NEWS

ಎಸ್‌ಆರ್‌ಎಚ್ ಭರ್ಜರಿ ಗೆಲುವು

ಪಾಲನೆ ನ್ಯೂಸ್

ಕೋಲ್ಕತ್ತಾ: ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ 19ನೇ ಸೀಸನ್‌ನ ಆರನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಗುರುವಾರ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 65 ರನ್‌ ಗಳ ಭರ್ಜರಿ ಗೆಲುವು ಸಾಧಿಸಿದೆ.


ಗುರುವಾರ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್, ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಬ್ಯಾಟಿಂಗ್ ಮಾಡಿದ ಹೈದರಾಬಾದ್, ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 226 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.


ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ(48) ಹಾಗೂ ಟ್ರಾವಿಸ್ ಹೆಡ್(46) ಸ್ಪೋಟಕ ಬ್ಯಾಟಿಂಗ್ ಮಾಡಿ, 81 ರನ್ ಗಳ ಜೊತೆಯಾಟ ಆಡಿದರು. ನಂತರ ಹೆನ್ರಿಚ್ ಕ್ಲಾಸನ್ ಅವರ ಅರ್ಧ ಶತಕ(52)ದ ನೆರವಿನಿಂದ ಹೈದರಾಬಾದ್ ತಂಡ 226ರನ್ ಸೇರಿಸಿತು. ಕೋಲ್ಕತ್ತಾ ಪರ ಬ್ಲೆಸ್ಸಿಂಗ್ ಮುಜರಬಾನಿ ಅವರು ಅದ್ಭುತ ಬೌಲಿಂಗ್ ಮಾಡಿ 4 ವಿಕೆಟ್‌ಗಳನ್ನು ಪಡೆದು ಮಿಂಚಿದರು. ಗೆಲುವಿಗೆ 227 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಕೋಲ್ಕತ್ತಾ ನೈಟ್ ರೈಡರ್ಸ್, 16 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಕೇವಲ 161 ರನ್ ಗಳಿಸುವ ಮೂಲಕ ಹೀನಾಯ ಸೋಲು ಅನುಭವಿಸಿತು.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn


Related posts

ಪಶ್ಚಿಮ ಏಷ್ಯಾದ ಯುದ್ಧದ ಕಿಚ್ಚು ಜಾಗತಿಕ ಇಂಧನ ಮಾರುಕಟ್ಟೆಯನ್ನು ತಲ್ಲಣಗೊಳಿಸಿದೆ

ಯುವ ನಿಧಿ ಯೋಜನೆಯ ನೋಂದಣಿ ಕಾರ್ಯಕ್ರಮ

ಮಾರ್ಚ್ 30 ರಂದು ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ.

Leave a Comment