ಪಾಲನೆ ನ್ಯೂಸ್
ಮಂಡ್ಯ : ಜಿಲ್ಲಾಡಳಿತ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಮಾರ್ಚ್ 30 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಮಹಾವೀರ ವೃತ್ತದಲ್ಲಿ ಅಲಂಕೃತ ಭಗವಾನ್ ಮಹಾವೀರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಜೆ 06.00 ಗಂಟೆಗೆ ಪೇಟೆಬೀದಿಯ ಮಹಾವೀರ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ .ಕುಮಾರಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಹಾಗೂ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಪಿ ಎಂ ನರೇಂದ್ರಸ್ವಾಮಿ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಅವರು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಲಿದ್ದಾರೆ.
ಮಂಡ್ಯ ವಿಧಾನಸಭಾ ಶಾಸಕರಾದ ಪಿ.ರವಿಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ,ವಿಧಾನ ಪರಿಷತ್ ಶಾಸಕರುಗಳಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ವಿಧಾನ ಸಭಾ ಶಾಸಕರುಗಳಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ, ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್ ಆತ್ಮಾನಂದ, ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಪಿ ಪ್ರಕಾಶ್, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ. ನಾಗೇಂದ್ರ ಕುಮಾರ್ ರವರು ಭಾಗವಹಿಸಲಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
