ಪಾಲನೆ ನ್ಯೂಸ್
ಮಂಡ್ಯ: “ಗ್ರಾಮ ಒನ್” ಯೋಜನೆಯು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾಸಿಂಧು ಯೋಜನೆ ಅಡಿಯಲ್ಲಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಯೋಜನೆ ಅಡಿಯಲ್ಲಿ 750 ಕ್ಕೂ ಹೆಚ್ಚು ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುವುದು.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ * ಗ್ರಾಮ ಒನ್* ಯೋಜನೆಯನ್ನು ವಿಸ್ತರಿಸುವ ಸಲುವಾಗಿ ಸದರಿ ಯೋಜನೆಯನ್ನು ಫ್ರಾಂಚೈಸಿಗಳ ಮೂಲಕ ಅನುಷ್ಠಾಗೊಳಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಏಪ್ರಿಲ್ 01 ರಿಂದ ಏಪ್ರಿಲ್ 15 ರವರಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು https://sevasindhuservices.karnataka.gov.in/directApply.do?serviceld=2631 ಆನ್ ಲೈನ್ ಮೂಲಕ ಏಪ್ರಿಲ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn
