ಪಾಲನೆ ನ್ಯೂಸ್
ಮಂಡ್ಯ : ಸಮಾಜದಲ್ಲಿ ಶಾಂತಿ,ಸುವ್ಯವಸ್ಥೆ,ಭದ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಕಾರ್ಯನಿರ್ವಹಿಸುತ್ತಿದೆ. ನಾಗರೀಕ ಆಸ್ತಿಪಾಸ್ತಿಗಳನ್ನು ಕಾಪಾಡಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸುವುದು ಪೊಲೀಸ್ ಇಲಾಖೆಯ ಕರ್ತವ್ಯ ಎಂದು ನಿವೃತ್ತ ಆರಕ್ಷಕ ಉಪ ನೀರಿಕ್ಷಕರು ದಾಸಪ್ಪ ರವರು ಹೇಳಿದರು.
ಇಂದು ಪೊಲೀಸ್ ಇಲಾಖೆ ವತಿಯಿಂದ ಮಂಡ್ಯ ಡಿ. ಎ.ಆರ್ ಜಿಲ್ಲಾ ಪೊಲೀಸ್ ಕಾವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕುವೆಂಪುರವರು ನಾಡಗೀತೆಯ ಸಾಲಿನಲ್ಲಿ ಕರ್ನಾಟಕ ಸರ್ವ ಜನಾಂಗ ತೋಟ ಎಂದು ಹೇಳಿದ್ದಾರೆ. ಅದರಂತೆ ಸರ್ವ ಜನಾಂಗ ತೋಟವನ್ನು ರಕ್ಷಣೆ ಮಾಡುವ ಕೆಲಸ ನಮ್ಮ ಪೊಲೀಸ್ ಇಲಾಖೆಯ ಆದ್ಯ ಕರ್ತವ್ಯ ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯು ರಾಜಕೀಯವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಮುಂದುವರಿದಿದ್ದು ಜಿಲ್ಲೆಯು ಪ್ರವಾಸಿ ತಾಣವಾಗಿದೆ. ಕರ್ನಾಟಕ ಪೊಲೀಸ್ ಅಧಿಕಾರಿಗಳು ಸೈಬರ್ ಅಪರಾಧ, ನೈಸರ್ಗಿಕ ವಿಪತ್ತು ಹಾಗೂ ಕಾನೂನು ವ್ಯವಸ್ಥೆಯನ್ನು ಕಾಪಾಡುವಲ್ಲಿ ಕರ್ನಾಟಕ ಪೊಲೀಸ್ ಮಾದರಿಯಾಗಿದ್ದು, ಮಂಡ್ಯ ಜಿಲ್ಲೆಯು ಕೂಡ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಯಶಸ್ವಿಯಾಗಿದೆ ಎಂದು ತಿಳಿಸಿದರು.
ಮಂಡ್ಯ ಮಣ್ಣಿನ ಸೊಬಗು ವಿಶಿಷ್ಟವಾದದ್ದು ಜಿಲ್ಲೆಯನ್ನು ಸ್ವಚ್ಛ ನಗರಿಯನ್ನಾಗಿ ಮಾಡಲಾಗಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯು ಅಧಿಕಾರಿಗಳು ಕರ್ತವ್ಯ ಪಾಲನೆ ಮಾಡಬೇಕು ಎಂದು ತಿಳಿಸಿದರು.

24×7 ಕಾರ್ಯನಿರ್ವಹಿಸುವ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಅಭಿನಂದಿಸಿದರು.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾ ರಾಣಿ ವಿ.ಜೆ. ಮಾತನಾಡಿ, ಏಪ್ರಿಲ್ 2ರಂದು ಕರ್ನಾಟಕ ಪೊಲೀಸ್ ಕಾಯ್ದೆ ಜಾರಿಗೆ ಬಂದ ಪ್ರಯುಕ್ತ ಹಾಗೂ ಪೊಲೀಸ್ ಇಲಾಖೆಯ ದ್ವಿಚಕ್ರವನ್ನು ನೀಡಲಾಗುತ್ತಿದೆ. ಪ್ರತಿ ವರ್ಷ ಏಪ್ರಿಲ್ 2 ರಂದು ಪೊಲೀಸ್ ಧ್ವಜದಿನ ಹಾಗೂ ಪೊಲೀಸ್ ಕಲ್ಯಾಣ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಪ್ರತಿನಿತ್ಯ ದೈಹಿಕ, ಮಾನಸಿಕ ಪರಿಶ್ರಮದಿಂದ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ ಎಲ್ಲಾ ದರ್ಜೆಯ ಪೊಲೀಸ್ ನೌಕರರು ಮತ್ತು ಅಧಿಕಾರಿಗಳ ಸೇವೆಯನ್ನು ಸ್ಮರಿಸಿ ಈ ದಿನದಂದು ಗೌರವಿಸಲಾಗುತ್ತದೆ ಎಂದು ತಿಳಿಸಿದರು.

ಪೊಲೀಸ್ ಧ್ವಜವನ್ನು ಮಾರಾಟ ಮಾಡಿ ಬಂದಂತಹ ಹಣವನ್ನು ನಿಧಿ ರೂಪದಲ್ಲಿ ಸಂಗ್ರಹಿಸಿ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂ ಅಂತ್ಯಸಂಸ್ಕಾರಕ್ಕಾಗಿ ಧನ ಸಹಾಯ ಮಾಡಲಾಗುತ್ತದೆ. ದ್ವಜ ಮಾರಾಟ ಮಾಡಿದ ಮೊತ್ತದಲ್ಲಿ 50% ಮೊತ್ತವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ನಿಧಿ ಖಾತೆಗೆ ಹಾಗೂ 50% ಕೇಂದ್ರ ನಿವೃತ್ತಿ ಕಲ್ಯಾಣ ನಿಧಿಗೆ ಪಾವತಿಸಲಾಗುತ್ತದೆ ಎಂದು ತಿಳಿಸಿದರು.
ದಿನಾಂಕ 01/04/25 ರಿಂದ 31.03.2026 ವರಿಗೆ 27 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇವೆಯಿಂದ ನಿವೃತ್ತಿ ಹೊಂದಿರುತ್ತಾರೆ.
ಕಾರ್ಯಕ್ರಮದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿಗಳಾದ ತಿಮ್ಮಯ್ಯ ಮತ್ತು ಗಂಗಾಧರ್ ಸ್ವಾಮಿ ರವರು ಉಪಸ್ಥಿತರಿದ್ದರು.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
