ಪಾಲನೆ ನ್ಯೂಸ್
ತಾಂಡವಪುರ: ನಂಜನಗೂಡು ತಾಲ್ಲೂಕಿನ ತಾಂಡವಪುರ ಗ್ರಾಮದಲ್ಲಿ ಏಪ್ರಿಲ್ 1ರಂದು ಕೌಶಲಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳ ನಿರುದ್ಯೋಗಿ ಯುವಕರು, ಯುವತಿಯರು ಇದರ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಅವರು ಮನವಿ ಮಾಡಿದರು.
ಶುಕ್ರವಾರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಉದ್ಯೋಗ ಮೇಳದ ಕುರಿತು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅಂಗನವಾಡಿ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿಗೆ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆದೇಶ ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಯತೀಂದ್ರ ಸಿದ್ದರಾಮಯ್ಯನವರ ಸೂಚನೆ ಮೇರೆಗೆ ಹಮ್ಮಿಕೊಳ್ಳಲಾಗಿದೆ.

ಉದ್ಯೋಗ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ನಿರುದ್ಯೋಗಿ ಯುವಕ -ಯುವತಿಯರು ಪಾಲ್ಗೊಳ್ಳುವಂತೆ ತಿಳಿಸಿದರು. ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ನಿರುದ್ಯೋಗಿ ಯುವಕರು- ಯುವತಿಯರು ತಮ್ಮ ದಾಖಲಾತಿಗಳನ್ನು ಕಡ್ಡಾಯವಾಗಿ ತರಬೇಕು ಎಂದರು. ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಕೆ.ಕೆ.ಮರಯ್ಯ, ಲೆಕ್ಕ ಸಹಾಯಕ ಎಸ್.ಪುಟ್ಟರಾಜು ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತರು, ಗ್ರಾಪಂ ಸಿಬ್ಬಂದಿ ಹಾಜರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
