NEWS

ಜನಗಣತಿ–2027: ಏ.01 ರಿಂದ 15 ವರೆಗೆ ಸ್ವಯಂ-ಗಣತಿಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ : ಡಾ ಕುಮಾರ

ಪಾಲನೆ ನ್ಯೂಸ್

    ಮಂಡ್ಯ : ಜನಗಣತಿ-2027 ರ ಅಂಗವಾಗಿ ಸಾರ್ವಜನಿಕರು ಸುರಕ್ಷಿತ ವೆಬ್ ಪೋರ್ಟಲ್ ಮೂಲಕ ಸ್ವಯಂ- ಗಣತಿಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಜಿಲ್ಲೆಯ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಂಡು ಜನಗಣತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಅವರು ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಮನೆ ಪಟ್ಟಿ ಮತ್ತು ಮನೆಗಣತಿ ಕಾರ್ಯವು ಏಪ್ರಿಲ್ 16 ರಿಂದ ಆರಂಭವಾಗದ್ದು ಇದಕ್ಕೂ ಮುನ್ನ 15 ದಿನಗಳ ಮುಂಚಿತವಾಗಿ ಅಂದರೆ ದಿನಾಂಕ: 01.04.2026 ರಿಂದ 15.04.2026 ವರೆಗೆ ಸ್ವಯಂ ಗಣತಿಗೆ ಅವಕಾಶ ಕಲ್ಪಿಸಲಾಗಿದೆ

    ಸಾರ್ವಜನಿಕರು ಸ್ವಯಂ ಗಣತಿಗಾಗಿ ವೆಬ್ ಸೈಟ್ ವಿಳಾಸ www.se.census.gov.in ಬಳಸಿಕೊಂಡು ಲಾಗ್ ಇನ್ ಆಗಿ ಮನೆಗಳ ಪಟ್ಟಿ ಮತ್ತು ವಸತಿ ಗಣತಿ ಸಂಬಂಧ ಕೇಳಲಾಗುವ 33 ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ‌.

    ಸಾರ್ವಜನಿಕರು ಸ್ವಯಂ ಗಣತಿ ಮಾಹಿತಿಯನ್ನು ಯಶಸ್ವಿಯಾಗಿ ಸಲ್ಲಿಸಿದ ನಂತರ SMS ಮತ್ತು ಈ ಮೇಲ್ ಪೊರ್ಟಲ್ ಗೆ ರೆಫರೆನ್ಸ್ ಐ.ಡಿ ಸ್ವೀಕೃತವಾಗುತ್ತದೆ.

    ಗಣತಿದಾರರು ಮನೆಗೆ ಭೇಟಿ ನೀಡಿದಾಗ ರೆಫರೆನ್ಸ್ ಐ.ಡಿ ನೀಡುವ ಮೂಲಕ ಗಣತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿರುತ್ತದೆ. ಒಂದು ವೇಳೆ ರೆಫರೆನ್ಸ್ ಐ.ಡಿ ನೀಡದಿದ್ದಾರೆ ಗಣತಿದಾರರು ಮೊದಲಿನಿಂದಲೂ ಎಲ್ಲಾ ಪ್ರಶ್ನೆಗಳನ್ನು ಕೇಳಿ ಹೊಸದಾಗಿ ಗಣತಿ ಮಾಡಬೇಕಿರುತ್ತದೆ.

    ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವುದರಿಂದ ಗಣತಿದಾರರು ಬಂದಾಗ ಆಗುವ ಸಮಯ ವ್ಯಯವನ್ನು ತಪ್ಪಿಸಬಹುದಾಗಿದೆ‌‌. ಜಿಲ್ಲೆಯ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

    ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
    https://chat.whatsapp.com/H1gUYgrzvnQGZAhIQSGMHn

    Related posts

    ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ

    ಚಲಾವಣೆಯಲ್ಲಿ ಇಲ್ಲದ 2 ಸಾವಿರ ರೂ. ಮುಖಬೆಲೆಯ ನಕಲಿ ನೋಟುಗಳನ್ನು ಬದಲಾಯಿಸಲು ಯತ್ನ

    ನಟ ವಿಜಯ್ ರೀತಿ ನಿಖಿಲ್ ಕುಮಾರಸ್ವಾಮಿ ಅವರು ಬರುತ್ತಾರೆ : ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

    Leave a Comment