NEWS

ಏ.8ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮೌಲ್ಯಮಾಪನ ಆರಂಭ

ಪಾಲನೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವು ಏಪ್ರಿಲ್ 8ರಿಂದ ನಡೆಯಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕ ಕಾಲಕ್ಕೆ ಮೌಲ್ಯಮಾಪನ ಕಾರ್ಯ ಆರಂಭವಾಗಲಿದೆ. ಆದರೆ, ತೃತೀಯ ಭಾಷೆಗಳಾದ ಹಿಂದಿ ಮತ್ತು ಸಂಸ್ಕೃತ ವಿಷಯಗಳ ಮೌಲ್ಯಮಾಪನವು ಏಪ್ರಿಲ್ 9ರಿಂದ ಪ್ರಾರಂಭವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಏ.7 ರಂದು ಉಪ ಮುಖ್ಯ ಮೌಲ್ಯಮಾಪಕರು ಹಾಗೂ ಏ.8ರಂದು ಸಹಾಯಕ ಮೌಲ್ಯಮಾಪಕರು ಮೌಲ್ಯಮಾಪನ ಕೇಂದ್ರಗಳಿಗೆ ಹಾಜರಾಗಬೇಕು.

ಮೌಲ್ಯಮಾಪಕರ ನೇಮಕಾತಿ ಆದೇಶ ಪತ್ರಗಳನ್ನು ಮಂಡಲಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್ ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ತೃತೀಯ ಭಾಷೆಗಳ ಮೌಲ್ಯಮಾಪಕರು ಏ.8ರಂದು ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಬೇಕಿದೆ. ಮೌಲ್ಯಮಾಪನ ಕಾರ್ಯವು ಶಿಕ್ಷಣ ಕಾಯ್ದೆ ಪ್ರಕಾರ ಕಡ್ಡಾಯವಾಗಿದೆ ಎಂದು ಮಂಡಳಿ ಕಾರ್ಯವು ಶಿಕ್ಷಣ ಕಾಯ್ದೆ ಪಕಾರ ಕಡ್ಡಾಯವಾಗಿದೆ ಮತ್ತು ಎಸ್. ಎಸ್.ಎಲ್.ಸಿ. ಪರೀಕ್ಷೆಯ ನೋಡೆಲ್ ಅಧಿಕಾರಿಗಳು ಮೌಲ್ಯಮಾಪನ ಕಾರ್ಯಕ್ಕೆ ನಿಯೋಜನೆಗೊಂಡಿರುವ ಎಲ್ಲಾ ಶಿಕ್ಷಕರು ಕರ್ತವ್ಯಕ್ಕೆ ಹಾಜರಾಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಮತ್ತು ಮೌಲ್ಯಮಾಪನ ಕಾರ್ಯದ ಉಸ್ತುವಾರಿ ಹಾಗೂ ಮೇಲ್ವಿಚಾರಣೆ ಮಾಡಬೇಕು ಎಂದು ಹೇಳಲಾಗಿದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

60 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಮಂಡ್ಯ ಅಬಕಾರಿ ಡಿಸಿ ಅಮಾನತ್ತು

ಮದ್ದೂರು: ನಾಲಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಸಮಾಲೋಚನಾ ಸಭೆ

ಪ್ಲಾಸ್ಟಿಕ್ ಬ್ಯಾಗ್ ತ್ಯಜಿಸಿ ಬಟ್ಟೆ ಬ್ಯಾಗ್ ಬಳಸಿ ಜಾಗೃತಿ ಕಾರ್ಯಕ್ರಮ ನಡೆಯಿತು.

Leave a Comment