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.00ರ ವರೆಗೆ ನಗರದ ಸೆಂಟ್ ಜೋಸೆಫ್ ಪ್ರೌಢಶಾಲೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ನಂತರದ ಕೋರ್ಸ್‌ಗಳ ಬಗ್ಗೆ, ಉನ್ನತ ಶಿಕ್ಷಣ, ವೃತ್ತಿಪರ ಕೋರ್ಸ್‌ಗಳು, ಕೌಶಲ್ಯಾಭಿವೃದ್ಧಿ ತರಬೇತಿಗಳು, ವಿವಿಧ ಉದ್ಯೋಗಾವಕಾಶಗಳು, ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣದ ಅವಕಾಶಗಳು ಇನ್ನೂ ಮುಂತಾದ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯಕ್ಕೆ ಮಾಹಿತಿ ನೀಡುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗಿದ್ದು ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಮುದಾಯವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಜಿಲ್ಲಾ ಡಯಟ್ ಪದನಿಮಿತ್ತ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರು ಯೋಗೇಶ್ ಕೆ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ವಿನಯ್ ಕುಲಕರ್ಣಿ ಸೇರಿ ದಂತೆ ಎಲ್ಲಾ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ

ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ಜಾಬಾ ಖಮೇನಿ ಮೃತಪಟ್ಟಿರುವ ಶಂಕೆ

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಜಿ. ಪಂ. ಸಿಇಓ ನಂದಿನಿ ಕೆ. ಆರ್. ಅನಿರೀಕ್ಷಿತ ಭೇಟಿ

Leave a Comment