NEWS

ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳ – 2026

ಪಾಲನೆ ನ್ಯೂಸ್

ಮಂಡ್ಯ : ಸಮಗ್ರ ಶಿಕ್ಷಣ ಕರ್ನಾಟಕ, ರಾಜ್ಯ ಯೋಜನಾ ನಿರ್ದೇಶಕರ ಕಚೇರಿ ಕರ್ನಾಟಕ ಸರ್ಕಾರ, ಬೆಂಗಳೂರು. ಇವರ ನಿರ್ದೇಶನದಂತೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಮಂಡ್ಯ. ಹಾಗೂ ಜಿಲ್ಲಾ ವೃತ್ತಿಪರ ಮತ್ತು ವೃತಿ ಮಾರ್ಗದರ್ಶನ ಘಟಕದ ಸಂಯುಕ್ತಾಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ ಮತ್ತು ಕೆರಿಯರ್ ಮೇಳವನ್ನು ಸಂತಜೋಸೆಫರ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಮಂಡ್ಯ. ಇಲ್ಲಿ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮವನ್ನು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ ಜಿ.ಪಂ.ಮಂಡ್ಯ ರವರು ಉದ್ಘಾಟಿಸಿ, ಮಾತನಾಡಿ, ವಿದ್ಯಾರ್ಥಿಗಳು ಮತ್ತು ಯುವಜನತೆ ತಮ್ಮ ಭವಿಷ್ಯದ ವೃತ್ತಿ ದಾರಿಯನ್ನು ಸ್ಪಷ್ಟವಾಗಿ ನಿರ್ಧರಿಸಲು ಸಹಾಯಕವಾಗುವ ಮಹತ್ವದ ವೇದಿಕೆಯಾಗಿದೆ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ, ಸರಿಯಾದ ಮಾಹಿತಿ ಮತ್ತು ಸೂಕ್ತ ಮಾರ್ಗದರ್ಶನವು ಯುವಜನತೆಯ ಯಶಸ್ಸಿನ ಮೂಲಸ್ತಂಭವಾಗಿದೆ. ಹಲವಾರು ಬಾರಿ ವಿದ್ಯಾರ್ಥಿಗಳು ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಅವಕಾಶಗಳ ಕುರಿತು ಸರಿಯಾದ ತಿಳುವಳಿಕೆ ಇಲ್ಲದ ಕಾರಣ ಸೂಕ್ತ ವೃತ್ತಿ ಆಯ್ಕೆ ಮಾಡಲು ಸಂಕಷ್ಟ ಅನುಭವಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ಈ ರೀತಿಯ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಗಳು ಅತ್ಯಂತ ಉಪಯುಕ್ತವಾಗುತ್ತವೆ ಎಂದು ತಿಳಿಸಿದರು.

ಈ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿರುವ ಉನ್ನತ ಶಿಕ್ಷಣದ ಮಾರ್ಗಗಳು, ಉದ್ಯೋಗಾವಕಾಶಗಳು, ಕೌಶಲ್ಯಾಭಿವೃದ್ಧಿ ತರಬೇತಿಗಳು ಹಾಗೂ ಸ್ವಯಂ ಉದ್ಯೋಗ ಅವಕಾಶಗಳ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸಲಾಗುತ್ತಿದೆ. ಇದು ಯುವಜನತೆಗೆ ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಪ್ರೇರಣೆಯಾಗಿ ಪರಿಣಮಿಸುತ್ತದೆ.

ಸರ್ಕಾರವು ಯುವಜನತೆಗೆ ಉದ್ಯೋಗ ಸೃಷ್ಟಿ ಮತ್ತು ಕೌಶಲ್ಯಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಮೂಲಕ ಹಲವಾರು ಯೋಜನೆಗಳು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. ಯುವಜನತೆ ಇವುಗಳ ಸದುಪಯೋಗ ಪಡಿಸಿಕೊಂಡು ತಮ್ಮ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಆಶಿಸುತ್ತೇನೆ ಎಂದು ತಿಳಿಸಿದರು.

ನಿಮ್ಮ ಜೀವನದ ಯಶಸ್ಸು ನಿಮ್ಮ ಗುರಿ ಸ್ಪಷ್ಟತೆ, ಪರಿಶ್ರಮ ಮತ್ತು ಸರಿಯಾದ ಮಾರ್ಗದರ್ಶನದ ಮೇಲೆ ಅವಲಂಬಿತವಾಗಿದೆ. ಈ ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ಕೆರಿಯರ್ ಮೇಳದಲ್ಲಿ ಲಭ್ಯವಾಗುವ ಮಾಹಿತಿಯನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ನಿಮ್ಮ ಭವಿಷ್ಯವನ್ನು ದೃಢವಾಗಿ ರೂಪಿಸಿಕೊಳ್ಳುವಂತೆ ಜಿ.ಪಂ. ಸಿಇಒ ತಿಳಿಸಿದರು.

ಎಸ್ ಎಸ್ ಎಲ್ ಸಿ, ಪಿಯುಸಿ ನಂತರದ ಕೋರ್ಸ್ ಗಳ ಆಯ್ಕೆಗಳು, ವೃತ್ತಿಪರ ಕೋರ್ಸ್ಗಳು, ಕೌಶಲ್ಯಾಭಿವೃದ್ಧಿ ತರಬೇತಿಗಳು, ತಾಂತ್ರಿಕ ಶಿಕ್ಷಣದ ಅವಕಾಶಗಳು, ವಿಶೇಷ ಚೇತನ ಮಕ್ಕಳ ಭವಿಷ್ಯಕ್ಕಿರುವ ವಿವಿಧ ಬಗೆಯ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು (CET, JEE, NEET) ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ದೊರಕುವ ಸೌಲಭ್ಯಗಳ ಬಗ್ಗೆ ಪ್ರದರ್ಶನ ಮಳಿಗೆಗಳ ಮೂಲಕ ಇಲಾಖೆವಾರು ಮಾಹಿತಿ ನೀಡಲಾಯಿತು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಸುಮಾರು 2500 ಪೋಷಕರು, ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಅಧಿಕಾರಿಗಳು ಮೇಳದಲ್ಲಿ ಭಾಗವಹಿಸಿ, ಮುಂದಿನ ವಿದ್ಯಾಭ್ಯಾಸ ಮತ್ತು ಉದ್ಯೋಗಕ್ಕೆ ಇರುವ ಅವಕಾಶಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಸದರಿ ಕಾರ್ಯಕ್ರಮದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಇಲಾಖೆಗಳಿಂದ ತತ್ಸಂಬಂಧಿತ 20 ಮೇಳಗಳನ್ನು ತೆರೆಯಲಾಗಿತ್ತು.

ಈ ಸಂದರ್ಭದಲ್ಲಿ ಶ್ರೀಮತಿ ರಾಜಲಕ್ಷ್ಮೀ – ಜಂಟಿ ನಿರ್ದೇಶಕರು, ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಮೈಸೂರು, ಶ್ರೀ ಜಿ.ಎ.ಲೋಕೇಶ್ – ಉಪನಿರ್ದೇಶಕರು(ಆಡಳಿತ), ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಡ್ಯ, ಶ್ರೀ ರಾಜಶೇಖರ್-ಪ್ರವಾಚಕರು ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಮೈಸೂರು, ಶ್ರೀ ಲಕ್ಷ್ಮೀಪತಿ – ಪ್ರವಾಚಕರು ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಮೈಸೂರು, ಶ್ರೀಮತಿ ಸೌಭಾಗ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಉತ್ತರವಲಯ ಮಂಡ್ಯ, ಶ್ರೀ ಮಹದೇವ – ಕ್ಷೇತ್ರ ಶಿಕ್ಷಣಾಧಿಕಾರಿ ದಕ್ಷಿಣವಲಯ, ಶ್ರೀ ಯೋಗೇಶ್ .ಕೆ – ಉಪನಿರ್ದೇಶಕರು(ಅಭಿವೃದ್ಧಿ) ಡಯಟ್ ಮಂಡ್ಯ, ಹಾಗೂ ವೃತ್ತಿ ಮಾರ್ಗದರ್ಶನ ಸಮಿತಿಯ 10 ಜನ ಸದಸ್ಯರುಗಳು ಹಾಜರಿದ್ದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಗಲ್ಫ್ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿರುವ ಇರಾನ್

ಹಂಪಿಯಲ್ಲಿ ತುಂಗಾರತಿ ; ಕಾಶಿಯ ಗಂಗಾರತಿ ರೀತಿ !

ಸರ್ಕಾರದ  ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ಮುಟ್ಟಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಹೆಚ್ಚು : ಡಾ.ಕುಮಾರ

Leave a Comment